KUNDAPURA | ಆಯಿಲ್ ಮಿಲ್ ನಲ್ಲಿ ಬೆಂಕಿ ಅವಘಡ : ಅಪಾರ ನಷ್ಟ

ಕುಂದಾಪುರ: ತಾಲೂಕಿನ ಸಿದ್ದಾಪುರದ ಜನ್ಸಾಲೆ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಮಧು ಆಯಿಲ್ ಮಿಲ್ ನಲ್ಲಿ ಬುಧವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.
ಬುಧವಾರ ತಡರಾತ್ರಿ ಶ್ರೀ ಮಧುಮಾಯ ಆಯಿಲ್ಸ್(ಮಧು) ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ ನಿಂದ ತಲಾ ಒಂದೊಂದು ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಸ್ಥಳೀಯರ ಸಹಕಾರದಲ್ಲಿ ರಾತ್ರಿಯಿಂದ ಬೆಳಗ್ಗೆ 9ರ ವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆ ತೊಡಗಿಸಿಕೊಂಡಿದ್ದಾರೆ. ತೆಂಗಿನೆಣ್ಣೆ ಆದ ಕಾರಣ ಬೆಂಕಿ ತೀವೃತೆ ಜಾಸ್ತಿಯಾಗಿತ್ತು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
Next Story







