ಹೆಬ್ರಿ | ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ ಉದ್ಘಾಟನೆ

ಹೆಬ್ರಿ, ಡಿ.9: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಕೆ.ಶಾಂತರಾಮ ಸೂಡ ಹೇಳಿದ್ದಾರೆ.
ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಉದಯ ಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಪೆರ್ಡೂರು ಅನಂತ ಸೌರಭ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ಸಂತೋಷ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಎಸ್.ಕೆ.ಗೋಲ್ಡಸ್ಮಿತ್ ಇಂಡಸ್ಟ್ರೀಯಲ್ ಕೋ- ಅಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು ಮಾತನಾಡಿದರು.
ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ, ಉದ್ಯಮಿ ಸತೀಶ್ ಶೆಟ್ಟಿ ಕುತ್ಯಾರು ಬೀಡು, ಅನಂತಪದ್ಮನಾಭ ದೇವಳದ ಸ್ವಾಗತ ಸಮಿತಿಯ ಅಧ್ಯಕ್ಷ ಸಂದೀಪ್ ಶೆಟ್ಟಿ, ಚಾಣಕ್ಯ ಸಂಸ್ಥೆಯ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ, ಪ್ರವೀಣ್ ಪಟೇಲ್, ಪ್ರಸನ್ನ ಮುನಿಯಾಲು, ವನಿತಾ, ಅಮೃತ ಸುಕೇಶ್ ಕುಲಾಲ್, ನಿತ್ಯಾನಂದ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಸಂಗೀತ ನಿರ್ದೇಶಕ ರಮೇಶ್ ಡಿ., ಸಂಗೀತ ಗುರುಗಳಾದ ಸ್ಮಿತಾ ಭಟ್, ಶ್ರುತಿ ಭಟ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಭಟ್ ಬಲ್ಲಾಡಿ ಕಾರ್ಯಕ್ರಮ ನಿರೂಪಿಸಿದರು. ರಚಿತಾ ಕಬ್ಬಿನಾಲೆ ವಂದಿಸಿದರು. ಚಾಣಕ್ಯ ಡ್ಯಾನ್ಸ್ ಅಕಾಡೆಮಿ ಪೆರ್ಡೂರು ತಂಡದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.







