Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೋರಾಡದಿದ್ದರೆ ಕಾಡಂಚಿನ ಜನರ ಬದುಕು...

ಹೋರಾಡದಿದ್ದರೆ ಕಾಡಂಚಿನ ಜನರ ಬದುಕು ಶೋಚನೀಯ: ಫಾ.ಸಲೀನ್

ಕಸ್ತೂರಿ ರಂಗನ್ ವರದಿ ವಿರೋಧಿಸಿ ಹಳ್ಳಿಹೊಳೆ ಗ್ರಾಮಸ್ಥರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Sept 2024 9:12 PM IST
share
ಹೋರಾಡದಿದ್ದರೆ ಕಾಡಂಚಿನ ಜನರ ಬದುಕು ಶೋಚನೀಯ: ಫಾ.ಸಲೀನ್

ಬೈಂದೂರು, ಸೆ.25: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಹಾಗೂ ವೈಜ್ಞಾನಿಕ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಸುನಂದಾ ಗೇರು ಬೀಜ ಕಾರ್ಖಾನೆ ಸುಳುಗೋಡು ಚಕ್ರ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದ ಹೋರಾಟಗಾರ ಬೆಳ್ತಂಗಡಿಯ ಫಾ.ಡಾ.ಸಲೀನ್ ಜೋಸೆಫ್, ಪರಿಸರ ಸಂರಕ್ಷಣೆ ಉದ್ದೇಶದಿಂದ ಸುಪ್ರೀಂ ನಿರ್ದೇಶನದಂತೆ ಕಸ್ತೂರಿ ರಂಗನ್ ವರದಿ ಜಾರಿ ಸೂಚನೆಗಳು ಬಂದಿವೆ. ಈ ವರದಿಯಲ್ಲಿ ಜನ ವಸತಿ ಪ್ರದೇಶಗಳನ್ನು ಸಹ ಪರಿಸರ ಸೂಕ್ಷ್ಮ ವಲಯ ಎಂದು ಸೇರಿಸಿರುವುದು ದುರಂತ. ಇದರ ವಿರುದ್ಧ ಇನ್ನು ಜನರೇ ಧ್ವನಿ ಎತ್ತಬೇಕಿದೆ. ಉಡುಪಿ ಜಿಲ್ಲೆಯ ಸುಮಾರು 35 ಗ್ರಾಮಗಳ ಗ್ರಾಮಸ್ಥರು ಸಹ ಒಗ್ಗೂಡಿ ಹೋರಾಡದಿದ್ದರೆ ಕಾಡಂಚಿ ನಲ್ಲಿ ವಾಸಿಸುತ್ತರುವವರ ಬದುಕು ಶೋಚನೀಯ ವಾಗಲಿದೆ ಎಂದು ಎಚ್ಚರಿಸಿದರು.

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಜನರ ಹಿತರಕ್ಷಣೆ ನಿಟ್ಟಿನಲ್ಲಿ ಹೋರಾಡಲು ಸಿದ್ಧ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೇಗೆ ಹೋರಾಡಬೇಕು ಅನ್ನುವ ಬಗ್ಗೆ ಆದಷ್ಟು ಬೇಗ ಸಂಘಟಿತರಾಗಬೇಕಿದೆ. ಅರಣ್ಯ, ಪರಿಸರ ಸಂರಕ್ಷಣೆಗೆ ನಮ್ಮ ಬೆಂಬಲವಿದೆ. ಕೇರಳದಲ್ಲಿ ಮನುಷ್ಯರೇ (ಫಿಸಿಕಲ್) ಸರ್ವೇ ನಡೆಸಿದ್ದಾರೆ. ಆದರೆ ಇಲ್ಲಿ ಸ್ಯಾಟಲೈಟ್ ಸರ್ವೇಯಿಂದ ಜನ ವಸತಿ ಪ್ರದೇಶಗಳು ಸೇರಿಕೊಂಡಿವೆ. ಇಲ್ಲಿಯೂ ಫಿಸಿಕಲ್ ಸರ್ವೇ ಆಗಲಿ ಎಂದು ಒತ್ತಾಯಿಸಿದರು.

ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ಈ ವರದಿ ಜಾರಿಯಾದರೆ ಕಾಡಂಚಿನ ಗ್ರಾಮಗಳಲ್ಲಿ ನೆಲೆಸಿರುವ ಸಾವಿರಾರು ಕುಟುಂಬ ಗಳಿಗೆ ಸಮಸ್ಯೆಯಾಗಲಿದೆ. ಜನರಿಗೆ ಮಾತ್ರವಲ್ಲ, ಕೆಲ ಗ್ರಾಮಗಳ ಸರಕಾರಿ ಕಟ್ಟಡಗಳು ಅದೇ ವಲಯದಲ್ಲಿವೆ. ನಮ್ಮ ಹಕ್ಕನ್ನು ಕಸಿಯಲು ನಾವು ಬಿಡ ಬಾರದು. ಈ ನೆಲೆಯಲ್ಲಿ ಒಗ್ಗೂಡಿ ಹೋರಾಡ ಬೇಕು. ರಾಜ್ಯದಿಂದ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆರಳಿ ಮನವಿ ಮಾಡುವ ಅಗತ್ಯವಿದೆ. ಜನರೆಲ್ಲ ಒಗ್ಗೂಡಿ ವಿಧಾನಸೌಧದ ಎದುರು ಧರಣಿ ಮಾಡಬೇಕಾಗಿದೆ ಎಂದರು.

ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುದ್ದೂರು ಹಿತರಕ್ಷಣಾ ಸಮಿತಿ ಅಧ್ಯಕ್ಷ ಲಕ್ಷ್ಮಲ ಶೆಟ್ಟಿ, ವಂಡ್ಸೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಅತುಲ್ ಕುಮಾರ್ ಶೆಟ್ಟಿ, ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಸದಸ್ಯರಾದ ಪ್ರಭಾಕರ ನಾಯ್ಕ, ಗುಲಾಬಿ, ನೇತ್ರಾವತಿ, ಗಿರಿಜಾ, ದಿನೇಶ್ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ಕೃಷ್ಣ ಚಾತ್ರ ಸ್ವಾಗತಿಸಿದರು. ಜಡ್ಕಲ್ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವದಾಸ್ ವಿ.ಜೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಸದಸ್ಯ ಪ್ರದೀಪ್ ಕೊಠಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X