Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರಸೀಕೆರೆ ತಾಲೂಕಿನ ತಳಲೂರಿನಲ್ಲಿ ಹೊಯ್ಸಳ...

ಅರಸೀಕೆರೆ ತಾಲೂಕಿನ ತಳಲೂರಿನಲ್ಲಿ ಹೊಯ್ಸಳ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ30 Aug 2024 7:04 PM IST
share
ಅರಸೀಕೆರೆ ತಾಲೂಕಿನ ತಳಲೂರಿನಲ್ಲಿ ಹೊಯ್ಸಳ ಶಾಸನ ಪತ್ತೆ

ಉಡುಪಿ, ಆ.30: ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ತಳಲೂರು ಗ್ರಾಮದ ಶಿವದೇವಾಲಯದ ಹೊರ ಆವರಣದಲ್ಲಿ ಈವರೆಗೆ ಅಪ್ರಕಟಿತ ಶಾಸನವೊಂದನ್ನು ಅರಸೀಕೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಹರೀಶ್ ಪತ್ತೆ ಮಾಡಿದ್ದು, ಶಿರ್ವದ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ಇದರ ಅಧ್ಯಯನ ನಡೆಸಿದ್ದಾರೆ.

ಈ ಶಾಸನ 13ನೇ ಶತಮಾನದ ಹೊಯ್ಸಳರ ಶಾಸನ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ. ಇದನ್ನು 13ನೇ ಶತಮಾನದ ಹೊಯ್ಸಳ ಲಿಪಿ ಮತ್ತು ಕನ್ನಡ ಭಾಷೆಯಲ್ಲಿ ರಚಿಸಲಾಗಿದೆ. ಐದು ಸಾಲಿನ ಈ ಪುಟ್ಟ ಶಾಸನದ ಬರವಣಿಗೆಯ ಶೈಲಿ ಹೊಯ್ಸಳರ ಕಾಲದ ಲಿಪಿ ಲಕ್ಷಣವನ್ನು ಹೊಂದಿದ್ದರೂ ಅಕ್ಷರ ಸ್ಖಾಲಿತ್ಯಗಳಿವೆ ಎಂದು ಪ್ರೊ.ಟಿ.ಮುರುಗೇಶಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಶಾಸನೋಕ್ತ ಕಾಲದ ವಿವರಗಳು, 6ನೇ ತಾರೀಕು ಎಪ್ರಿಲ್ 1223ರ ಗುರುವಾರಕ್ಕೆ ಸರಿಹೊಂದುತ್ತದೆ. ಲಿಪಿ ಲಕ್ಷಣಗಳೂ ಸರಿಸುಮಾರು ಇದೇ ಕಾಲಕ್ಕೆ ಅನ್ವಯವಾಗುತ್ತವೆ. ಶಾಸನದಲ್ಲಿ ಬೃಹಸ್ಪತಿವಾರ ಎಂಬುದನ್ನು ಬ್ರಹವಾರವೆಂದು, ಅಕ್ಷಯ ಎಂಬುದನ್ನು ಹಕ್ಷಯ ಎಂದೂ, ಬಿಟ್ಟ ಎನ್ನುವುದನ್ನು ಬಿಠ ಎಂದು ಬರೆಯಲಾಗಿದೆ ಎಂದವರು ಹೇಳಿದ್ದಾರೆ.

ಶಾಸನದ ಮಹತ್ವ: ಅರಸೀಕೆರೆ, ಹೊಯ್ಸಳ ರಾಜ್ಯದ ಹೃದಯಭಾಗ ವಾಗಿದ್ದು, ಹೊಯ್ಸಳರ ಕಾಲದ ಅಸಂಖ್ಯಾತ ಶಾಸನ, ವಾಸ್ತುಶಿಲ್ಪ, ಕೆರೆ-ಕಟ್ಟೆಗಳ ತವರೂರಾಗಿದೆ. ಪ್ರಸ್ತುತ ಶಾಸನದ ಮೇಲ್ಭಾಗದ ಪಟ್ಟಿಕೆಯಲ್ಲಿ ಶಿವಲಿಂಗವಿದೆ. ಲಿಂಗದ ಬಲಭಾಗದಲ್ಲಿ ವ್ಯಕ್ತಿಯೋರ್ವ ಅಂಜಲೀಬದ್ಧನಾಗಿ ಕುಳಿತಿರುವಂತೆ, ಎಡಭಾಗದಲ್ಲಿ ಹಸುವನ್ನು ಚಿತ್ರಿಸಲಾಗಿದೆ.

ಕಾಚಯ ನಾಯಕ ಎಂಬ ಸ್ಥಳೀಯ ಅಧಿಕಾರಿ ವೈಶಾಖ ಬಹುಳದಂದು ಭಂಟಾರ ಎಂಬ ವ್ಯಕ್ತಿಗೆ ಮರಣೋತ್ತರವಾಗಿ ಅಕ್ಷಯ ಪುಣ್ಯ ಪ್ರಾಪ್ತಿ ಆಗಲಿಯೆಂದು ನೀಡಿದ ದಾನವನ್ನು ಶಾಸನದಲ್ಲಿ ದಾಖಲಿಸಲಾಗಿದೆ. ಭಂಟಾರ ಎಂಬುದು ಬಹುಶಃ ಭಟ್ಟಾರಕ ಎಂಬ ಪದದ ಪ್ರಕ್ಷಿಪ್ತ ರೂಪವಾಗಿರುವಂತಿದೆ.

ಭಂಟಾರ ತಳಲೂರು ಗ್ರಾಮದಲ್ಲಿರುವ ಹೊಯ್ಸಳರ ಕಾಲದ ಶಿವ ದೇವಾಲಯದ ಶೈವಯತಿ ಆಗಿದ್ದಿರಬಹುದು. ಬಹುಳ ದಲ್ಲಿ ಮಾಡಿದ ದಾನ ಬಹುತೇಕ ಮರಣೋತ್ತರ ಕ್ರಿಯೆಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ, ಈ ಶಾಸನವನ್ನು ಭಂಟಾರ ಅಥವಾ ಭಟ್ಟಾರಕ ಎಂಬ ಶೈವಯತಿಯ ಮರಣ ದಾಖಲೆಯೆಂದು ಪರಿಗಣಿಸಬಹುದಾಗಿದೆ ಎಂದು ಪ್ರೊ.ಮುರುಗೇಶಿ ತಿಳಿಸಿದ್ದಾರೆ.

Tags

Hoysala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X