Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೇರಳಕಟ್ಟೆಯಲ್ಲಿ ಮನೆ ಕಳವು ಪ್ರಕರಣ:...

ನೇರಳಕಟ್ಟೆಯಲ್ಲಿ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ5 Jun 2026 8:58 PM IST
share
ನೇರಳಕಟ್ಟೆಯಲ್ಲಿ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕುಂದಾಪುರ, ಜೂ.5: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ಕಾಡೂರು ಗ್ರಾಮದ ತಂತ್ರಾಡಿಯ ವಿಜಯ ಶೆಟ್ಟಿ(32) ಹಾಗೂ ಕಾರ್ಕಳ ಇಂದಾರು ನಿವಾಸಿ ಅರ್ಜುನ ಪೂಜಾರಿ (29) ಬಂಧಿತ ಆರೋಪಿಗಳು.

ಮೇ 23ರಂದು ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿರುವ ನಿರಂಜನ್ ಭಟ್ ಎಂಬವರ ಮನೆಗೆ ನುಗ್ಗಿದ ಕಳ್ಳರು, ಚಿನ್ನ, ಬೆಳ್ಳಿ ಹಾಗೂ ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಜೂ.3ರಂದು ವಿಜಯ ಶೆಟ್ಟಿನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 9 ಲಕ್ಷ ರೂ. ಮೌಲ್ಯದ 66.22 ಗ್ರಾಂ ಚಿನ್ನ, 175.4 ಗ್ರಾಂ ಬೆಳ್ಳಿ ವಶಪಡಿಸಿ ಕೊಳ್ಳಲಾಗಿದೆ.

ಬಳಿಕ ತನಿಖೆ ಮುಂದುವರೆಸಿ, ಅರ್ಜುನ ಪೂಜಾರಿನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 2 ಲಕ್ಷ ಮೌಲ್ಯದ 18.200 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅಶ್ರಫ್ ಎಂಬಾತನು ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ ಎ.ಕಾಯ್ಕಿಣಿ ನೇತೃತ್ವದಲ್ಲಿ ಕುಂದಾಪುರ ಗ್ರಾಮಾಂತರ ಎಸ್ಸೈಗಳಾದ ನಿರಂಜನ್ ಗೌಡ, ಚಂದ್ರಕಲಾ ಪತ್ತಾರ ಮತ್ತು ಸಿಬ್ಬಂದಿ ರಾಜು ಬಿ.ಮೌನೇಶ್, ಶ್ರೀಧರ್ ಪಾಟೀಲ್, ಕಿರಣ ಪಾಟೀಲ್, ಶಂಕರನಾರಾಯಣ ಪೊಲೀಸ್ ಸಿಬ್ಬಂದಿ ಜಯರಾಮ, ಅಮಾಸೆಬೈಲು ಪೊಲೀಸ್ ಸಿಬ್ಬಂದಿ ಸುಧಾಕರ, ಚಂದ್ರ ಹಾಗೂ ಕುಂದಾಪುರ ಪೊಲೀಸ್ ಠಾಣಾ ಸಿಬ್ಬಂದಿ ಸಂತೋಷ, ಪ್ರಿನ್ಸ್, ಕೊಲ್ಲೂರು ಪೊಲೀಸ್ ಠಾಣೆಯ ಸಿಬ್ಬಂದಿ ನಾಗೇಂದ್ರ, ಬೈಂದೂರು ಪೊಲೀಸ್ ಠಾಣೆಯ ಚಿದಾನಂದ, ಮಾಳಪ್ಪ ಈ ಕಾರ್ಯಾಚರಣೆ ನಡೆಸಿದ್ದಾರೆ.

Tags

HouseburglarycaseNeralakatteaccusearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X