ಹಿರಿಯಡ್ಕ | ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹಿರಿಯಡ್ಕ, ಅ.10: ಗೂಡ್ಸ್ ಟೆಂಪೋ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಹಿರಿಯಡ್ಕ ಪೊಲೀಸರು ಹಿರಿಯಡ್ಕ ಠಾಣೆಯ ಎದುರು ಜಂಕ್ಷನ್ ಬಳಿ ಅ.9ರಂದು ಬಂಧಿಸಿದ್ದಾರೆ.
ಅಬ್ದುಲ್ ಸತ್ತರ್(54), ಹಾಗೂ ಯೋಗೀಶ ನಾಯ್ಕ್ (49) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಟೆಂಪೋವನ್ನು ತಡೆದು ನಿಲ್ಲಿಸಿದ ಪೊಲೀಸರು, ವಾಹನದ ಒಳಗೆ ಇದ್ದ ಒಟ್ಟು 4 ಜಾನುವಾರಗಳನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




