ಗಂಗೊಳ್ಳಿ | ಬೋಟಿನಿಂದ ಬಿದ್ದು ವ್ಯಕ್ತಿ ಮೃತ್ಯು

ಗಂಗೊಳ್ಳಿ : ಬೋಟಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಗುಜ್ಜಾಡಿಯ ಗಣೇಶ ರಾಮಕೃಷ್ಣ ಆಚಾರ್ಯ(43) ಎಂದು ಗುರುತಿಸಲಾಗಿದೆ. ಇವರು ಜೂ.20ರಂದು ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿರುವ ಮಂಜುನಾಥ ಖಾರ್ವಿ ಎಂಬವರ ಬೋಟಿನ ಮರದ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಜೂ.29ರಂದು ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




