ಸೈಕ್ಲಿಂಗ್‌ನಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಡಾ.ಹೊಸಮನಿ

ಉಡುಪಿ, ಅ.6: ಸೈಕಲಿಂಗ್‌ನಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿ ಸಾಧ್ಯ. ಅದೇ ರೀತಿ ಪುಸ್ತಕಗಳು ಬದುಕಿನ ದಾರಿ ದೀಪವಾಗಿದೆ. ಪಠ್ಯಪುಸ್ತಕಗಳು ಮಾತ್ರವಲ್ಲದೆ ಪಠ್ಯೇತರ ಪುಸ್ತಕಗಳನ್ನೂ ಓದಿ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ಕುಮಾರ್ ಎಸ್. ಹೊಸಮನಿ ಹೇಳಿದ್ದಾರೆ.
ನಗರದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಇಂದು ನಗರ/ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಉಡುಪಿ ಹಾಗೂ ಮೈಸೂರು ಬಾಲ್ಯ ಫೌಂಡೇಶನ್‌ಗಳ ಸಂಯುಕ್ತ ಆಶ್ರಯದಲ್ಲಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ/ಪರಿಕರಗಳ ವಿತರಣೆ ಮತ್ತು ಮೈಸೂರು ಅಥ್ಲೆಟ್ಸ್ ಕ್ಲಬ್ ವತಿಯಿಂದ ಸೈಕ್ಲಿಂಗ್‌ನಿಂದ ದೇಹದಾರ್ಢ್ಯತೆ ವೃದ್ಧಿಸುವ, ಮಾನಸಿಕ/ದೈಹಿಕ ಆರೋಗ್ಯ ಕುರಿತು ಅರಿವು ಕಾರ್ಯಕ್ರಮವನ್ನು ದೀಪಬೆಳಗಿಸುವ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿ ಗಳಿಗೆ ನೋಟುಪುಸ್ತಕಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೇಖಕಿ ವಸಂತಿ ಶೆಟ್ಟಿ ಬ್ರಹ್ಮಾವರ ಮಾತನಾಡಿ ವಿದ್ಯಾರ್ಥಿಗಳು ಇಲ್ಲಿನ ಸುಸಜ್ಜಿತ ಗ್ರಂಥಾಲಯದ ಸದ್ಭಳಕೆ ಮಾಡಿ ಕೊಳ್ಳುವುದರೊಂದಿಗೆ ದೈನಂದಿನ ಜೀವನದಲ್ಲಿ ಸೈಕಲಿಂಗ್ ಮಾಡುವುದರ ಪ್ರಯೋಜ ನದ ಕುರಿತು ಕಿವಿಮಾತು ಹೇಳಿದರು.
ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಮೈಸೂರು ಇಲ್ಲಿನ ಉಪನಿರ್ದೇಶಕರಾಗಿರುವ ಬಿ. ಮಂಜುನಾಥ್, ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿದ್ಯಾಂಗ ಉಪನಿರ್ದೇಶಕ ಗಣಪತಿ ಕೆ., ನಗರ ಕೇಂದ್ರ ಗ್ರಂಥಾಲಯ, ಕೇಂದ್ರ ವಲಯ ಬೆಂಗಳೂರು ಇಲ್ಲಿನ ಉಪನಿರ್ದೇಶಕ ದಿವಾಕರ ಮಾತನಾಡಿದರು.
ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ, ಮಂಗಳೂರಿನ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ರಾಘವೇಂದ್ರ ಕೆ.ವಿ, ಬೆಂಗಳೂರಿನ ಉತ್ತರ ವಲಯ ನಗರಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಚಂದ್ರಶೇಖರ ಎಚ್., ಗ್ರಾಮಾಂತರದ ಡಿ.ಎಚ್. ಕೇಸರಿ, ಮೈಸೂರು ಪೊಲೀಸ್ ಇಲಾಖೆಯ ನಿವೃತ್ತ ಸಹಾಯಕ ಆಯುಕ್ತ ಎಚ್. ಎಸ್. ದೀಪಕ್, ಧನಂಜಯ, ಉಡುಪಿಯ ಗಾಯತ್ರಿ, ಜಯಶ್ರೀ ಎಂ.ನಾಗರಾಜ್, ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಮುಖ್ಯೋಪಾಧ್ಯಾಯಿನಿ ಇಂದಿರಾ ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕರಾದ ರಂಜಿತ ಸಿ. ಕಾರ್ಯಕ್ರಮ ನಿರೂಪಿಸಿದರು. ಶಕುಂತಳಾ ಕುಂದರ್ ವಂದಿಸಿದರು.ಎ







