Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಹೊಟೇಲ್‌ಗಳಿಗೂ ತಟ್ಟಿದ...

ಉಡುಪಿ ಜಿಲ್ಲೆಯ ಹೊಟೇಲ್‌ಗಳಿಗೂ ತಟ್ಟಿದ ಗ್ಯಾಸ್ ಬಿಸಿ !

ವಾರ್ತಾಭಾರತಿವಾರ್ತಾಭಾರತಿ11 March 2026 8:13 PM IST
share
ಉಡುಪಿ ಜಿಲ್ಲೆಯ ಹೊಟೇಲ್‌ಗಳಿಗೂ ತಟ್ಟಿದ ಗ್ಯಾಸ್ ಬಿಸಿ !
► ಹಲವು ಹೊಟೇಲುಗಳು ಬಂದ್ ► 2-3 ದಿನಗಳಲ್ಲಿ ಬಹುತೇಕ ಸ್ಥಗಿತ

ಉಡುಪಿ, ಮಾ.11: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಜಿಲ್ಲೆಯ ಹಲವು ಸಣ್ಣ ಸಣ್ಣ ಹೊಟೇಲುಗಳು ಹಾಗೂ ಕ್ಯಾಂಟಿನ್‌ಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿರುವುದು ವರದಿಯಾಗಿದೆ.

ಕೆಲವು ಗ್ಯಾಸ್ ವಿತರಕರು ವಾಣಿಜ್ಯ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿರುವ ಬಗ್ಗೆ ಸೂಚನೆ ನೀಡಿದ್ದು, ಇದು ಹೊಟೇಲ್ ಉದ್ಯಮ, ಪ್ರವಾಸೋದ್ಯಮ, ಶುಭ ಸಮಾರಂಭಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಇದರಿಂದ ವ್ಯವಹಾರಗಳು ಸ್ಥಗಿತಗೊಂಡು ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುವ ಆತಂಕ ಎದುರಾಗಿದೆ.

‘ಯುದ್ಧ ಪರಿಣಾಮ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹೊಟೇಲ್ ಉದ್ಯಮದ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಇದರ ಬಿಸಿ ಪ್ರವಾಸೋದ್ಯಮಕ್ಕೂ ತಟ್ಟುತ್ತಿದೆ. ನಮಗೆ ಪ್ರತಿದಿನ 2-3 ವಾಣಿಜ್ಯ ಸಿಲಿಡಂರ್‌ ಗಳ ಅಗತ್ಯ ಇರುತ್ತದೆ. ಆದರೆ ನಿನ್ನೆ ಕೇವಲ ಎರಡು ಸಿಲಿಂಡರ್ ಮಾತ್ರ ಪೂರೈಕೆಯಾಗಿದೆ. ಇಂದು ಇನ್ನೂ ಯಾವುದೇ ಸಿಲಿಂಡರ್ ಬಂದಿಲ್ಲ. ಹೀಗೆ ಮುಂದುವರೆದರೆ ನಾವು ಕೂಡ ಹೊಟೇಲ್ ಬಂದ್ ಮಾಡ ಬೇಕಾಗುತ್ತದೆ. ಆದುದರಿಂದ ಪ್ರಧಾನ ಮಂತ್ರಿ ಕೂಡಲೇ ಮಧ್ಯ ಪ್ರವೇಶಿಸಿ ಈ ಸಮಸ್ಯೆಗೆ ಸ್ಪಂದಿಸಬೇಕು ಎಂದು ಹೊಟೇಲ್ ಉದ್ಯಮಿ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಹೊಟೇಲುಗಳ ಸಂಘದ ರಾಜ್ಯ ಉಪಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯಿಸಿ, ಉಡುಪಿ ಜಿಲ್ಲೆಯಲ್ಲಿ ಸಣ್ಣಪುಟ್ಟ ಸೇರಿದಂತೆ ಒಟ್ಟು 2500 ಹೊಟೇಲ್‌ಗಳಿವೆ. ಪ್ರಸ್ತುತ ಇವುಗಳಿಗೆ ಒಂದೆರೆಡು ಸಿಲಿಂಡರ್ ಪೂರೈಕೆ ಮಾಡುವುದಾದರೂ ಪ್ರತಿದಿನ 5000 ಸಿಲಿಂಡರ್ ಬೇಕಾಗುತ್ತದೆ. ಆದರೆ ಆ ಪ್ರಮಾಣದಲ್ಲಿ ಸಿಲಿಂಡರ್ ಪೂರೈಕೆ ಆಗುತ್ತಿಲ್ಲ. ಆದುದರಿಂದ ಎರಡು ಮೂರು ದಿನಗಳಲ್ಲಿ ಬಹುತೇಕ ಹೊಟೇಲ್‌ಗಳು ಬಂದ್ ಆಗುವ ಸಾಧ್ಯತೆ ಇವೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಕೆಲವು ಸಣ್ಣ ಹೊಟೇಲುಗಳು ಬೆಳಗ್ಗೆಯಿಂದಲೇ ಬಾಗಿಲು ಮುಚ್ಚಿ ವ್ಯವಹಾರ ಸ್ಥಗಿತಗೊಳಿಸಿದರೆ, ಇನ್ನು ಕೆಲವು ಹೊಟೇಲುಗಳು ಮಧ್ಯಾಹ್ನದ ವರೆಗೆ ಮಾತ್ರ ವ್ಯವಹಾರ ನಡೆಸಿದೆ. ಇನ್ನು ಕೆಲವು ಸಂಜೆಯ ಬಳಿಕ ಬಂದ್ ಮಾಡಿರುವುದು ಕಂಡುಬಂದಿದೆ. ಇದೆಲ್ಲವೂ ಜನಸಾಮಾನ್ಯರ ಮೇಲೆ ಭಾರೀ ಪರಿಣಾಮ ಬೀರುತ್ತಿದೆ.

‘ಗ್ಯಾಸ್ ಕೊರತೆಯಿಂದ ಬಡವರು, ಮಾಧ್ಯಮ ವರ್ಗದವರು ನಡೆಸುತ್ತಿ ರುವ ಹೊಟೇಲ್, ಕ್ಯಾಂಟಿನ್‌ಗಳಿಗೆ ದೊಡ್ಡೆ ಹೊಡೆತ ಬೀಳುತ್ತಿವೆ. ಇದರಿಂದ ಇವರೆಲ್ಲ ಉದ್ಯೋಗ ಇಲ್ಲದೆ ಅಪಾರ ನಷ್ಟ ಅನುಭವಿಸುವ ಸಾಧ್ಯತೆ ಇದೆ. ಈಗ ವಾಣಿಜ್ಯ, ಮುಂದೆ ಗೃಹ ಬಳಕೆ, ನಂತರ ಆಸ್ಪತ್ರೆಯ ಆಕ್ಸಿಜನ್ ಗ್ಯಾಸ್ ಗಳಿಗೂ ಪರದಾಡುವ ಸ್ಥಿತಿ ಎದುರಾಗ ಬಹುದು ಎಂದು ಹೊಟೇಲ್ ಮಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.

"ಜಿಲ್ಲೆಯ ಕೆಲವು ಹೊಟೇಲ್‌ಗಳಲ್ಲಿ ಮೆನು ಬದಲಾಯಿಸಲಾಗಿದೆ. ದೋಸೆಗೆ ಹೆಚ್ಚು ಗ್ಯಾಸ್ ಬಳಕೆಯಾಗುವುದರಿಂದ ಅವುಗಳನ್ನು ಮೆನುಗಳಿಂದ ಕೈಬಿಡಲಾಗಿದೆ. ಇದೀಗ ಬಹುತೇಕ ಹೊಟೇಲುಗಳು ಟೀ ಕಾಫಿಗಳಿಗೆ ಮಾತ್ರ ಸೀಮಿತವಾಗಿದೆ. ಮುಖ್ಯವಾಗಿ ವೆಜ್ ಹೊಟೇಲುಗಳು ನಾಳೆಯಿಂದ ವ್ಯವಹಾರ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಈ ಸಂಬಂಧ ನಮ್ಮ ಅಸೋಸಿಯೇಶನ್ ವತಿಯಿಂದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಈ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಿದ್ದೇವೆ".

-ತಲ್ಲೂರು ಶಿವರಾಮ ಶೆಟ್ಟಿ, ರಾಜ್ಯ ಉಪಾಧ್ಯಕ್ಷರು, ಹೊಟೇಲ್‌ಗಳ ಸಂಘ

Tags

GasLackhitshotelsUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X