ಉಡುಪಿ | ಸ್ವಾತಂತ್ರ್ಯೋತ್ಸವ ದಿನಾಚರಣೆ: ಪಥಸಂಚಲದ ವಿಜೇತರು

ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ 79ನೇ ಜಿಲ್ಲಾ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಆಕರ್ಷಕ ಪಥ ಸಂಚಲನ ನಡೆಸಿದ ಕಾಲೇಜು ವಿಭಾಗದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಎನ್‌ಸಿಸಿ ಆರ್ಮಿ ಪ್ರಥಮ, ಪೂರ್ಣಪ್ರಜ್ಞ ಕಾಲೇಜಿನ ಎನ್‌ಸಿಸಿ ನೇವಿ ದ್ವಿತೀಯ ಹಾಗೂ ಕುಂಜಿಬೆಟ್ಟು ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜಿನ ಎನ್‌ಸಿಸಿ ಆರ್ಮಿ ತಂಡ ತೃತೀಯ ಬಹುಮಾನ ಪಡೆದವು.
ಪ್ರೌಢ ಶಾಲಾ ವಿಭಾಗದಲ್ಲಿ ವಳಕಾಡು ಸರಕಾರಿ ಪ್ರೌಢಶಾಲೆ ಪ್ರಥಮ, ಆವರ್ಸೆ ಸರಕಾರಿ ಪ್ರೌಢಶಾಲೆ ದ್ವಿತೀಯ ಹಾಗೂ ಮಣಿಪಾಲದ ಮಾಧವ ಕೃಪಾ ಪ್ರೌಢಶಾಲೆ ತೃತೀಯ ಸ್ಥಾನ ಪಡೆದರೆ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಳಕಾಡು ಸರಕಾರಿ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು.
ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದ್ರಾಳಿಯ ಇಂಗ್ಲೀಷ್ ಮಾಧ್ಯಮ ಹೈಸ್ಕೂಲ್ ಪ್ರಥಮ, ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ, ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ತೃತೀಯ ಸ್ಥಾನ ಪಡೆದರೆ ಆದಿಉಡುಪಿ ಇಂಗ್ಲೀಷ್ ಮಾಧ್ಯಮ ಹೈಸ್ಕೂಲ್ ಸಮಾಧಾನಕರ ಬಹುಮಾನ ಪಡೆಯಿತು.







