ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ನೇಮಕ

ಉಡುಪಿ, ಜ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕ ಮಾಡ ಲಾಗಿದೆ.
ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್‌ರಾಜ್ ಕಾಂಚನ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಆದೇಶದಂತೆ ಇವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
Next Story





