Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನವ ಕಳ್ಳಸಾಗಾಣಿಕೆ ಹೀನಕೃತ್ಯ,...

ಮಾನವ ಕಳ್ಳಸಾಗಾಣಿಕೆ ಹೀನಕೃತ್ಯ, ತಡೆಗಟ್ಟಲು ಎಲ್ಲರೂ ಬದ್ಧರಾಗಬೇಕು : ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ11 Nov 2025 8:07 PM IST
share
ಮಾನವ ಕಳ್ಳಸಾಗಾಣಿಕೆ ಹೀನಕೃತ್ಯ, ತಡೆಗಟ್ಟಲು ಎಲ್ಲರೂ ಬದ್ಧರಾಗಬೇಕು : ಮಂಜುನಾಥ್
ಮಾನವ ಕಳ್ಳ ಸಾಗಾಣಿಕೆಯ ತಡೆ ಕುರಿತ ಮಾಹಿತಿ ಕಾರ್ಯಕ್ರಮ

ಕೋಟ, ನ.11: ಮಾನವ ಕಳ್ಳ ಸಾಗಾಣಿಕೆ ಮಾಡುವುದು, ದೌರ್ಜನ್ಯ ಎಸಗುವುದು ಒಂದು ಹೀನಕೃತ್ಯವಾಗಿದೆ. ಇದೊಂದು ಸಮಾಜಕ್ಕೆ ಅಂಟಿದ ರೋಗ. ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕರು ಬದ್ಧರಾಗಿರಬೇಕು ಎಂದು ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಹಾಗೂ ಖ್ಯಾತ ವಕೀಲರಾದ ಮಂಜುನಾಥ್ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಕೋಟದ ವಿವೇಕ ಪದವಿ ಪೂರ್ವ ಕಾಲೇಜು, ಓಯಾಶಿಸ್ ಇಂಡಿಯಾ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ, ಪಡಿ ಮಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಸಂಯುಕ್ತವಾಗಿ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆಯ ತಡೆ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಮಕ್ಕಳು, ಮಹಿಳೆ, ಪುರುಷ ಎನ್ನದೆ ಎಲ್ಲ ರೀತಿಯ ಜನರನ್ನು ಇಂದು ವಿವಿಧ ಕಾರಣಗಳಿಗಾಗಿ ಅಪಹರಣ, ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಮುಖ್ಯವಾಗಿ ಹಣದ ಆಮಿಷ, ದೌರ್ಜನ್ಯಗಳಿಂದ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಇಂದು ಯಾರದೋ ಕುಟುಂಬದಲ್ಲಿ ಆಗಿರುವಂತದ್ದು, ಮುಂದಿನ ದಿನಗಳಲ್ಲಿ ನಮ್ಮ ಕುಟುಂಬದಲ್ಲೂ ಅಗಬಹುದು. ಈ ಎಚ್ಚರಿಕೆಯಿಂದ ನಾವು ಎದುರಿಸಿ, ಕಳ್ಳ ಮಾನವ ಸಾಗಾಣಿಕೆ ಆಗದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಾನವ ಕಳ್ಳ ಸಾಗಾಣಿಕೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದವರು ಹೇಳಿದರು.

ಮಾನವ ಕಳ್ಳ ಸಾಗಾಣಿಕೆ ಕಂಡುಬಂದರೆ ತಕ್ಷಣ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ ನೀಡಬೇಕು. ಅನೇಕ ಸಲ ಪೊಲೀಸರಿಗೆ ಮಾಹಿತಿ ಕೊಟ್ಟರೆ ತಾವು ಸಾಕ್ಷಿ ಆಗಿ, ನ್ಯಾಯಾಲಯಕ್ಕೆ ಅಲೆಯಬೇಕಾಗುತ್ತದೆ ಎಂಬ ತಪ್ಪು ಗ್ರಹಿಕೆ ಇರುತ್ತದೆ. ಆದರೆ ಸಾಕ್ಷಿದಾರ ಒಂದು ಸಲ ಮಾತ್ರ ನ್ಯಾಯಾಲಯಕ್ಕೆ ಬಂದು ಸಾಕ್ಷಿ ನುಡಿದರೆ ಸಾಕು. ಮತ್ತೇ ಅವರು ಬರುವ ಅಗತ್ಯವಿಲ್ಲ. ಆದ್ದರಿಂದ ಸಮಾಜ ಈ ಅನಿಷ್ಠವನ್ನು ತೊಲಗಿಸಲು ಧೈರ್ಯದಿಂದ ಮುಂದೆ ಬಂದು, ಮಾಹಿತಿ ಹಂಚಿಕೊಳ್ಳಬೇಕು ಎಂದು ನ್ಯಾಯವಾದಿ ಮಂಜುನಾಥ್ ವಿವರಿಸಿದರು.

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ್ ನಾವಡ ಅಧ್ಯಕ್ಷತೆ ವಹಿಸಿ, ಮಾನವ ಕಳ್ಳ ಸಾಗಾಣಿಕೆ ಅಪರಾಧ ಹಾಗೂ ರಕ್ಷಣಾತ್ಮಕ ಕಾನೂನುಗಳ ಕುರಿತು ಮಾಹಿತಿ ನೀಡಿದರು.

ಓಯಾಶಿಸ್ ಇಂಡಿಯಾದ ಸಂಗೀತಾ, ಮಾನವ ಕಳ್ಳ ಸಾಗಣಿಕೆಯ ತಡೆ ಅಭಿಯಾನದ ಗುರಿ ಮತ್ತು ಉದ್ದೇಶದ ಕುರಿತು ವಿವರಿಸಿದರು. ನಂತರ ಕ್ರೈಸ್ಟ್ ಯುನಿರ್ವಸಿಟಿಯ ವಿದ್ಯಾರ್ಥಿಗಳು ಮಾನವ ಮಾರಾಟ, ಕಳ್ಳ ಸಾಗಣಿಕೆ, ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತಾಗಿ ಜನಜಾಗೃತಿ ಮೂಡಿಸುವ ಬೀದಿ ನಾಟಕವನ್ನು ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಸದಸ್ಯ ರಮಾನಂದ ಭಟ್ ಚೇಂಪಿ, ಉಡುಪಿ ಜಿಲ್ಲಾ ಮಹಿಳಾ ಮಂಡಳಿಯ ಉಪಾಧ್ಯಕ್ಷೆ ರಾಧಾ ದಾಸ್, ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೆನ್ನಿ ಡಿಸೋಜ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ತಿಲೋತ್ತಮ ನಾಯಕ್, ಕೋಟ ವಿವೇಕ ಬಾಲಕರ ಪ್ರೌಢ ಶಾಲೆಯ ಹಿರಿಯ ಶಿಕ್ಷಕಿ ರತಿಬಾಯಿ, ವಿವೇಕ ಬಾಲಕಿಯರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ವಿವೇಕ ಬಾಲಕರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರೇಮಾನಂದ, ವಿವೇಕ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಪ್ರೀತಿ ರೇಖಾ, ಓಯಾಶಿಸ್ ಸಂಸ್ಥೆಯ ಆರ್ಮುಗಂ, ಸಂಗೀತ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X