Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಶ್ಚಿಮ ವಲಯ ಮಟ್ಟದ ಗೃಹರಕ್ಷಕರ...

ಪಶ್ಚಿಮ ವಲಯ ಮಟ್ಟದ ಗೃಹರಕ್ಷಕರ ಕ್ರೀಡಾಕೂಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ12 Nov 2025 8:56 PM IST
share
ಪಶ್ಚಿಮ ವಲಯ ಮಟ್ಟದ ಗೃಹರಕ್ಷಕರ ಕ್ರೀಡಾಕೂಟ ಉದ್ಘಾಟನೆ

ಉಡುಪಿ, ನ.12: ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಮಂಗಳೂರು ಯೆನೆಪೋಯ ವಿಶ್ವ ವಿದ್ಯಾಲಯದ ಕುಲಪತಿ ಡಾ.ವಿಜಯ್ ಕುಮಾರ್ ಮಾತನಾಡಿ, ಶಿಸ್ತು, ತಾಳ್ಮೆ, ದಕ್ಷತೆ ಹಾಗೂ ಬದ್ಧತೆಗೆ ಹೆಸರಾಗಿರುವ ಗೃಹರಕ್ಷಕರಿಗೆ ಕ್ರೀಡಾಕೂಟವನ್ನು ಆಯೋಜಿಸುವುದರಿಂದ ಅವರು ದೈಹಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಹಾಗೂ ಸೇವೆಯ ವೇಳೆ ತಂಡವಾಗಿ ಕೆಲಸ ಮಾಡಲು ಪ್ರೇರಣೆ ನೀಡಲಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಪಡೆಯ ಮತ್ತೊಂದು ಪ್ರಮುಖ ಭಾಗವಾಗಿದೆ. ಗೃಹರಕ್ಷಕರು ಹಗಲು-ರಾತ್ರಿಯೆನ್ನದೇ ತುರ್ತು ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳ ಆಯೋಜನೆ ಮನಸ್ಸಿಗೆ ಮುದ ನೀಡುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ. ಇಂದಿನ ಸೋಲು ಮುಂದಿನ ಗೆಲುಗೆ ದಾರಿಯಾಗಲಿದೆ ಎಂದರು.

ಪಶ್ಚಿಮ ವಲಯ ಮಟ್ಟದ ಈ ಕ್ರೀಡಾಕೂಟದಲ್ಲಿ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು ಹಾಗೂ ಕಾರವಾರ ಜಿಲ್ಲೆಗಳ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕಷರ್ಕ ಪಥಸಂಚಲನ ನಡೆಯಿತು. ಕ್ರೀಡಾಂಗಣಕ್ಕೆ ಸಂದೀಪ್ ಚಿಕ್ಕಮಗಳೂರು ಕ್ರೀಡಾಜ್ಯೋತಿ ತಂದರು. ಬಳಿಕ ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ, ವೈದ್ಯೆ ಡಾ.ಶೃತಿ ಬಲ್ಲಾಳ, ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ.ರೋಶನ್ಕುಮಾರ್ ಶೆಟ್ಟಿ, ವಿವಿಧ ಘಟಕಗಳ ಘಟಕಾಧಿಕಾರಿಗಳು, ಗೃಹರಕ್ಷಕರು ಉಪಸ್ಥಿತರಿದ್ದರು.

ಗೃಹರಕ್ಷಕ ದಳ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಸ್ವಾಗತಿಸಿ, ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಸ್ನೇಹ ಜಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X