ಹಿರಿಯಡ್ಕ | ಗಣಿತ ವಿಸ್ತರಣೆ ಚಟುವಟಿಕೆ

ಉಡುಪಿ, ನ.12: ಉಡುಪಿ ಎಂ.ಜಿ.ಎಂ. ಕಾಲೇಜಿನ ಗಣಿತ ವಿಭಾಗದ ವತಿಯಿಂದ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಹೈಸ್ಕೂಲ್ ನಲ್ಲಿ ಗಣಿತ ವಿಸ್ತರಣೆ ಚಟುವಟಿಕೆಯನ್ನು ಆಯೋಜಿಸಲಾಗಿತ್ತು.
300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿಗಳು 20ಕ್ಕೂ ಹೆಚ್ಚು ಗಣಿತ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ವಿದ್ಯಾರ್ಥಿಗಳು ’ಆಟದ ಮೂಲಕ ಗಣಿತ ಕಲಿಯೋಣ’ ಎಂಬ ಆಶಯದಡಿ ವಿಭಿನ್ನ ಗಣಿತ ತತ್ವಗಳನ್ನು ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಿವರಿಸಿದರು.
ಹಿರಿಯಡ್ಕ ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ.ಮಂಜುನಾಥ ವಿದ್ಯಾರ್ಥಿಗಳ ಶ್ರಮ ಮತ್ತು ಪ್ರತಿಭೆಯನ್ನು ಮೆಚ್ಚಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಂ.ಜಿ.ಎಂ. ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥೆ ನವ್ಯ, ಹಿರಿಯಡ್ಕ ಕಾಲೇಜಿನ ಅಧ್ಯಾಪಕ ವರ್ಗ ಹಾಗೂ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
Next Story





