ಅ.4ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಕಚೇರಿ ಉದ್ಘಾಟನೆ

ಉಡುಪಿ : 25 ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿರುವ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ರಜತ ಸಂಭ್ರಮದಲ್ಲಿದ್ದು ಉಡುಪಿ ನಗರದ ಹೃದಯಭಾಗದಲ್ಲಿರುವ ಜಾಮಿಯಾ ಮಸೀದಿಯ ಸಮೀಪದ ವಿ.ಕೆ.ಪ್ಯಾರಡೈಸ್ ಕಟ್ಟಡದಲ್ಲಿ ನೂತನವಾಗಿ ಆರಂಭಿಸಲಾದ ಒಕ್ಕೂಟದ ಸ್ವಂತ ಕಚೇರಿಯ ಉದ್ಘಾಟನಾ ಸಮಾರಂಭವು ಅ.4ರಂದು ನಡೆಯಲಿದೆ.
ನೂತನ ಕಚೇರಿಯನ್ನು ರಾಜ್ಯ ವಕ್ಫ್, ಹಜ್, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ವಿಕೆ ಗ್ರೂಪ್‌ನ ಮಾಲಕ ಕರುಣಾಕರ ಎಂ.ಶೆಟ್ಟಿ, ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಸುಹೇಲ್ ಅಹ್ಮದ್ ಮರೂರು, ಸಹಬಾಳ್ವೆ ಉಡುಪಿ ಜಿಲ್ಲಾ ಸಂಚಾಲ ಕೆ.ಫಣಿರಾಜ್, ಸಹಬಾಳ್ವೆ ಕುಂದಾಪುರ ತಾಲೂಕು ಸಂಚಾಲಕ ರಾಮಕೃಷ್ಣ ಹೆರ್ಳೆ ಭಾಗವಹಿಸಲಿರುವರು.
ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಅಬ್ದುಲ್ಲಾ ಪರ್ಕಳ, ಮಾಜಿ ಅಧ್ಯಕ್ಷ ಅಬ್ದುಲ್ಲಾ ನಾವುಂದ, ಭಟ್ಕಳ ಮಜ್ಲಿಸ್ ಇ ಇಸ್ಲಾಹ್ ಓ ತಂಝೀಮ್ ಅಧ್ಯಕ್ಷ ಇನಾಯತುಲ್ಲ ಶಾಬಂದ್ರಿ, ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಯುದ್ದೀನ್ ಕುದ್ರೋಳಿ, ಉದ್ಯಮಿ ಅಥಾವುಲ್ಲಾ ಹೈದರ್ ತೋನ್ಸೆ, ತೌಫೀಕ್ ಫೀಶರೀಸ್ ನಾವುಂದ ಇದರ ಬದ್ರುದ್ದೀನ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.




