Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಹರಿರಾಮ್...

ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಡಾ.ಅರುಣ್‌ರ ಬಿಗು ಕಾನೂನು ಸುವ್ಯವಸ್ಥೆ ಮುಂದುವರಿಸುವ ಭರವಸೆ

ವಾರ್ತಾಭಾರತಿವಾರ್ತಾಭಾರತಿ30 May 2025 12:44 PM IST
share
ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಶುಕ್ರವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿ ಡಾ.ಅರುಣ್ ಕೆ. ಅವರು ಹರಿರಾಮ್‌ಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ನಂತರ ಉಡುಪಿಯ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಹರಿರಾಮ್ ಶಂಕರ್, ಜನತೆ ಜಿಲ್ಲೆಯ ಕೋಮು ಸೌರ್ಹಾತೆಗೆ ಧಕ್ಕೆಯಾಗಲು ಯಾವುದೇ ರೀತಿಯ ಅವಕಾಶ ನೀಡಬಾರದು. ಅಂತಹ ಯಾವುದೇ ಘಟನೆಗಳು ಸಂಭವಿಸದಿರಲು ಪೊಲೀಸರೊಂದಿಗೆ ಕೈಜೋಡಿಸ ಬೇಕು. ಈ ಬಗ್ಗೆ ಯಾವುದೇ ಮಾಹಿತಿಗಳಿದ್ದರೂ ತನಗೆ ಅಥವಾ ಯಾವುದೇ ಪೊಲೀಸ್ ಅಧಿಕಾರಿಗೆ ತಕ್ಷಣ ಮಾಹಿತಿ ನೀಡಿ. ಯಾವುದೇ ರೀತಿಯ ಅಕ್ರಮಗಳ ಚಟುವಟಿಕೆಗಳ ಮಾಹಿತಿ ಸಿಕ್ಕಿದರೂ ತಕ್ಷಣ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳಿ ಎಂದು ಜಿಲ್ಲೆಯ ಜನತೆಗೆ ಮನವಿ ಮಾಡಿದರು.

ನಾನು ಈ ಹಿಂದೆ ಕುಂದಾಪುರದಲ್ಲಿ ಸುಮಾರು ಒಂದು ವರ್ಷ ಸಹಾಯಕ ಪೊಲೀಸ್ ಅಧೀಕ್ಷಕನಾಗಿ ಸೇವೆ ಸಲ್ಲಿಸಿದ್ದರಿಂದ, ಉಡುಪಿ ಜಿಲ್ಲೆಯ ಪರಿಚಯ ವಿದೆ. ಅಲ್ಲದೇ ಹಾಸನ ಮತ್ತು ಮಂಗಳೂರಿನಲ್ಲೂ ಸೇವೆ ಸಲ್ಲಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಯಲ್ಲಿ ನನಗೆ ಒಳ್ಳೆಯ ಅನುಭವವನ್ನು ನೀಡಿದೆ ಎಂದವರು ತಿಳಿಸಿದರು.

ಇತ್ತೀಚೆಗೆ ನಡೆಯುತ್ತಿರುವ ಯಾವುದೇ ರೀತಿಯ ಘರ್ಷಣೆಗಳು ಅಥವಾ ಗಲಭೆಗಳಲ್ಲಿ ಜಿಲ್ಲೆಯ ಜನತೆ ಭಾಗಿಯಾಗದೆ ಶಾಂತಿ ಕಾಪಾಡಬೇಕು. ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು. ಯಾವುದೇ ತುರ್ತು ಅಥವಾ ಪ್ರಮುಖ ಮಾಹಿತಿ ಇದ್ದರೆ, ಸಾರ್ವಜನಿಕರು ನನ್ನನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ಪೊಲೀಸ್ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು. ನನ್ನ ಸಂಪರ್ಕ ಸಂಖ್ಯೆ ಸಾರ್ವಜನಿಕವಾಗಿ ಲಭ್ಯವಿದೆ ಎಂದು ತಿಳಿಸಿದರು.

ನಿರ್ಗಮನ ಎಸ್ಪಿ ಡಾ.ಅರುಣ್ ಅವರು ದಕ್ಷ ನಡೆಯ ಮೂಲಕ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ನಾನು ಅವರ ಉತ್ತಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ಆದ್ಯತೆ ನೀಡುತ್ತೇನೆ ಎಂದು ಹರಿರಾಮ್, ಜಿಲ್ಲೆಯ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಚಟುವಟಿಕೆಯನ್ನು, ರೌಡಿಸಂ, ಗೂಂಡಾಗಿರಿ, ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂಥ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಡಾ.ಅರುಣ್ ಅವರು ಆಡಳಿತದಲ್ಲಿ ತೋರಿದ ಬಿಗುವನ್ನು ಮುಂದುವರಿಸಿ ಕೊಂಡು ಹೋಗಲು ಜಿಲ್ಲೆಯ ಜನತೆಯ ಸಹಕಾರವನ್ನು ಕೋರಿದ ಅವರು, ಕುಂದಾಪುರ ತಾಲೂಕಿನ ಕೋಮು ಸೂಕ್ಷ್ಮ ಪ್ರದೇಶಗಳಾದ ಗಂಗೊಳ್ಳಿ, ಕೋಡಿಯಲ್ಲಿ ಶಾಂತಿ ಸೌಹಾರ್ದತೆಯನ್ನು ನಿಭಾಯಿಸಿ ತಳಮಟ್ಟದ ಅನುಭವ, ಮಾಹಿತಿ ಹೊಂದಿರುವುದಾಗಿ ತಿಳಿಸಿದರು.

ಕುಂದಾಪುರದಲ್ಲಿ ಎಎಸ್ಪಿ ಆಗಿ ಪಡೆದ ಅನುಭವ, ಎಸ್ಪಿ ಆಗಿ ಜಿಲ್ಲೆಯ ಶಾಂತಿ-ಸೌಹಾರ್ದತೆ ಕಾಪಾಡಲು ನನಗೆ ಸಹಾಯ ಮಾಡುತ್ತದೆ ಎಂದು ನಂಬಿದ್ದೇನೆ. ಯಾರೇ ಆದರೂ ನೇರವಾಗಿ ನನ್ನನ್ನು ಸಂಪರ್ಕಿಸಬಹುದು. ನಾನು ಎಲ್ಲರಿಗೂ ಸುಲಭದಲ್ಲಿ ಲಭ್ಯವಿರುತ್ತೇನೆ. ಕೋಮುಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಚೋದನಕಾರಿ ಭಾಷಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾದ ಪೋಸ್ಟ್ ಕುರಿತು ನಿಗಾ ಇರಿಸಿ ಅವುಗಳ ನಿಯಂತ್ರಣಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತೇವೆ. ಇಂತಹ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಪ್ರತಿ ಠಾಣೆಯಲ್ಲೂ ಇಬ್ಬರನ್ನು ನೇಮಿಸಲಾಗುವುದು. ಇಂಥ ಕೃತ್ಯದಲ್ಲಿ ತೊಡಗಿದವರ ಮೇಲೆ ನಿರ್ದಾಕ್ಷ್ಮಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಆನ್‌ಲೈನ್ ಚಟುವಟಿಕೆಯ ಮೇಲ್ವಿಚಾರಣೆಗೆ ಇಬ್ಬರು ಅಧಿಕಾರಿಗಳಿದ್ದಾರೆ. ನಾವು ಸೂಕ್ಷ್ಮ ಅಥವಾ ಪ್ರಚೋದನಕಾರಿ ವಿಚಾರಗಳನ್ನು ಪೋಸ್ಟ್ ಮಾಡುವವರನ್ನು ಮಾತ್ರವಲ್ಲದೆ, ಅಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವವರನ್ನು ಹಾಗೂ ಅದರಲ್ಲಿ ತೊಡಗಿಸಿ ಕೊಳ್ಳುವವರನ್ನೂ ಟ್ರ್ಯಾಕ್ ಮಾಡುತ್ತಿದ್ದೇವೆ. ದ್ವೇಷವನ್ನು ಹರಡಲು ಅಥವಾ ಉದ್ವಿಗ್ನತೆಯನ್ನು ಪ್ರಚೋದಿಸಲು ಬಳಸುವ ನಕಲಿ ಖಾತೆಗಳನ್ನು ಸಹ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು. ನುಡಿದರು.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಮ್ ಹಾಗೂ ಮಾದಕ ದ್ರವ್ಯ ಸೇವನೆಯ ನಿಯಂತ್ರಣಕ್ಕೂ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಹರಿರಾಮ್ ಶಂಕರ್, ಸೈಬರ್ ಕ್ರೈಮ್ ವಿರುದ್ಧ ತ್ವರಿತ ಕ್ರಮಕ್ಕೆ ಸೆನ್ ಠಾಣೆಯನ್ನು ಮೇಲ್ದರ್ಜೆಗೆ ಏರಿಸಿ ಎಸಿಪಿ ರ್ಯಾಂಕಿನ ಅಧಿಕಾರಿಯನ್ನು ನೇಮಿಸಲಾಗುವುದು. ಜನರಿಗೆ ಆನ್‌ಲೈನ್‌ನಲ್ಲಿ ನಡೆಯುವ ಅಪರಾಧಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಜಿಲ್ಲೆಯ ಸಂಚಾರ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ಟ್ರಾಪಿಕ್ ವ್ಯವಸ್ಥೆಯ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ನಮ್ಮ ಡಿಐಜಿ ಮತ್ತು ಐಜಿ ಅವರ ಬೆಂಬಲದೊಂದಿಗೆ, ನಾವು ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಪರಿಚಯಿಸಲು ಯೋಜಿಸಿದ್ದೇವೆ. ಇದು ಸಿಬ್ಬಂದಿ ಕೊರತೆಯನ್ನು ನಿರ್ವಹಿಸಲು ಮತ್ತು ದೈನಂದಿನ ಸಂಚಾರ ಸವಾಲುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ವಿಶ್ಲೇಷಿಸಲು ನಮಗೆ ಸಹಾಯ ಮಾಡುವ ವಿಶ್ವಾಸವಿದೆ ಎಂದರು.

ಕಳೆದ ಸುಮಾರು 20 ತಿಂಗಳಿನಿಂದ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ರ್ಯನಿರ್ವಹಿಸುತಿದ್ದ ಡಾ.ಅರುಣ್ ಕೆ. ಅವರನ್ನು ಕನ್ನಡ ಜಿಲ್ಲೆಯ ಎಸ್ಪಿಯಾಗಿ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ತೆರವಾದ ಸ್ಥಾನಕ್ಕೆ ಪೊಲೀಸ್ ಇಂಟಲಿಜೆನ್ಸ್ ವಿಭಾಗದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಹರಿರಾಮ್ ಶಂಕರ್ ರನ್ನು ನಿಯುಕ್ತಿಗೊಳಿಸಿ ಸರಕಾರ ಗುರುವಾರ ಆದೇಶಿಸಿತ್ತು. ಅದರಂತೆ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.

ಕೇರಳದ ತ್ರಿಶೂರ್ ನ ಹರಿರಾಮ್ ಶಂಕರ್, ಕಲ್ಲಿಕೋಟೆ ಎನ್ಐಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2016ರಲ್ಲಿ ತಮ್ಮ ಐದನೇ ಪ್ರಯತ್ನದಲ್ಲಿ ಅವರು ಯುಪಿಎಸ್ಸಿಯಲ್ಲಿ 145ನೇ ರ್ಯಾಂಕ್ ಪಡೆದು ತಾವು ಬಯಸಿದ ಐಪಿಎಸ್ ಹುದ್ದೆಗೆ ಆಯ್ಕೆಯಾಗಿದ್ದರು.

ಹರಿರಾಮ್ ಶಂಕರ್ ಅವರು ಬೆಳಗಾವಿ, ಕುಂದಾಪುರ ಉಪವಿಭಾಗದ ಎಸಿಪಿ, ಮಂಗಳೂರಿನಲ್ಲಿ ಡಿಸಿಪಿ, ಹಾಸನದಲ್ಲಿ ಎಸ್ಪಿಯಾಗಿಯೂ ಕಾರ್ಯನಿರ್ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X