ಅಕ್ರಮ ದಾಸ್ತಾನು: ಅನ್ನಭಾಗ್ಯದ 7.14ಕ್ವಿಂಟಾಲ್ ಅಕ್ಕಿ ವಶ

ಸಾಂದರ್ಭಿಕ ಚಿತ್ರ
ಬೈಂದೂರು, ಜ.31: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿವ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಬೈಂದೂರು ಆಹಾರ ನಿರೀಕ್ಷಕರ ನೇತೃತ್ವದ ತಂಡ ಜ.30ರಂದು ಬೆಳಗ್ಗೆ ವಶಪಡಿಸಿಕೊಂಡಿದೆ.
ಅಬ್ದುಲ್ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವ ಬಗ್ಗೆ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ವಿನಯ್ ಕುಮಾರ ಈ ದಾಳಿ ನಡೆಸಿದ್ದಾರೆ. ಆರೋಪಿ ಈ ಅಕ್ಕಿಯನ್ನು ಕಾನೂನು ಬಾಹಿರವಾಗಿ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿರುವುದಾಗಿ ದೂರಲಾಗಿದೆ.
ಒಟ್ಟು 7.14 ಕ್ವಿಂಟಾಲ್ ತೂಕದ 16422ರೂ. ಮೌಲ್ಯದ 16 ಕುಚ್ಚಲು ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡು, ತಲ್ಲೂರು ಟಿಎಎಂಪಿಎಂಸಿ ಗೋಡಾಮಿಗೆ ಇರಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





