ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೃತಪಟ್ಟ ಇಬ್ಬರು ಅಪರಿಚಿತರ ಅಂತ್ಯಸಂಸ್ಕಾರ

ಸಾಂದರ್ಭಿಕ ಚಿತ್ರ
ಉಡುಪಿ: ಪ್ರತ್ಯೇಕ ಪ್ರಕರಣದಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಮೃತಪಟ್ಟ ಇಬ್ಬರು ಅಪರಿಚಿತ ಪುರುಷ ಮೃತದೇಹದ ದಫನ ಕಾರ್ಯವು ಬೀಡಿನಗುಡ್ಡೆಯಲ್ಲಿ ನಡೆಸಲಾಯಿತು.
ಕೆಲವು ದಿನಗಳ ಹಿಂದೆ ಪ್ರತ್ಯೇಕ ಸಮಯದಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಅಪರಿಚಿತ ಪ್ರಯಾಣಿಕರು ಅಸ್ವಸ್ಥರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಚಿಕಿತ್ಸೆಗಾಗಿ ಇಂದ್ರಾಳಿ ರೈಲ್ವೆ ನಿಲ್ದಾಣದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇವರಿಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳನ್ನು ರಕ್ಷಿಸಿಡಲಾಗಿತ್ತು. ವಾರಸುದಾರರು ಪತ್ತೆಯಾಗದೆ ಇರುವುದರಿಂದ ಮಣಿಪಾಲ ಪೋಲಿಸರು ಕಾನೂನು ಪ್ರಕ್ರಿಯೆ ನಡೆಸಿ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ದಫನವನ್ನು ಗೌರಯುತವಾಗಿ ಬೀಡಿನಗುಡ್ಡೆಯಲ್ಲಿ ನಡೆಸಿದರು.
Next Story





