Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಕೃಷಿಕರು ತಮ್ಮ ಉತ್ಪನ್ನಗಳ...

"ಕೃಷಿಕರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಿ": ‘ಉಡುಪಿ ರಾಜಬಾಳೆ ಗಿಡ’ ಅನಾವರಣಗೊಳಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಉಡುಪಿಯಲ್ಲಿ ರಾಷ್ಟ್ರ ಮಟ್ಟದ ಬಾಳೆ ಮೇಳ ‘ಕದಳೀ ವಿಶ್ವದರ್ಶನ’

ವಾರ್ತಾಭಾರತಿವಾರ್ತಾಭಾರತಿ29 Nov 2026 10:05 PM IST
share
ಕೃಷಿಕರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಿ: ‘ಉಡುಪಿ ರಾಜಬಾಳೆ ಗಿಡ’ ಅನಾವರಣಗೊಳಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಉಡುಪಿ: ಕೃಷಿಕರು ತಾವು ಬೆಳೆದ ಉತ್ಪನ್ನಗಳ ಮೌಲ್ಯವರ್ಧನೆಗೆ ವಿಶೇಷ ಒತ್ತು ನೀಡುವ ಮೂಲಕ ಮಾರುಕಟ್ಟೆಯನ್ನು ವಿಸ್ತರಿಸಲು ಗಮನ ಹರಿಸುವಂತೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಉಡುಪಿಯ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಇಂದಿನಿಂದ ಪ್ರಾರಂಭಗೊಂಡ ಮೂರು ದಿನಗಳ ರಾಷ್ಟ್ರ ಮಟ್ಟದ ಬಾಳೆ ಮೇಳ ‘ಕದಳೀ ವಿಶ್ವದರ್ಶನ’ದಲ್ಲಿ ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ, ‘ಉಡುಪಿ ರಾಜಬಾಳೆ ಗಿಡ’ ಎಂದು ನಾಮಕರಣ ಮಾಡಿದ ವಿಶಿಷ್ಟ ಗುಣ, ಪೌಷ್ಠಿಕಾಂಶಭರಿತ ಫಲಭರಿತ ಬಾಳೆ ತಳಿಯನ್ನು ಅನಾವರಣಗೊಳಿಸಿ ಅವರು ಮಾತನಾಡುತಿದ್ದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ನೂರಾರು ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿರುವ ಅಷ್ಟಮಠಗಳ ಪರ್ಯಾಯ ಸಂಪ್ರದಾಯ ಹಾಗೂ ಅದರ ಪೂರ್ವಸಿದ್ಧತೆ, ಧಾರ್ಮಿಕ ವಿಧಿವಿಧಾನ ವೈಜ್ಞಾನಿಕ ಅಂಶಗಳ ಕುರಿತು ತನಗೆ ಇಂದಷ್ಟೇ ತಿಳಿಯಿತು. ಕರಾವಳಿಯಲ್ಲಿ ಮೂಲ ಸಂಸ್ಕೃತಿ ಮತ್ತು ಸಂಪ್ರದಾಯ ಗಳು ಈಗಲೂ ಉಳಿದುಕೊಂಡು ಬರುತ್ತಿರುವುದು ಅತೀವ ಹೆಮ್ಮೆಯ ಸಂಗತಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಆರ್ಥಿಕ ರಂಗವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರುತಿದ್ದರೂ, ನೀಡುತ್ತಿರುವ ಸಬ್ಸಿಡಿಗಳಿಂದ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಎಷ್ಟಮಟ್ಟಿಗೆ ಅನುಕೂಲವಾಗಿದೆ ಎಂಬ ಬಗ್ಗೆ ಆತ್ಮಾವಲೋಕನದ ಅಗತ್ಯವಿದೆ ಎಂದರು.

ಸೋದೆ ಶ್ರೀಗಳು ಮೊದಲ ಬಾರಿಗೆ ಬಾಳೆ ಮೇಳವನ್ನು ಆಯೋಜಿಸುವ ಮೂಲಕ ಬಾಳೆಹಣ್ಣಿನ ಹಿಂದಿನ ಶಕ್ತಿಯನ್ನು ನಾಡಿಗೆ ಪರಿಚಯಿಸುತಿದ್ದಾರೆ. ಮೇಳದಲ್ಲಿ ನೂರಾರು ಬಾಳೆ ತಳಿಗಳನ್ನು ಪ್ರದರ್ಶಿಸಿರುವುದನ್ನು ನಾನು ನೋಡಿದ್ದೇನೆ. ನಾನೂ ಜಿ 7 ಬಾಳೆ ತಳಿಯನ್ನು ಬೆಳೆಯುತಿದ್ದೇನೆ. ಆದರೆ ಉತ್ಪನ್ನ ಹೆಚ್ಚಾಗುತ್ತಿಲ್ಲ. ಬಾಳೆಯ ಮೌಲ್ಯವರ್ಧಿತ ಉತ್ಪನ್ನಗಳನ್ನು ವೀಕ್ಷಿಸಿದ್ದೇನೆ. ಈ ಬಗ್ಗೆ ಬಾಳೆ ಬೆಳೆಯುವ ರೈತರಿಗೆ, ಜನರಿಗೆ ವ್ಯಾಪಕ ಅರಿವು ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಬಾಳೆ ಮೇಳವನ್ನು ಪಲಿಮಾರು ಮಠದ ಶ್ರೀಗಳಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಇದೇ ವೇಳೆ ಬಾಳೆಹಣ್ಣಿನ ಕುರಿತ ‘ಕದಳೀ ವನಂ’ ಪುಸ್ತಕ ಹಾಗೂ ಬಾಳೆಹಣ್ಣಿನ ಐಸ್‌ಕ್ರೀಮ್‌ನ್ನು ಬಿಡುಗಡೆಗೊಳಿಸಲಾಯಿತು.

ಪ್ರಾಸ್ತಾವಿಕ ಮಾತುಗಳೊಂದಿಗೆ ಆಶೀರ್ವಚನ ನೀಡಿ ಮಾತನಾಡಿದ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಬಾಳೆಹಣ್ಣು ನಮ್ಮೆಲ್ಲಾ ಮಂಗಳಕಾರ್ಯದಲ್ಲಿ ಕಡ್ಡಾಯವಾಗಿ ಇರಬೇಕಾದ ಫಲವಾಗಿದೆ. ಗಡ್ಡೆಯ ಮೂಲಕ ಬೆಳೆಯುವ ಬಾಳೆಹಣ್ಣು ಎಲ್ಲಾ ದೇವರಿಗೂ ಸಮರ್ಪಿತವಾಗುತ್ತದೆ. ಬಾಳೆಹಣ್ಣಿನ ಮಹತ್ವ, ಅದರ ಗುಣವೈಶಿಷ್ಟಗಳ ಕುರಿತು ಜನತೆಗೆ ಅರಿವು ಮೂಡಿಸಿ ಅವರು ಹೆಚ್ಚೆಚ್ಚು ಬಳಸುವಂತೆ ಮಾಡುವ ಉದ್ದೇಶದಿಂದ ಮೂರು ದಿನಗಳ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಇಂಥ ಕಾರ್ಯಕ್ರಮಗಳನ್ನು ನಾಡಿನ ಪ್ರತಿ ಊರಿನಲ್ಲೂ ಮಾಡಬೇಕು. ವಿವಿಧ ತಳಿಗಳನ್ನು ಜನರಿಗೆ ಪರಿಚಯಿಸಿ ಅದರ ಜನಪ್ರಿಯತೆಯನ್ನು ಹೆಚ್ಚಿಸಿ, ಬಡವರ ಈ ಹಣ್ಣನ್ನು ಎಲ್ಲರೂ ಬಳಸುವಂತೆ ಮಾಡಬೇಕು. ಬಾಳೆಗಿಡ ಸರ್ವಸ್ವವೂ ಬಳಕೆಗೆ ಯೋಗ್ಯವಾಗಿದೆ ಈ ಕುರಿತೂ ಜನರಿಗೆ ಅರಿವು ಮೂಡಿಸಬೇಕು ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಇಸ್ರೇಲ್‌ನ ರಾಯಭಾರಿ ಕಚೇರಿಯ ದಕ್ಷಿಣ ಭಾರತದ ಸಹಾಯಕ ಕೌನ್ಸಿಲ್ ಜನರಲ್ ಮ್ಯಾಕ್ಸಿಮ್ ಶ್ಮಗಿನ್, ದಕ್ಷಿಣ ಕನ್ನಡದ ಸಂಸದ ಕ್ಯಾ.ಬೃಜೇಶ್ ಚೌಟ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಬಾಳೆ ಮೇಳ ಆಯೋಜನೆಯ ರೂವಾರಿ, ಕೃಷಿ ತಜ್ಞ ಹಾಗೂ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ಜೆಡಿಎಸ್ ನಾಯಕರಾದ ಎಸ್.ಎಲ್. ಬೋಜೇಗೌಡ, ಸಾ.ರಾ.ಮಹೇಶ್, ಉದ್ಯಮಿಗಳಾದ ಪಿ.ಪುರುಷೋತ್ತಮ ಶೆಟ್ಟಿ ಮತ್ತು ಡಾ.ಎಚ್.ಎಸ್.ರಾಘವೇಂದ್ರ ರಾವ್ ಉಪಸ್ಥಿತರಿದ್ದರು.

ಎಂ.ಗಂಗಾಧರ ರಾವ್ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಪಾಡಿಗಾರು ಮಧ್ವೇಶ ತಂತ್ರಿ ವಂದಿಸಿದರು. ಮುರಲಿ ಕಡೆಕಾರ್ ಕಾರ್ಯಕ್ರಮವನ್ನು ನಿರೂಪಿಸಿದರು.



ಉತ್ಪಾದನೆಯಲ್ಲಿ ಅಗ್ರಸ್ಥಾನ, ಬಳಕೆಯಲ್ಲಿ ಕೊನೆಸ್ಥಾನ

ಬಾಳೆ ಮೇಳದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಕೃಷಿ ತಜ್ಞ ಹಾಗೂ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ಬಾಳೆಯ ಉತ್ಪಾದನೆಯಲ್ಲಿ ನಾವು ವಿಶ್ವದಲ್ಲೇ ಅಗ್ರಸ್ಥಾನದಲ್ಲಿದ್ದರೆ, ಅದರ ಬಳಕೆಯಲ್ಲಿ ಕೊನೆಯ ಸ್ಥಾನದಲ್ಲಿದ್ದೇವೆ. ಭಾರತದಲ್ಲಿ ಪ್ರತಿವರ್ಷ 4 ಕೋಟಿ ಟನ್ ಬಾಳೆ ಉತ್ಪಾದನೆಯಾದರೆ, ಸೂಕ್ತ ನಿರ್ವಹಣೆ ಇಲ್ಲದೇ ಶೇ.25ರಷ್ಟು ವ್ಯರ್ಥವಾಗಿ ಹೋಗುತ್ತಿದೆ. ಇದರೊಂದಿಗೆ ಅದನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಲು ಸಹ ನಾವು ವಿಫಲರಾಗಿದ್ದೇವೆ ಎಂದರು.

ದೇಶದಲ್ಲಿ ಮಹಾರಾಷ್ಟ್ರ (ಶೇ.19), ಆಂಧ್ರ ಪ್ರದೇಶ (ಶೇ.17.6), ತಮಿಳುನಾಡು (ಶೇ.12.5) ಹಾಗೂ ಗುಜರಾತ್ (ಶೇ.12.4) ಅತ್ಯಧಿಕ ಬಾಳೆ ಬೆಳೆಯುವ ನಾಲ್ಕು ರಾಜ್ಯಗಳು. ಮಹಾರಾಷ್ಟ್ರದ ಜಲಗಾಂವ್ ಬಾಳೆಯ ರಾಜಧಾನಿ ಎಂದು ಹೇಳಬಹುದು. ಬಾಳೆ ಮತ್ತು ಹಲಸು ಬೆಳೆಯುವಲ್ಲಿ ನಾವು ವಿಶ್ವಕ್ಕೆ ಅಗ್ರಸ್ಥಾನ ಪಡೆದಿದ್ದೇವೆ. ಆದರೆ ಅವುಗಳ ಉತ್ಪನ್ನ, ಉಪಉತ್ಪನ್ನಗಳ ಮೌಲ್ಯವರ್ಧನೆ ಈಗೀಗ ಕೆಲವು ಕಡೆಗಳಲ್ಲಿ ನಡೆಯುತಿದ್ದರೂ, ಇನ್ನೂ ಪೂರ್ಣ ಪ್ರಮಾಣದಲ್ಲಿ ಅದು ಜನರಿಗೆ ತಲುಪುತ್ತಿಲ್ಲ ಎಂದರು.

Tags

Udupi RajabalefarmersH. D. KumaraswamyUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X