Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತನಿಖೆ ವಿಳಂಬವಾದರೆ ಪರಶುರಾಮ ಥೀಮ್...

ತನಿಖೆ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್

ವಾರ್ತಾಭಾರತಿವಾರ್ತಾಭಾರತಿ12 Jan 2026 12:25 PM IST
share
ತನಿಖೆ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವು ಗಂಭೀರ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಕುರಿತು ನ್ಯಾಯಯುತ ಹಾಗೂ ತ್ವರಿತ ತನಿಖೆ ನಡೆಸದಿದ್ದರೆ ಮತ್ತೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕಾರ್ಕಳ ಸಮಾನ ಮನಸ್ಕ ತಂಡದ ದಿವ್ಯಾ ನಾಯಕ್ ಎಚ್ಚರಿಸಿದ್ದಾರೆ.

ಪರಶುರಾಮ ಮೂರ್ತಿ ಪ್ರತಿಷ್ಠಾಪನೆಯ ದಿನದಿಂದಲೇ ಪ್ರತಿಮೆಯ ಶುದ್ಧತೆ ಪರಿಶೀಲನೆ ಹಾಗೂ ಥೀಮ್ ಪಾರ್ಕ್ ಆವರಣದಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಆಗ್ರಹಿಸಿ ನಾವು 14 ಮಂದಿ ಉಪವಾಸ ಸತ್ಯಾಗ್ರಹ ನಡೆಸಿದ್ದೇವೆ. ಆದರೆ ಆ ಸಂದರ್ಭದಲ್ಲಿ ಸ್ಥಳೀಯ ಶಾಸಕ ವಿ. ಸುನಿಲ್ ಕುಮಾರ್ ಈ ವಿಚಾರದಲ್ಲಿ ಸಂಪೂರ್ಣ ಮೌನ ವಹಿಸಿದ್ದರು ಎಂದು ಅವರು ಆರೋಪಿಸಿದರು. ಪರಶುರಾಮ ಪ್ರತಿಮೆಯ ಅರ್ಧ ಭಾಗ ಕಳವಾಗುವವರೆಗೆ ಶಾಸಕರಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಆದರೆ ಇತ್ತೀಚಿನ ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗುವ ಮುನ್ನವೇ ಶಾಸಕರು ಫೇಸ್‌ಬುಕ್‌ನಲ್ಲಿ ದರೋಡೆ ಕುರಿತು ಪೋಸ್ಟ್ ಮಾಡಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ ಎಂದು ದಿವ್ಯಾ ನಾಯಕ್ ಹೇಳಿದರು.

ಇನ್ನಷ್ಟು ಆತಂಕಕಾರಿ ಸಂಗತಿಯೆಂದರೆ, ಇತ್ತೀಚಿನ ದರೋಡೆ ಪ್ರಕರಣದ ದೂರನ್ನು ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಅರುಣ್‌ಕುಮಾರ್ ಅವರು ದಾಖಲಿಸಿದ್ದಾರೆ. ಇದೇ ಅರುಣ್‌ಕುಮಾರ್ ಅವರು ಪರಶುರಾಮ ಥೀಮ್ ಪಾರ್ಕ್ ಪ್ರತಿಮೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹೈಕೋರ್ಟ್‌ಗೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಐಪಿಸಿ 420, 409, 120(ಬಿ), 34 ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿತ್ತು. ಆದರೆ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮುನ್ನವೇ ಯಾವುದೇ ಸ್ಪಷ್ಟನೆ ನೀಡದೆ ಅವರ ಅಮಾನತನ್ನು ರದ್ದುಗೊಳಿಸಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವು ಅರುಣ್‌ಕುಮಾರ್ ಅವರ ಅಮಾನತು ರದ್ದುಪಡಿಸಿದ ಆಧಾರವೇನು? ಪ್ರಕರಣದ ಪ್ರಮುಖ ಅಂಶಗಳನ್ನು ಮರೆಮಾಚುವ ಅಥವಾ ತಿರುಚುವಲ್ಲಿ ಅವರು ಭಾಗಿಯಾಗಿದ್ದರೆ ಅದರ ಹೊಣೆಗಾರಿಕೆ ಯಾರದು? ಎಂಬುದಕ್ಕೆ ಉತ್ತರ ನೀಡಬೇಕೆಂದು ದಿವ್ಯಾ ನಾಯಕ್ ಒತ್ತಾಯಿಸಿದರು.

ಪೊಲೀಸ್ ಇಲಾಖೆ ಆರೋಪಪಟ್ಟಿ ಸಲ್ಲಿಸಿ 6–7 ತಿಂಗಳು ಕಳೆದರೂ ಹೈಕೋರ್ಟ್‌ನಲ್ಲಿ ಒಂದೂ ವಿಚಾರಣೆ ನಡೆಯದಿರುವುದು, 2023ರ ಚುನಾವಣೆಯ ಸಂದರ್ಭದಲ್ಲಿ ನಡೆದಂತೆ ಈ ಪ್ರಕರಣವನ್ನೂ 2028ರ ಚುನಾವಣೆಯವರೆಗೆ ತಡೆಹಿಡಿಯಲಾಗುತ್ತಿದೆಯೇ ಎಂಬ ಅನುಮಾನ ಮೂಡಿಸುತ್ತಿದೆ ಎಂದು ಅವರು ಹೇಳಿದರು.

ರಾಜಕೀಯ ಪಕ್ಷಗಳಿಗೆ ಇದು ಚುನಾವಣಾ ರಾಜಕೀಯವಾಗಿರಬಹುದು. ಆದರೆ ಪ್ರತಿಯೊಬ್ಬ ಹಿಂದೂವಿಗೆ ಇದು ಧಾರ್ಮಿಕ ನಂಬಿಕೆಯ ಪ್ರಶ್ನೆಯಾಗಿದೆ. ನ್ಯಾಯಯುತ ತನಿಖೆಗಾಗಿ ಪೊಲೀಸ್ ಇಲಾಖೆಗೆ ಈಗಾಗಲೇ ಪತ್ರ ಸಲ್ಲಿಸಲಾಗಿದೆ. ಜೊತೆಗೆ ಆದ್ಯತೆಯ ಮೇರೆಗೆ ಥೀಮ್ ಪಾರ್ಕ್ ಆವರಣದಲ್ಲಿ ಸಿಸಿಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ರೀತಿಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದೆಂದು ಸಹ ಆಗ್ರಹಿಸಲಾಗಿದೆ ಎಂದು ಅವರು ಹೇಳಿದರು.

ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ. ತನಿಖೆ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ದಿವ್ಯಾ ನಾಯಕ್ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X