Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ...

ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಳ: ಡಾ. ತಲ್ಲೂರು ಶಿವರಾಮ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ19 Oct 2024 6:29 PM IST
share
ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಳ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಕುಂದಾಪುರ: ನಿರಂತರವಾಗಿ ಯಕ್ಷಗಾನ ಚಿಂತನೆಯಲ್ಲಿರುವ ಸಾಧಕರಿಗೆ ಪ್ರಶಸ್ತಿ ಸಂದಿದೆ. ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಸಿನ್ಸ್ 1999 ಶ್ವೇತಯಾನ- 76 ಕಾರ್ಯಕ್ರಮದಡಿಯಲ್ಲಿ ಗುರುವಾರ ಬೆಂಗಳೂರು ಯಕ್ಷಗಾನ ಅಕಾಡೆಮಿಯ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸುಜಯೀಂದ್ರ ಹಂದೆ ಕೋಟ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳ ಮೇಳ ಸಾಲಿಗ್ರಾಮ ವಿಶ್ವದಲ್ಲಿಯೇ ಗುರುತಿಸಿಕೊಂಡಿದೆ. ಅಂತಹ ಮೇಳವನ್ನು ಮುನ್ನಡೆಸುತ್ತಿರುವ ಸುಜಯೀಂದ್ರ ಹಂದೆಯವರಿಗೆ ಯಕ್ಷ ದೀವಿಗೆ ಪುಸ್ತಕ ಪ್ರಶಸ್ತಿ ಲಭಿಸಿದೆ. ಹಾಗೆಯೇ ವಿದ್ವಾನ್ ಗಣಪತಿ ಭಟ್‌ರೂ ವಿದ್ವತ್ತಿನಲ್ಲಿ ಪರಿಪೂರ್ಣರು. ಇವರೀರ್ವರಿಗೂ ಪ್ರಶಸ್ತಿ ಲಭಿಸಿದ್ದು ಯೋಗ್ಯವಾಗಿದೆ. ಯಶಸ್ವೀ ಕಲಾವೃಂದ ಪ್ರತೀ ವರ್ಷ ಪ್ರಶಸ್ತಿ ಪ್ರಧಾನ ಪೂರ್ವದಲ್ಲಿಯೇ ಅಭಿನಂದನೆಯನ್ನು ಸಲ್ಲಿಸಿಕೊಂಡು ಹೆಸರಾಗಿದೆ ಎಂದು ಬಹು ಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿ ಮಾತನಾಡಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸುಜಯೀಂದ್ರ ಹಂದೆ, ಯಕ್ಷಗಾನದಲ್ಲಿ ತೆಗೆದಷ್ಟು ಮೊಗೆದಷ್ಟು ವಿಚಾರಗಳಿವೆ. ಜಗತ್ತಿನ ಎಲ್ಲ ಕಲೆಗಳಿಗಿಂತ ಶ್ರೇಷ್ಠವಾದ ಕಲೆ ಯಕ್ಷಗಾನವು ನಿಲ್ಲುತ್ತದೆ ಎನ್ನುವುದನ್ನು ಯಾರೂ ಅಭಿಮಾನದಿಂದ ಹೇಳಿಕೊಳ್ಳಬಹುದು. ಆದರೆ ಹೊಸಬರಿಗೆ ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗೆ ತಲುಪಬೇಕಾದರೆ ಯಕ್ಷಗಾನ ದೊಳಗಿನ ನ್ಯೂನತೆಗಳನ್ನು ಸರಿ ಮಾಡಿಕೊಳ್ಳಬೇಕು ಎಂದರು.

ಜನಸೇವಾ ಟ್ರಸ್ಟ್‌ನ ವಸಂತ್ ಗಿಳಿಯಾರ್, ಯಕ್ಷಗುರು ಲಂಬೋದರ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುದರ್ಶನ ಉರಾಳ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಯಶಸ್ವೀ ಕಲಾವೃಂದದವರಿಂದ ಹೂವಿನಕೋಲು ಹಾಗೂ ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರಿಂದ ತೆಂಕು ತಿಟ್ಟು ಯಕ್ಷಗಾನ ಭೂಮಿ ಪುತ್ರ ಭೌಮಾಸುರ ಯಕ್ಷಗಾನ ರಂಗದಲ್ಲಿ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X