ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮುಸ್ಲಿಮರಿಗೆ ನೀಡಿ: ಹಬೀಬ್ ಅಲಿ
ಉಡುಪಿ, ಜು.23: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯದ ಮುಖಂಡರಿಗೆ ನೀಡಬೇಕೆಂದು ಕೆಪಿಸಿಸಿ ಸಂಯೋಜಕ ಹಬೀಬ್ ಅಲಿ ಆಗ್ರಹಿಸಿದ್ದಾರೆ.
ಕರಾವಳಿ ಭಾಗದ ಉದ್ದಗಲಕ್ಕು ಮುಸ್ಲಿಂ ಸಮುದಾಯದ ಜನಸಂಖ್ಯೆಯು ವ್ಯಾಪಕವಾಗಿದೆ. ಅದಲ್ಲದೆ ಹಲವಾರು ವರ್ಷ ಗಳಿಂದ ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಮುಸ್ಲಿಂ ಸಮುದಾಯಕ್ಕೆ ಯಾವುದೇ ಅವಕಾಶ ಸಿಗಲಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





