Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ...

ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ‘ಆರೋಗ್ಯ ಶನಿವಾರ’ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಶಾಲೆಗಳಲ್ಲಿ ಅನುಷ್ಠಾನ

ವಾರ್ತಾಭಾರತಿವಾರ್ತಾಭಾರತಿ21 July 2023 7:47 PM IST
share
ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ‘ಆರೋಗ್ಯ ಶನಿವಾರ’ ಕಾರ್ಯಕ್ರಮ

ಉಡುಪಿ, ಜು.21: ಮಲೇರಿಯಾ, ಡೆಂಗಿ, ಜ್ವರ, ನೆಗಡಿ ಕಾಯಿಲೆಗಳು ಯಾವಾಗ ಬರುತ್ತವೆ, ಈ ರೋಗಗಳು ಹೇಗೆ ಮತ್ತು ಏಕೆ ಬರುತ್ತವೆ, ಯಾವುದ ರಿಂದ ಬರುತ್ತದೆ, ಅವುಗಳ ಲಕ್ಷಣಗಳೇನು, ಈ ರೋಗಗಳು ಬಾರದಂತೆ ಏನು ಮಾಡಬೇಕು, ನಮ್ಮ ಆರೋಗ್ಯವನ್ನು ಸುರಕ್ಷಿತವಾಗಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕು....

ಈ ಎಲ್ಲಾ ವಿಷಯಗಳ ಬಗ್ಗೆ ಶಾಲಾ ಮಕ್ಕಳಿಗೆ ನಿರಂತರವಾಗಿ ತಿಳಿಸುವ ನೂತನ ಮತ್ತು ಬಹುಶ: ರಾಜ್ಯದಲ್ಲೇ ಪ್ರಥಮವಾದ ‘ಆರೋಗ್ಯ ಶನಿವಾರ’ ಎಂಬ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾಗಿದ್ದು, ಇದರಿಂದ ಉತ್ತಮ ಫಲಿತಾಂಶ ಸಹ ಕಂಡು ಬರುತ್ತಿದೆ.

ಉಡುಪಿ ಜಿಲ್ಲೆಯಲ್ಲಿರುವ 1098 ಸರಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಲಿಯುತ್ತಿರುವ 1.61 ಲಕ್ಷ ಮಕ್ಕಳಿಗೆ ಪ್ರತೀ ಶನಿವಾರ, ಪ್ರಸ್ತುತ ಕಾಲಗಳಲ್ಲಿ (ಬೇಸಿಗೆ, ಮಳೆಗಾಲ, ಚಳಿಗಾಲ) ಕಂಡು ಬರುವ ಕಾಯಿಲೆಗಳ ಬಗ್ಗೆ ಮತ್ತು ಅವುಗಳು ಬಾರದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜೂನ್ ತಿಂಗಳಿನಿಂದ ‘ಆರೋಗ್ಯ ಶನಿವಾರ’ದ ಮೂಲಕ ಆಯೋಜಿಸಲಾಗುತ್ತಿದೆ.

ಈ ಕಾರ್ಯಕ್ರಮದ ಮೂಲಕ ಪ್ರತೀ ಶನಿವಾರ ಬೆಳಗ್ಗೆ ಎಲ್ಲಾ ಶಾಲಾ ಕೊಠಡಿಯಲ್ಲಿ ಆರೋಗ್ಯ ಅರಿವು ವಿಷಯಗಳ ಬಗ್ಗೆ ತರಬೇತಿ ಪಡೆದಿರುವ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ, ಪ್ರಸಕ್ತ ಸಮಯದಲ್ಲಿ ಕಂಡುಬರುವ ಕಾಯಿಲೆಗಳ ಬಗ್ಗೆ ಸಂಪೂರ್ಣ ಅರಿವು ಮೂಡಿಸುತ್ತಿದ್ದಾರೆ. ಶಾಲೆಗೆ ಸಮೀಪ ವಿರುವ ಆರೋಗ್ಯ ಕೇಂದ್ರದ ಸಿಬ್ಬಂದಿ ಮೂಲಕ ಸಹ ಮಾಹಿತಿ ನೀಡಿ, ಮಕ್ಕಳ ಆರೋಗ್ಯದ ಸುರಕ್ಷತೆಗೆ ಹಾಗೂ ಮಕ್ಕಳ ಮೂಲಕ ಅವರ ಪೋಷಕರಿಗೂ ಕೂಡಾ ಆರೋಗ್ಯ ಕಾಳಜಿಯ ಬಗ್ಗೆ ಅರಿವು ಮೂಡಿಸಿ, ಆರೋಗ್ಯಯುತ ಸಮುದಾಯ ನಿರ್ಮಾಣಗೊಳ್ಳಲು ಈ ಕಾರ್ಯಕ್ರಮ ಪ್ರಮುಖ ವೇದಿಕೆಯಾಗಿದೆ.

ಮಲೇರಿಯ, ಡೆಂಗಿ ಸೇರಿದಂತೆ ಹಲವು ಕಾಯಿಲೆಗಳು ಸೊಳ್ಳೆಗಳ ಮೂಲಕ ಹಾಗೂ ಅನೈರ್ಮಲ್ಯದ ಮೂಲಕ ಹರಡುತಿದ್ದು, ಇದನ್ನು ತಡೆಯಲು ಶಾಲೆ ಮತ್ತು ಮನೆಯ ಪರಿಸರದಲ್ಲಿ ಕೊಳಚೆ ನೀರು ನಿಲ್ಲದಂತೆ ಹಾಗೂ ಸ್ವಚ್ಛತೆ ಯನ್ನು ಕಾಪಾಡುವುದರಿಂದ ಕಾಯಿಲೆಗಳು ಹರಡದಂತೆ ನಿಯಂತ್ರಿಸ ಬಹುದು ಎಂಬ ಬಗ್ಗೆ ಸೇರಿದಂತೆ ದೈನಂದಿನ ಚಟುವಟಿಕೆಯಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು, ಪ್ರಥಮ ಚಿಕಿತ್ಸೆ ವಿಧಾನಗಳು ಸೇರಿದಂತೆ ಹಲವು ಆರೋಗ್ಯ ಸಂಬಂಧಿತ ವಿಷಯಗಳ ಬಗ್ಗೆ ಮಕ್ಕಳಿಗೆ ಸರಳವಾಗಿ ಹಾಗೂ ಪರಿಣಾಮಕಾರಿಯಾಗಿ ತಿಳಿಸುವ ಮೂಲಕ ಈ ಸಂದೇಶಗಳು ಅವರ ಮನೆಗಳಿಗೂ ತಲುಪುವಂತೆ ಮಾಡಲಾಗುತ್ತಿದೆ.

ಮಳೆಗಾಲದ ಸಮಯದಲ್ಲಿ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ, ಮಕ್ಕಳು ವಾಸಿಸುವ ಪ್ರದೇಶದಲ್ಲಿ ಬೀಳಬಹುದಾದ ಮಳೆಯ ಪ್ರಮಾಣ, ಅಪಾಯಕಾರಿಯಾಗಿ ತುಂಬಿ ಹರಿಯುತ್ತಿರುವ ಹಳ್ಳ ಮತ್ತು ತೋಡುಗಳನ್ನು ದಾಟದಂತೆ ಹಾಗೂ ಅನಿವಾರ್ಯವಾಗಿ ದಾಟಬೇಕಾದ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಪರ್ಯಾಯ ರಸ್ತೆ ಬಳಸುವ ಬಗ್ಗೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಸಹ ವಿದ್ಯಾರ್ಥಿಗಳಿಗೆ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ.

ಜಿಲ್ಲೆಯ ಬಹುತೇಕ ಪ್ರೌಢಶಾಲೆಗಳಲ್ಲಿ ಎಲ್‌ಇಡಿ ವ್ಯವಸ್ಥೆ ಇದ್ದು, ಉಡುಪಿ ಜಿಲ್ಲಾ ಪಂಚಾಯತ್‌ನ ಸಂಪನ್ಮೂಲ ಕೇಂದ್ರದಲ್ಲಿರುವ ಸ್ಟುಡಿಯೋ ಮೂಲಕ ವೈದ್ಯರಿಂದ ಹಾಗೂ ವಿಷಯ ತಜ್ಞರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮಗಳ ನೇರ ಪ್ರದರ್ಶನಕ್ಕೆ ಕೂಡಾ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮದ ಲೈವ್ ಲಿಂಕ್‌ನ್ನು ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಕಳುಹಿಸಿ, ಲ್ಯಾಪ್‌ಟಾಪ್ ಮೂಲಕ ಶಾಲೆಯಲ್ಲಿ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಂಬಂದಿತ ಯೂಟ್ಯೂಬ್ ವೀಡಿಯೋಗಳ ಮೂಲಕ ಸಹ ಅರಿವು ಮೂಡಿಸಲಾಗುತಿದ್ದು, ಯಾವುದೇ ಹಂತದಲ್ಲೂ ಮಕ್ಕಳು ಈ ಕಾರ್ಯಕ್ರಮದಿಂದ ವಂಚಿತ ರಾಗದಂತೆ ನೋಡಿಕೊಳ್ಳಲಾಗುತ್ತಿದೆ.

"ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿ ಶಾಲೆಗೆ ಗೈರು ಹಾಜರಾಗುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ದೈಹಿಕ ಬೆಳವಣಿಗೆಗೆ ತೊಂದರೆಯಾಗುತ್ತದೆ. ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ಮತ್ತು ಅವರನ್ನು ಆಸ್ಪತ್ರೆಯಿಂದ ದೂರ ಉಳಿಸುವ ಉದ್ದೇಶದಿಂದ ಪ್ರತೀ ಶನಿವಾರ ಆರೋಗ್ಯ ಸಂಬಂಧಿತ ಅರಿವು ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಮಕ್ಕಳಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಗುತ್ತದೆ. ಮಕ್ಕಳು ತಮಗೆ ದೊರೆತ ಈ ಮಾಹಿತಿಗಳನ್ನು ಮನೆಯಲ್ಲಿ ಹಂಚಿಕೊಳ್ಳುವುದರಿಂದ ಇಡೀ ಸಮುದಾಯಕ್ಕೆ ಆರೋಗ್ಯ ಮಾಹಿತಿ ತಲುಪುತ್ತಿದೆ. ಈ ಕಾರ್ಯಕ್ರಮ ಆರಂಭವಾದ ನಂತರ ಶಾಲೆಗಳಿಗೆ ಪರಿವೀಕ್ಷಣೆಗೆ ತೆರಳಿದಾಗ ಶಾಲಾ ಆವರಣದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿರುವುದು ಕಂಡು ಬರುತ್ತಿದೆ. ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಮತ್ತು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ವನ್ನು ಆಯೋಜಿಸಲಾಗಿದೆ"

-ಕೆ.ಗಣಪತಿ, ಡಿಡಿಪಿಐ ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X