ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಪ್ರಕರಣ ದಾಖಲು

ಮಣಿಪಾಲ, ಸೆ.2: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿದ ಅಪರಿಚಿತ ವ್ಯಕ್ತಿಯೊಬ್ಬ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಪರಾರಿಯಾಗಿರುವ ಘಟನೆ ಸೆ.1ರಂದು ನಸುಕಿನ ವೇಳೆ 2ಗಂಟೆ ಸುಮಾರಿಗೆ ನಡೆದಿದೆ.
ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ವ್ಯಕ್ತಿ, ಬಳಿಕ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಯೊಬ್ಬಳ ಕೈ ಎಳೆದು ಕಿರುಕುಳ ನೀಡಿದ ಎನ್ನ ಲಾಗಿದೆ. ವಿದ್ಯಾರ್ಥಿನಿ ಕೂಡಲೇ ಬೊಬ್ಬೆ ಹಾಕಿದಾಗ ಆತ ಪರಾರಿಯಾದ ಎನ್ನಲಾಗಿದೆ. ಬಳಿಕ ಹಾಸ್ಟೆಲ್‌ನಲ್ಲಿದ್ದ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಬಂದು ಹೋಗಿರುವುದು ಕಂಡುಬಂದಿದೆ. ಆದರೆ ಆತನ ಮುಖ ಚಹರೆ ಸ್ಪಷ್ಟವಾಗಿ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ವಸತಿ ನಿಲಯದ ವಾರ್ಡನ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story





