Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಾಸ್ಟೆಲ್ ವಿದ್ಯಾರ್ಥಿಗಳ...

ಹಾಸ್ಟೆಲ್ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿ: ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್

ವಾರ್ತಾಭಾರತಿವಾರ್ತಾಭಾರತಿ4 Nov 2026 7:22 PM IST
share
ಹಾಸ್ಟೆಲ್ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿ: ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್

ಉಡುಪಿ, ನ.4: ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿದ್ದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಅವರ ಪೋಷಕರು ತಮ್ಮ ಮೇಲೆ ಭರವಸೆ ಇಟ್ಟು ಕಳುಹಿಸುತ್ತಾರೆ. ಈ ವಿಶ್ವಾಸವನ್ನು ಸಮರ್ಪಕವಾಗಿ ನಿಭಾಯಿಸು ವಂತೆ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಮುದಾಯದವರ ಕಲ್ಯಾಣಕ್ಕಾಗಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ/ ಕಾರ್ಯಕ್ರಮ/ ಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಹಾಸ್ಟೆಲ್, ವಸತಿ ಶಾಲೆಗಳಲ್ಲಿರುವ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ, ಅವರು ಉತ್ತಮ ಸಹ ಶಿಕ್ಷಣ ಪಡೆಯುವಂತಾಗಬೇಕು. ಇದಕ್ಕೆ ಯಾವುದೇ ರೀತಿಯ ಮೂಲ ಸೌಲಭ್ಯಗಳ ಕೊರತೆ ಇದ್ದಲ್ಲಿ ಸಮಿತಿಯ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತನ್ವೀರ್ ಸೇಠ್ ಹೇಳಿದರು.

ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ಇಲ್ಲಿ ಶೈಕ್ಷಣಿಕ ಚಟುವಟಿಕೆಗಳು ಹೆಚ್ಚಾಗಿರುವುದರಿಂದ ಹೊರ ಜಿಲ್ಲೆಗಳಿಂದ ವ್ಯಾಸಂಗಕ್ಕಾಗಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ, ಇಲ್ಲಿನ ವಸತಿ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಉಡುಪಿ ಈ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ವನ್ನು ಸಹ ಹೊಂದಿದೆ. ಇದನ್ನು ಮತ್ತಷ್ಟು ಪರಿಶ್ರಮದಿಂದ ಮುಂದುವರೆಸಿಕೊಂಡು ಹೋಗಬೇಕು. ವಸತಿಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯಲ್ಲಿ ಲೋಪದೋಷಗಳಾಗದಂತೆ ಬಂದಲ್ಲಿ ಸರಿಪಡಿಸಿಕೊಳ್ಳಬೇಕು ಎಂದರು.

ಮನಸ್ಸು ಕಟ್ಟುವ ಕೆಲಸ: ಇಲಾಖೆಗಳು ಬರೀ ಕಟ್ಟಡ ಕಟ್ಟುವ ಕೆಲಸದ ಬದಲು ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕು. ತಪ್ಪುಗಳು ಸಹಜ. ಆದರೆ ಆ ತಪ್ಪಗಳಿಗೆ ಅಧಿಕಾರಿಗಳು ಕಾರಣವಾಗಬಾರದು. ಆ ತಪ್ಪುಗಳನ್ನು ತಡೆಯುವ ಕೆಲಸ ಅಧಿಕಾರಿಗಳಿಂದ ಆಗಬೇಕು ಎಂದರು.

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಹಾಸ್ಟೆಲ್‌ಗಳಲ್ಲಿ ಸೀಟು ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಇದನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು. ಬೇಡಿಕೆಗೆ ಅನುಗುಣವಾಗಿ ಹಾಸ್ಟಲ್‌ಗಳಲ್ಲಿ ಸೀಟುಗಳು ಲಭ್ಯವಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಬಿಸಿ ನೀರು, ಊಟೋಪಹಾರ, ಸ್ವಚ್ಛತೆ, ಸೋಪ್ ಕಿಟ್ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳು ಸಕಾಲಕ್ಕೆ ದೊರೆಯುವಂತೆ ನೋಡಿ ಕೊಳ್ಳಬೇಕು. ಹಾಸ್ಟಲ್‌ಗಳ ಸಂಖ್ಯೆ ಹೆಚ್ಚಿದ್ದು, ವಾರ್ಡನ್, ರಾತ್ರಿ ಕಾವಲುಗಾರ ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದನ್ನು ಸರಿದೂಗಿಸಲು ಮುಂದಾಗಬೇಕು ಎಂದು ಸಂಬಂಧಿತರಿಗೆ ಸೂಚನೆಗಳನ್ನು ನೀಡಿದರು.

ವಿಧಾನಪರಿಷತ್ತಿನ ಸದಸ್ಯ ಕೇಶವ ಪ್ರಸಾದ್ ಎಸ್ ಮಾತನಾಡಿ, ಜಿಲ್ಲೆ ಉತ್ತಮ ಫಲಿತಾಂಶ ಪಡೆಯಲು ಕಾರಣವಾದ ಪ್ರಮುಖ ಅಂಶಗಳೇನು ಎಂಬುದನ್ನು ಮನಗಾಣಬೇಕು. ಮುಸ್ಲಿಂ, ಕ್ರಿಶ್ಚಿಯನ್ ಹೊರತುಪಡಿಸಿ, ಉಳಿದ ಅಲ್ಪಸಂಖ್ಯಾತ ಸಮುದಾಯದವರಿಗೆ ಸರಕಾರದ ಯೋಜನೆಗಳು ತಲುಪಿದೆಯೇ ಎಂಬುದನ್ನು ವಿಮರ್ಶಿಸಬೇಕು ಎಂದರು.

ವಿಧಾನಸಭಾ ಸದಸ್ಯರಾದ ಚನ್ನಬಸಪ್ಪ ಮಾತನಾಡಿ, ವಿದ್ಯಾಭ್ಯಾಸಕ್ಕಾಗಿ ಉತ್ತರ ಕರ್ನಾಟಕ ಸೇರಿದಂತೆ ಹೊರ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ದಾಖಲಾಗುತಿದ್ದಾರೆ. ವಿದ್ಯಾರ್ಥಿಗಳಿಗೆ ಅನುಗುಣವಾಗಿ ಹಾಸ್ಟಲ್‌ಗಳಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದ ಅವರು, ಯಾವ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತೆರಳುತ್ತಾರೋ ಅಂತಹ ಜಿಲ್ಲೆಗಳಲ್ಲಿ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ವಿಧಾನಸಭಾ ಸದಸ್ಯ ಹೆಚ್.ಎ ಇಕ್ಬಾಲ್ ಹುಸೇನ್ ಮಾತನಾಡಿ, ವಸತಿ ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿದಾಗ ವಿದ್ಯಾರ್ಥಿಗಳು ಹೆಚ್ಚು ದಾಖಲು ಆಗುತ್ತಾರೆ. ವಿದ್ಯಾರ್ಥಿಗಳಿಗೆ ಅನುಗುಣ ವಾಗಿ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಖಾಸಗಿಯಾಗಿ ದಾನಿಗಳು ಕೊಡುಗೆಗಳನ್ನು ನೀಡುವುದರಿಂದ, ಇನ್ನಷ್ಟು ದಾನಿಗಳನ್ನು ಸಂಪರ್ಕಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಸರಕಾರದ ಜೊತೆಗೆ ಹೆಚ್ಚಾಗಿ ಖಾಸಗಿ ದಾನಿಗಳು ಸಿಆರ್‌ಎಸ್ ಅನುದಾನದಿಂದ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಪ್ರೇರಿತವಾಗಿ ಮುಂದೆ ಬರುತ್ತಾರೆ. ಶಾಲೆಯ ಹಳೆಯ ವಿದ್ಯಾರ್ಥಿಗಳು ಸಹ ನಮ್ಮ ಶಾಲೆಯೆಂಬ ಅಭಿಮಾನದಿಂದ ಸಹಾಯಹಸ್ತ ನೀಡುತ್ತಾರೆ. ನಿವೃತ್ತಿ ಹೊಂದಿದ ಶಿಕ್ಷಕರೂ ವಿದ್ಯಾರ್ಥಿಗಳ ಕಲಿಕೆಗೆ ಸಹಾಯ ಮಾಡಲು ಮುಂದಾಗುತ್ತಾರೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿನಿಲಯಗಳಿಗೆ ವಿದ್ಯಾಭ್ಯಾಸಕ್ಕಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಆರಂಭಿಕ ಹಂತವಾದ 7ರಿಂದ 9ನೇ ತರಗತಿಯವರೆಗೆ ಅಕ್ಷರಾಭ್ಯಾಸ, ಓದುವುದು, ಬರೆಯುವುದು ಸೇರಿದಂತೆ ತಳಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸುತ್ತಿರುವುದರಿಂದ ಜಿಲ್ಲೆಯ ಫಲಿತಾಂಶ ಉತ್ತಮ ರೀತಿಯಲ್ಲಿ ಬರುತ್ತಿದೆ ಎಂದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಕಟಕದೊಂಡ ವಿಠ್ಠಲ್ ದೊಂಡಿಬಾ, ಬಿ.ಪಿ.ಹರೀಶ್, ರಾಜೇಶ್ ನಾಯಕ್ ಯು ಹಾಗೂ ಕರೆಮ್ಮ ಜಿ ನಾಯ್ಕ, ಕೆ.ಅಬ್ದುಲ್ ಜಬ್ಬರ್, ಇಲಾಖೆಯ ಕಾರ್ಯದರ್ಶಿ ಡಾ. ಎನ್. ಪ್ರಸಾದ್, ಆಯುಕ್ತರಾದ ಸುರಳ್ಕರ್ ಕಾಸ್ ಕಿಶೋರ್, ಜಂಟಿ ಕಾರ್ಯದರ್ಶಿ ಶಿವರಾಮಾಚಾರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

‘29 ಸರ್ಕಾರಿ ಶಾಲೆಗಳ ಶೌಚಾಲಯಗಳ ಶುಚಿತ್ವವನ್ನು ಕೈಗೊಳ್ಳಲು ದಾನಿಯೊಬ್ಬರು ತಮ್ಮದೇ ಸಿಬ್ಬಂದಿ, ವಾಹನ, ಸ್ವಚ್ಚತಾ ಪರಿಕರಗಳು, ನೀರಿನೊಂದಿಗೆ ಬಂದು ನಿರಂತರವಾಗಿ ಸ್ವಚ್ಚತಾ ಕಾರ್ಯವನ್ನು ನಡೆಸುತ್ತಿರುವ ಉದಾಹರಣೆ ಈ ಜಿಲ್ಲೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಫಲಿತಾಂಶ ಪ್ರತಿವರ್ಷ ಉತ್ತಮವಾಗಿದೆ.’

-ಸ್ವರೂಪ ಟಿ.ಕೆ., ಉಡುಪಿ ಜಿಲ್ಲಾಧಿಕಾರಿ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X