Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Hebri | ನೆಟ್ವರ್ಕ್ ಸಮಸ್ಯೆ :...

Hebri | ನೆಟ್ವರ್ಕ್ ಸಮಸ್ಯೆ : ನಾಡ್ಪಾಲಿಗೆ ಸಂಸದ ಕೋಟ ಭೇಟಿ

ವಾರ್ತಾಭಾರತಿವಾರ್ತಾಭಾರತಿ21 Nov 2025 10:25 PM IST
share
Hebri  | ನೆಟ್ವರ್ಕ್ ಸಮಸ್ಯೆ : ನಾಡ್ಪಾಲಿಗೆ ಸಂಸದ ಕೋಟ ಭೇಟಿ
ಬಿಎಸ್ಸೆನ್ನೆಲ್ ಅಧಿಕಾರಿಗಳೊಂದಿಗೆ ಚರ್ಚೆ

ಹೆಬ್ರಿ, ನ.21: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಗುಂಬೆ, ಕಾಸನಮಕ್ಕಿ ಹಾಗೂ ಇನ್ನಿತರ ಬಿಎಸ್ಸೆನ್ನೆಲ್ ಟವರ್ ಗಳಲ್ಲಿ ಕಂಡುಬಂದಿರುವ ನೆಟ್ವರ್ಕ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ ನಾಡ್ಪಾಲಿಗೆ ಭೇಟಿ ನೀಡಿ ಚರ್ಚಿಸಿದರು.

ಆಗುಂಬೆ ಟವರ್ ನಲ್ಲಿ ಸಕಾಲದಲ್ಲಿ ನೆಟ್ವರ್ಕ್ ಸಿಗದೇ ಇರುವುದು ಮತ್ತು ಬ್ಯಾಟರಿ ಹಾಗೂ ಸೋಲಾರ್ ಅಳವಡಿಕೆ ಆಗದಿರುವುದರ ಸಮಸ್ಯೆಯಿಂದಾಗಿ ನೆಟ್ವರ್ಕ್ ಸಿಗದೆ ಗ್ರಾಪಂನ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆ ಯಾಗುತ್ತಿರುವುದನ್ನು ನಾಡ್ಪಾಲು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಸಂಸದರ ಗಮನಕ್ಕೆ ತಂದರು.

ನಾಡ್ಪಾಲು ಗ್ರಾಪಂ ವ್ಯಾಪ್ತಿಯ ಕಾಸನಮಕ್ಕಿಯಲ್ಲಿ ನೂತನ ಟವರ್ ಮಂಜೂರಾಗಿದ್ದರೂ ಅರಣ್ಯ ಇಲಾಖೆಯ ಸಹಮತಿ ಸಿಗದೇ ಇರುವುದರಿಂದ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಪಂಚಾಯತ್ ಸದಸ್ಯರು ಅವರ ಗಮನಕ್ಕೆ ತಂದರು. ತಕ್ಷಣ ದೂರವಾಣಿ ಮೂಲಕ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ ಕೋಟ ಇನ್ನೊಂದು ವಾರದಲ್ಲಿ ಟವರ್ ಬದಲಾವಣೆಗೆ ಅನುಮತಿ ನೀಡಬೇಕೆಂದು ಸಲಹೆ ಇತ್ತರು.

ಆಗುಂಬೆ ಟವರ್ಗೆ ಬ್ಯಾಟರಿ ಮತ್ತು ಸೋಲಾರ್ ಅಳವಡಿಸಲು ಸೂಚನೆ ನೀಡಿದ ಕೋಟ, ಆಗುಂಬೆಯ ಪ್ರಥಮ ತಿರುವಿನ ಬಳಿ ಅಥವಾ ನಾಡ್ಪಾಲು ಗ್ರಾಪಂನ ಸನಿಹದಲ್ಲಿ ನೂತನ ಟವರ್ ಅಳವಡಿಕೆಗೆ ಪ್ರಸ್ತಾಪ ಸಲ್ಲಿಸಲು ಸ್ಥಳೀಯ ಅಧಿಕಾರಿಗಳಿಗೆ ಸಲಹೆ ಇತ್ತರು. ನಾಡ್ಪಾಲು ತೀರ ಹಿಂದುಳಿದ ಗ್ರಾಮವಾಗಿದ್ದು, ವಿಶೇಷ ಪ್ರಕರಣವೆಂದು ಪರಿಗಣಿಸಿ, ಹೆಚ್ಚುವರಿ ಹೊಸ ಟವರ್ ಗಳ ಮಂಜೂರಾತಿಗೆ ಸಭೆಯಲ್ಲಿ ಉಪಸ್ಥಿತರಿದ್ದ ಬಿಎಸ್ಸೆನ್ನೆಲ್ ಅಧಿಕಾರಿಗಳಿಗೆ ಸಂಸದ ಕೋಟ ಸೂಚಿಸಿದರು.

ನಾಡ್ಪಾಲು ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ದಿನೇಶ್ ಹೆಗ್ಡೆ, ಗ್ರಾಪಂ ಸದಸ್ಯರು, ಗ್ರಾಮಸ್ಥರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಜರಿದ್ದು ಅಭಿಪ್ರಾಯ ತಿಳಿಸಿದರು. ಬಿಎಸ್ಸೆನ್ನೆಲ್ ಅಧಿಕಾರಿಗಳಾದ ಉಡುಪಿ ಎಜಿಎಂ ಹರಿಕುಮಾರ್, ಕೃಷ್ಣ ಉಪಸ್ಥಿತರಿದ್ದರು.

Tags

Hebri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X