Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕಾರ್ಕಳದ...

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಪದವಿ ಪೂರ್ವ ಕಾಲೇಜು

ವಾರ್ತಾಭಾರತಿವಾರ್ತಾಭಾರತಿ22 Nov 2023 11:09 PM IST
share
ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಪದವಿ ಪೂರ್ವ ಕಾಲೇಜು

ಕಾರ್ಕಳ: ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ ಪಿ ಶೆಣೈ ತಿಳಿಸಿದ್ದಾರೆ.

ದೇವಳದ ಮೊಕೇಸ್ತರ ಮಂಡಳಿಯವರು 1911ರಲ್ಲಿ ಸ್ತ್ರೀ ಶಿಕ್ಷಣಕ್ಕೆ ಆದ್ಯತೆ ನೀಡಿ ಹಿಂದೂ ಬಾಲಿಕಾ ಪಾಠ ಶಾಲೆಯನ್ನು ಪ್ರಾರಂಭಿಸಿರುವುದು ಒಂದು ಅವಿಸ್ಮರಣೀಯ ಐತಿಹಾಸಿಕ ಘಟನೆ. ವಿದ್ಯಾಭಿಮಾನಿಗಳ ಉದಾರ ಕೊಡುಗೆ, ಸಮಸ್ತ ಅಧ್ಯಾಪಕ, ಅಧ್ಯಾಪಕೇತರರ ಸಾರ್ಥಕ ನಿಷ್ಠಾಪೂರ್ಣ ಸೇವೆ, ವಿದ್ಯಾರ್ಥಿಗಳ ಶಿಸ್ತು, ಕಲಿಕೆ ಇವುಗಳಿಂದ ಈ ವಿದ್ಯಾಸಂಸ್ಥೆಯು ಒಂದು ನೂರು ವರ್ಷಗಳ ಯಶಸ್ವಿ ವಿದ್ಯಾಸೇವೆಯನ್ನು 2011 ರಲ್ಲಿ ಪೂರ್ತಿಗೊಳಿಸಿರುವುದು ಸ್ತ್ರೀ ಶಿಕ್ಷಣ ವಿದ್ಯಾಕ್ಷೇತ್ರದಲ್ಲಿಯೇ ಒಂದು ಅಪೂರ್ವ ಸಾಧನೆಯಾಗಿದೆ ಎಂದು ಅವರು ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಸಂಸ್ಥೆಯಲ್ಲಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, 1944 ರಲ್ಲಿ ಕನ್ನಡ ಮಾಧ್ಯಮ ಎಸ್.ವಿ.ಟಿ. ಬಾಲಿಕಾ ಪ್ರೌಢಶಾಲೆ, 1970 ರಲ್ಲಿ ಒಂದು ವರ್ಷದ ಬಾಲಿಕಾ ಪದವಿ ಪೂರ್ವ ವಿಭಾಗ, 1972 ರಲ್ಲಿ ಎರಡು ವರ್ಷದ ಸಂಯುಕ್ತ ಪದವಿ ಪೂರ್ವ ವಿಭಾಗವಾಗಿ ಪದೋನ್ನತಿ ಹೊಂದಿತು. 1988 ರಲ್ಲಿ ಎಸ್.ವಿ. ಮಹಿಳಾ ಪದವಿ ಕಾಲೇಜು ಪ್ರಾರಂಭಗೊಂಡಿತು. ಹಾಗೆಯೇ ಸಂಸ್ಥೆಯಲ್ಲಿ 2015 ರಲ್ಲಿ ನರ್ಸರಿ ಹಂತದಿಂದ 10 ನೇ ತರಗತಿಯವರೆಗೆ ರಾಜ್ಯ ಪರಿಪಠ್ಯ ಕ್ರಮದಂತೆ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭವಾಯಿತು. ಶ್ರೀ ದೇವಳದ ಸಂಪೂರ್ಣ ಸಹಕಾರ ಹಾಗೂ ಶ್ರೀ ವೆಂಕಟರಮಣ ಎಜ್ಯುಕೇಶನ್ ಟ್ರಸ್ಟ್ (ರಿ) ಇದರ ಸಮರ್ಥ ನಾಯಕತ್ವದಲ್ಲಿ ಸಂಸ್ಥೆ ಸುಸಜ್ಜಿತ ಕಟ್ಟಡದ ಜೊತೆಗೆ ಎಲ್ಲಾ ಮೂಲ ಸೌಕರ್ಯಗಳನ್ನು ಹೊಂದಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ನುರಿತ ಬೋಧಕ, ಬೋಧಕೇತರ ವೃಂದದವರಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಯಲ್ಲಿ ಕೈಜೋಡಿಸುತ್ತಿದ್ದಾರೆ. ಸಂಸ್ಥೆಯಲ್ಲಿ ಸುಸಜ್ಜಿತ ಕ್ರೀಡಾಂಗಣ, ವಿಶಾಲವಾದ ಸಭಾಂಗಣ, ಅತ್ಯುತ್ತಮ ಅಕ್ಷರದಾಸೋಹ ವ್ಯವಸ್ಥೆ, ಭೋಜನ ಶಾಲೆ ಇದ್ದು, ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ. ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಅಪೂರ್ವ ಸಾಧನೆಗಳನ್ನು ಮಾಡಿ ಸಂಸ್ಥೆಯ ಉನ್ನತಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕ್ರೀಡಾಕ್ಷೇತ್ರದಲ್ಲಿ ನಮ್ಮ ಅನೇಕ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆಗೈದು ಸಂಸ್ಥೆಯ ಕೀರ್ತಿ ಶಿಖರವನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದ್ದಾರೆ. ಪ್ರಸಕ್ತ ವರ್ಷ ಸಂಸ್ಥೆಯಲ್ಲಿ ನೂತನವಾಗಿ ಕಾರ್ಕಳ ಮೀರಾ ಕಾಮತ್ ಮೆಮೋರಿಯಲ್ ಗಣಕಯಂತ್ರ ಪ್ರಯೋಗಾಲಯ ಸಿದ್ದಗೊಂಡಿದ್ದು, 2024-25 ರ ಸಾಲಿನಲ್ಲಿ (ಮುಂದಿನ ಶೈಕ್ಷಣಿಕ ವರ್ಷ) ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯದೊಂದಿಗೆ ನೂತನ ಸಂಯೋಜನೆ ಪ್ರಾರಂಭವಾಗಲಿದೆ. ಸಂಸ್ಥೆಯ ಹಲವಾರು ಹಳೆ ವಿದ್ಯಾರ್ಥಿಗಳು ಇಂದು ಬೇರೆ ಬೇರೆ ಕ್ಷೇತ್ರದಲ್ಲಿ ಅತ್ಯುತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದು, ಇದು ನಮಗೆಲ್ಲಾ ಧನ್ಯತಾ ಭಾವವನ್ನು ಮೂಡಿಸುತ್ತದೆ ಎಂದು ಕೆ ಪಿ ಶೆಣೈ ತಿಳಿಸಿದರು.

ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಆಡಳಿತ ಮಂಡಳಿಯು ನಿರ್ಧರಿಸಿದ್ದು, ನವೆಂಬರ್ 26 ರಿಂದ ಡಿಸೆಂಬರ್ 01 ರ ವರೆಗೆ “ಸುವರ್ಣ ಸಂಭ್ರಮ" ಆಚರಣೆಯನ್ನು ಹಮ್ಮಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X