ಹಿರಿಯಡ್ಕ | ಯುವಕ ಆತ್ಮಹತ್ಯೆ : ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಹಿರಿಯಡ್ಕ, ನ.30: ವಿಪರೀತ ಕುಡಿತದ ಚಟ ಹೊಂದಿದ್ದ ಬೈರಂಪಳ್ಳಿ ಗ್ರಾಮ ಹರಿಖಂಡಿಗೆ ನಿವಾಸಿ ಅಮ್ಮಣ್ಣಿ ಎಂಬವರ ಮಗ ಅಜೀತ್(25) ಎಂಬವರು ಶನಿವಾರ ರಾತ್ರಿ ಮನೆಯ ಹಾಲ್ ನಲ್ಲಿ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





