Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ...

ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆ: ಮನು ಪಟೇಲ್

ವಾರ್ತಾಭಾರತಿವಾರ್ತಾಭಾರತಿ19 Nov 2025 7:48 PM IST
share
ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆ: ಮನು ಪಟೇಲ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ. ಇದು ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಹೇಳಿದ್ದಾರೆ.

ಬುಧವಾರ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕ್ಷೇತ್ರ ಮಟ್ಟದ ವಿವಿಧ ಇಲಾಖೆಗಳ ಭಾಗೀದಾರರಿಗೆ ತರಬೇತಿಯ ಜಿಲ್ಲಾ ಮಟ್ಟದ ಕಾರ್ಯಾಗಾರ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇದನ್ನು ತಡೆಗಟ್ಟುವಲ್ಲಿ ವಿವಿಧ ಭಾಗೀದಾರ ಇಲಾಖೆಗಳು ಕೈಜೋಡಿಸಿ ಇಂಥ ಕಾನೂನು ಬಾಹಿರ ಚಟವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದೆ. ಇದನ್ನು ಸಂಪೂರ್ಣ ತಡೆಗಟ್ಟುವಲ್ಲಿ ಪೋಲೀಸ್, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕಿದೆ ಎಂದರು.

ಉಡುಪಿ ಉಪವಿಭಾಗ ಪೋಲೀಸ್ ನಿರೀಕ್ಷಕ ಗೋಪಾಲಕೃಷ್ಣ ಜೋಗಿ ಮಾತನಾಡಿ, ಭಾಗೀದಾರ ಇಲಾಖೆಗಳಿಗೆ ಇದೊಂದು ಅರ್ಥಪೂರ್ಣ ಕಾರ್ಯಾಗಾರವಾಗಿದ್ದು, ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ ಮಾತನಾಡಿ, ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ಭಾಗೀದಾರ ಇಲಾಖೆಗಳ ಪಾತ್ರ ಮತ್ತು ಜವಾಬ್ದಾರಿ ಮಹತ್ವದಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದರ ಅರಿವನ್ನು ಮೂಡಿಸುವ ಅವಶ್ಯಕತೆ ಇದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ನೇಟಿವ್ ಆರ್ಗನೈಸೇಷನ್ ಕುಂದಾಪುರ ಇದರ ವ್ಯವಸ್ಥಾಪಕ ಪ್ರೇಮಾನಂದ ಕಲ್ಮಾಡಿ ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆಗೆ ಕ್ರಮಬದ್ಧ ಕಾರ್ಯ ವಿಧಾನ ಎನ್ನುವ ವಿಷಯದ ಕುರಿತು ಹಾಗೂ ವಕೀಲೆ ಸೌಮ್ಯ ಅಶೋಕ್ ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಹಾಗೂ ಐಟಿಡಿಪಿ 1956 ಕಾಯ್ದೆಯ ಅನುಷ್ಟಾನ ಕುರಿತಂತೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಉಪನಿರೀಕ್ಷಕರಾದ ನಾರಾಯಣ ಮತ್ತು ಪ್ರಕಾಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು, ಕಾರ್ಮಿಕ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ರಾಜ್ಯ ಮಹಿಳಾ ನಿಲಯ ಅಧೀಕ್ಷಕರು, ಬಾಲಕಿಯರ ಬಾಲಮಂದಿರ, ಬಾಲಕರ ಬಾಲಮಂದಿರ, ಪರೀಕ್ಷಣಾಧಿಕಾರಿ ನಿರೀಕ್ಷಣಾಲಯ, ಹಿರಿಯ ಮೇಲ್ವಿಚಾರಕ/ಮೇಲ್ವಿಚಾರಕಿ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿಮಿತ್ರರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿಗಳು, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಉಡುಪಿ, ಕಾರ್ಕಳ, ಕುಂದಾಪುರಗಳ ಸಿಬ್ಬಂದಿಗಳು, ಆರಕ್ಷಕ ಇಲಾಖಾಅಧಿಕಾರಿ/ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧಾ ಬಿ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ದೀಪಾ ಕಾರ್ಯಕ್ರಮ ನಿರೂಪಿಸಿ, ಶಾರದಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X