Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರಿ ಬೀಚ್‌ನಲ್ಲಿ ಅಸಭ್ಯವಾಗಿ...

ಪಡುಬಿದ್ರಿ ಬೀಚ್‌ನಲ್ಲಿ ಅಸಭ್ಯವಾಗಿ ಫೋಟೊಶೂಟ್: ಪೊಲೀಸರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ30 Aug 2024 8:17 PM IST
share
ಪಡುಬಿದ್ರಿ ಬೀಚ್‌ನಲ್ಲಿ ಅಸಭ್ಯವಾಗಿ ಫೋಟೊಶೂಟ್: ಪೊಲೀಸರ ಸ್ಪಷ್ಟನೆ

ಉಡುಪಿ: ಒಬ್ಬ ಯುವತಿ ಹಾಗೂ ಯುವಕ ಪಡುಬಿದ್ರೆ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದು, ಅದರಂತೆ ಬೀಟ್ ಕರ್ತವ್ಯದಲ್ಲಿದ್ದ ಎಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ಪಡುಬಿದ್ರೆ ಫೋಟೊ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ಯುವಕ ಹಾಗೂ ಯುವತಿಯನ್ನು ಕರೆದು ಬ್ಲೂಫ್ಲ್ಯಾಗ್ ಬೀಚ್ ವಸತಿ ಪ್ರದೇಶವಾಗಿರುವ ಬಗ್ಗೆ ಮನವರಿಕೆ ಮಾಡಿದ್ದು, ಅವರು ಅಲ್ಲಿಂದ ತೆರಳಿದ್ದರು. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸ್ ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಯುವತಿಯನ್ನು ಸಂಪರ್ಕಿಸಿ, ಅವರಿಗೆ ಯಾವುದೇ ದೂರುಗಳಿದ್ದಲ್ಲಿ ಮುಕ್ತವಾಗಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಅವರಿಂದ ಯಾವುದೇ ದೂರು ಬಂದಲ್ಲಿ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ತಿಳಿಸಿದೆ.

ಘಟನೆಯ ವಿವರ: ಕ್ಯಾಥಿಶ್ರೀ ಎಂಬ ಸೋಷಿಯಲ್ ಮಿಡಿಯಾ ಇನ್‌ಫುಯೆನ್ಸರ್ ಯುವತಿ ಪಡುಬಿದ್ರಿ ಬೀಚ್‌ ನಲ್ಲಿ ಬಿಕಿನಿಯಲ್ಲಿ ಫೋಟ್‌ಶೂಟ್ ನಡೆಸಿದ್ದು, ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ಬಂದು ಅದಕ್ಕೆ ಅಡ್ಡಿಯನ್ನುಂಟು ಮಾಡಿದ್ದಾರೆ ಎಂದು ಆಕೆ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಬರೆದಿದ್ದಾಳೆ.

ಪಡುಬಿದ್ರೆ ಬೀಚ್‌ನಲ್ಲಿ ನನಗೆ ಕಹಿ ಅನುಭವವಾಗಿದೆ ಎಂದು ಬರೆದುಕೊಂಡಿರುವ ಆಕೆ, ಬಟ್ಟೆ ಬದಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಲ್ಲದಿದ್ದರೆ ಸ್ಥಳೀಯರು ಹಲ್ಲೆ ನಡೆಸಲಿದ್ದಾರೆ ಎಂದೂ ಬೆದರಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ಮಾಡಲು ಸ್ಥಳೀಯರು ಯಾರು? ಬೀಚ್‌ನಲ್ಲಿ ಫೋಟೊಶೂಟ್ ಮಾಡಿದರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೊಶೂಟ್ ಮಾಡುವುದು ಕಾನೂನು ಉಲ್ಲಂಘನೆಯೇ ಎಂದು ಆಕೆ ಪ್ರಶ್ನಿಸಿದ್ದಾಳೆ.

ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಗೆ 7 ಲಕ್ಷ ಫಾಲೋವರ್ಸ್ ಇದ್ದಾರೆ. ಘಟನೆ ವಾರದ ಹಿಂದೆ ನಡೆದಿದ್ದು, ವೀಡಿಯೊವನ್ನು ಆಕೆ ನಿನ್ನೆಯಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X