ಉಡುಪಿ, ಆ.3: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆ. 4ರ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.