ಹೆಜಮಾಡಿ ನಾರಾಯಣ ಎಸ್. ಪೂಜಾರಿ ನಿಧನ

ಪಡುಬಿದ್ರೆ, ನ.7: ಹೆಜಮಾಡಿಯ ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಆಗಿರುವ ನಾರಾಯಣ ಪೂಜಾರಿ (78) ಇಂದು ಮುಂಜಾನೆ ನಿಧನಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸತ್ಯನಾರಾಯಣ ಮಂದಿರದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ನಾರಾಯಣ ಪೂಜಾರಿ, 1975ರಲ್ಲಿ ಉಡುಪಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಕಾಪು ಕ್ಷೇತ್ರದ ಚಾಲಗೇಣಿ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಅವರು, 1970ರ ದಶಕದಲ್ಲಿ ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಪಾರ ಶ್ರಮ ವಹಿಸಿದ್ದರು.
ಕೇಂದ್ರ ಮಾಜಿ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್, ಜನಾರ್ದನ ಪೂಜಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನಿಕಟವರ್ತಿಯಾಗಿದ್ದ ಅವರು, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷ ವೈ.ಸುಕುಮಾರ್, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಝೀಝ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ






