Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲೆಯಲ್ಲಿ ಉದ್ಯೋಗಾವಕಾಶದ ಘಟಕಗಳಿಗೆ...

ಜಿಲ್ಲೆಯಲ್ಲಿ ಉದ್ಯೋಗಾವಕಾಶದ ಘಟಕಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಬ್ಯಾಂಕುಗಳಿಗೆ ಕೇಂದ್ರ ಸಚಿವೆ ಶೋಭಾ ಸಲಹೆ

ಬ್ಯಾಂಕುಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ25 Sept 2023 9:39 PM IST
share
ಜಿಲ್ಲೆಯಲ್ಲಿ ಉದ್ಯೋಗಾವಕಾಶದ ಘಟಕಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಬ್ಯಾಂಕುಗಳಿಗೆ ಕೇಂದ್ರ ಸಚಿವೆ ಶೋಭಾ ಸಲಹೆ

ಉಡುಪಿ, ಸೆ.25: ಜಿಲ್ಲೆಯ ಯುವಜನತೆಗೆ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಅವಕಾಶವಿರುವ ಆಹಾರ ಸಂಸ್ಕರಣಾ ಘಟಕ, ಆಹಾರ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳ ಸ್ಥಾಪನೆಗೆ ಆರ್ಥಿಕ ನೆರವಿನ ಮೂಲಕ ವಿಶೇಷ ಉತ್ತೇಜನ ನೀಡುವಂತೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬ್ಯಾಂಕ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಸೋಮವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ನೇತೃತ್ವದಲ್ಲಿ ನಡೆದ ಬ್ಯಾಂಕುಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರಸನ್ನ ಎಚ್. ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೃಷಿ ಮೂಲಸೌಕರ್ಯ ಯೋಜನೆಗಳಲ್ಲಿ ಬ್ಯಾಂಕುಗಳು ಗೋಡೌನ್ ನಿರ್ಮಾಣಕ್ಕೆ ಹೆಚ್ಚಿನ ನೆರವು ನೀಡುತ್ತಿರುವ ಬಗ್ಗೆ ತಿಳಿದ ಸಚಿವೆ, ಬ್ಯಾಂಕುಗಳು ಗೋಡೌನ್ ನಿರ್ಮಾಣಕ್ಕಿಂತ ಹೆಚ್ಚು ಸ್ವಉದ್ಯೋಗ ನೀಡುವ ಆಹಾರ ಸಂಸ್ಕರಣಾ ಘಟಕ, ಸ್ಟಾರ್ಟ್‌ಅಪ್ ಹಾಗೂ ಹಣ್ಣುಹಂಪಲು, ಆಹಾರ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಘಟಕಗಳ ಪ್ರಾರಂಭಕ್ಕೆ ಉತ್ತೇ ಜನ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಮಲ್ಲಿಗೆಯಿಂದ ಎಣ್ಣೆ ತಯಾರಿಸುವ ಘಟಕದ ಸ್ಥಾಪನೆಗೆ ಪ್ರೋತ್ಸಾಹಿಸಿ ವಿದೇಶಗಳಿಗೆ ರಫ್ತು ಮಾಡಲು ಉತ್ತೇಜನ ನೀಡಬಹುದು. ತೆಂಗು, ಗೊಡಂಬಿ ಅಧಾರಿತ ಸ್ಟಾರ್ಟ್‌ಅಪ್, ಎಫ್‌ಪಿಒಗಳ ಪ್ರಾರಂಭಕ್ಕೂ ಗಮನಹರಿಸ ಬಹುದು ಎಂದರು.

ಮೀನುಗಾರಿಕೆಯಲ್ಲೂ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಲು ಹೆಚ್ಚಿನ ಸಾಲಗಳನ್ನು ವಿತರಿಸಲು ಆದ್ಯತೆ ನೀಡ ಬೇಕು. ಜಿಲ್ಲೆಯಲ್ಲಿ ಮೀನು ಉತ್ಪಾದನೆ ಹೇರಳವಾಗಿದ್ದರೂ, ಇಲ್ಲಿಂದ ನೇರವಾಗಿ ವಿದೇಶಗಳಿಗೆ ರಫ್ತಾಗದೇ ನೆರೆ ರಾಜ್ಯ ವಾದ ಕೇರಳಕ್ಕೆ ತೆರಳಿ ಅಲ್ಲಿಂದ ವಿದೇಶಗಳಿಗೆ ಹೋಗುತ್ತಿದೆ. ಇದನ್ನು ತಪ್ಪಿಸಿ, ಇಲ್ಲಿನ ಉತ್ಪನ್ನಗಳನ್ನು ಇಲ್ಲಿಂದಲೇ ನೇರವಾಗಿ ಹೊರದೇಶ ಗಳಿಗೆ ರಫ್ತಾಗುವಂತೆ ಬ್ಯಾಂಕುಗಳ ಉತ್ತೇಜನ ನೀಡಬೇಕು ಎಂದರು.

ಬ್ಯಾಂಕು ಜನಸ್ನೇಹಿಯಾಗಿರಬೇಕು: ಬ್ಯಾಂಕ್‌ಗಳು ಜನಸ್ನೇಹಿಯಾಗಿ ಗ್ರಾಹಕರೊಂದಿಗೆ ವ್ಯವಹರಿಸಬೇಕು. ಸರಕಾರದ ಯೋಜನೆಗಳ ಫಲಾನುಭವಿ ಗಳು ಆರ್ಥಿಕ ನೆರವನ್ನು ಕೋರಿ ಬಂದ ಅರ್ಜಿಗಳನ್ನು ವಿಳಂಬವಿಲ್ಲದೇ ವಿಲೇವಾರಿ ಮಾಡ ಬೇಕು. ಅವರನ್ನು ಅನಗತ್ಯವಾಗಿ ಬ್ಯಾಂಕ್‌ಗಳಿಗೆ ಅಲೆದಾಡಿಸದೇ ನಿಯಮಾನುಸಾರ ವಿಲೇವಾರಿ ಮಾಡಿ, ಶೀಘ್ರವೇ ನೆರವನ್ನು ಕಲ್ಪಿಸಬೇಕು. ಒಂದು ವೇಳೆ ಸಾಲ ನೀಡಲು ಸಾಧ್ಯವಿಲ್ಲದಿದ್ದರೆ, ಸಕಾರಣ ದೊಂದಿಗೆ ಒಂದೆರಡು ಭೇಟಿಯೊಳಗೆ ಅವರಿಗೆ ನೇರವಾಗಿ ತಿಳಿಸಿ ಎಂದರು.

ಸರಕಾರದ ಸಬ್ಸಿಡಿ ಆಧಾರಿತ ಯೋಜನೆಗಳ ಆಯ್ಕೆಯಾಗಿ ವಿವಿಧ ಇಲಾಖೆಗಳಿಂದ ಬಂದ ಫಲಾನುಭವಿಗಳು ಇದರ ಲಾಭ ಪಡೆಯಲು ಬ್ಯಾಂಕ್‌ಗಳಿಗೆ ಯಾವೆಲ್ಲಾ ನಿಖರ ದಾಖಲೆಗಳನ್ನು ಹಾಜರುಪಡಿಸಬೇಕು, ಯಾವ ಕಾರಣಕ್ಕೆಲ್ಲಾ ಅರ್ಜಿ ಗಳನ್ನು ತಿರಸ್ಕರಿಸಲಾಗುತ್ತದೆ ಎಂಬ ಸವಿವರವಾದ ಮಾಹಿತಿಗಳನ್ನು ಗ್ರಾಮ ಪಂಚಾಯತ್ ಕಚೇರಿಯ ಸೂಚನಾ ಫಲಕಗಳಲ್ಲಿ ಹಾಗೂ ಕರಪತ್ರಗಳ ಮೂಲಕ ಪ್ರದರ್ಶಿಸಿದ್ದಲ್ಲಿ ವಿನಾಕಾರಣ ಗೊಂದಲಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.

ಮುದ್ರಾ ಸಾಲ ಯೋಜನೆ: ಮುದ್ರಾ ಸಾಲ ಯೋಜನೆಯ ಕುರಿತಂತೆ ಸಾರ್ವಜನಿಕರಿಂದ ಬಹಳಷ್ಟು ದೂರುಗಳು ಕೇಳಿ ಬರುತ್ತಿವೆ. ಸಾಲ ಸೌಲಭ್ಯ ಸ್ಥಗಿತವಾಗಿದೆ ಎಂಬುದಾಗಿ ಬ್ಯಾಂಕ್ ಅಧಿಕಾರಿಗಳು ಗ್ರಾಹಕರಿಗೆ ತಪು ಮಾಹಿತಿ ನೀಡುತ್ತಿ ದ್ದಾರೆ. ಯೋಜನೆಯಡಿ ಸಲ್ಲಿಸಿದ ಅರ್ಜಿಗಳಲ್ಲಿ ಬಹುಪಾಲು ತಿರಸ್ಕರಿಸಲ್ಪಡುತ್ತಿವೆ ಎಂಬ ದೂರು ಇದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಚಿವರು ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚನೆ ನೀಡಿದರು.

ಪ್ರಸ್ತುತ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ಬಲ್ಲವರ ಸಂಖ್ಯೆ ಕಡಿಮೆಯಾಗಿದ್ದು, ಇದರಿಂದ ಗ್ರಾಮೀಣ ಭಾಗದ ಜನಸಾಮಾನ್ಯರು ಬ್ಯಾಂಕುಗಳಲ್ಲಿ ದೈನಂದಿನ ವ್ಯವಹಾರದಲ್ಲಿ ಭಾರೀ ತೊಂದರೆ ಎದುರಿಸು ತಿದ್ದಾರೆ ಎಂದ ಸಚಿವರು, ಸ್ಥಳಿಯ ಭಾಷೆ ಬಾರದ ಅಧಿಕಾರಿಗಳು ದುಭಾಷಿಗಳನ್ನು ನೇಮಿಸಿಕೊಳ್ಳಬೇಕು. ಬ್ಯಾಂಕ್ ಉದ್ಯೋಗಕ್ಕೆ ಹೆಚ್ಚೆಚ್ಚು ಸ್ಥಳೀ ಯರು ನೇಮಕಗೊಳ್ಳುವ ನಿಟ್ಟಿನಲ್ಲಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಬಹುದು ಎಂದರು.

ಜಿಲ್ಲೆಯಲ್ಲಿ ಒಟ್ಟು ವ್ಯವಹಾರ 52,675 ಕೋಟಿ ರೂ. ಗಳಿಗೆ ಏರಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 4386 ಕೋಟಿ ರೂ. ಹೆಚ್ಚಾಗಿದೆ. ಈ ಮೂಲಕ ಶೇ. 9.08ರಷ್ಟು ಪ್ರಗತಿ ಸಾಧಿಸಲಾಗಿದೆ ಆದರೆ ಠೇವಣಿ-ಸಾಲ ಅನುಪಾತ ಶೇ.1.03ರಷ್ಟು ಕುಸಿತ ಕಂಡಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಪಿ.ಎಂ.ಪಿಂಜಾರ ವಿವರಿಸಿದರು.

ಪಿಎಂ ಸ್ವನಿಧಿಯಲ್ಲಿ ಅಗ್ರಸ್ಥಾನ: ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕ್‌ಗಳು ಶೇ.108ರಷ್ಟು ಪ್ರಗತಿ ಸಾಧಿಸಿವೆ. 173ರಷ್ಟು ಸಾಲದ ಗುರಿ ಇದ್ದು, 187 ಮಂದಿಗೆ 20.41 ಕೋಟಿ ರೂ.ಗಳಷ್ಟು ಉದ್ಯೋಗ ಸಾಲವಾಗಿ ನೀಡಲಾಗಿದೆ ಎಂದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿಯಲ್ಲಿ 2819 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಗುರಿ ಹೊಂದಿ, ಮೊದಲನೇ ಹಂತದಲ್ಲಿ 4162 ಜನರಿಗೆ ಸಾಲ ವಿತರಿಸಿ, ರಾಜ್ಯದಲ್ಲಿಯೇ ಈ ಯೋಜನೆ ಅನುಷ್ಠಾನದಲ್ಲಿ ಮೊದಲನೇ ಸ್ಥಾನದಲ್ಲಿದೆ. ಎರಡನೇ ಹಂತದಲ್ಲಿ 2101 ಜನರಿಗೆ ಸಾಲ ವಿತರಿಸುವ ಗುರಿ ಇದ್ದು, ಈಗಾಗಲೇ 1702 ಜನರಿಗೆ ಸಾಲ ವಿತರಿಸಲಾಗಿದೆ ಎಂದರು.

ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಜಿಪಂ ಸಿಇಒ ಪ್ರಸನ್ನ ಎಚ್., ಆರ್‌ಬಿಐ ಅಧಿಕಾರಿ ತನು ನಂಜಪ್ಪ, ನಬಾರ್ಡ್ ಡಿಜಿಎಂ ಸಂಗೀತ ಕರ್ತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪಿ.ಎಂ.ಪಿಂಜಾರ ಅಲ್ಲದೇ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳಾದ ಮನೋಜ್ ಸಾಲ್ಯಾನ್, ರಾಜ್‌ಗೋಪಾಲನ್, ನಿತ್ಯಾನಂದ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X