Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಣ ರಂಗದ ಎಲ್ಲ ಪ್ರಯೋಗಗಳಲ್ಲಿ...

ಶಿಕ್ಷಣ ರಂಗದ ಎಲ್ಲ ಪ್ರಯೋಗಗಳಲ್ಲಿ ಅಸಮಾನತೆ ತಾಂಡವ: ಡಾ.ಅನಿತಾ ರಾಂಪಾಲ್

ವಾರ್ತಾಭಾರತಿವಾರ್ತಾಭಾರತಿ19 Oct 2024 8:34 PM IST
share
ಶಿಕ್ಷಣ ರಂಗದ ಎಲ್ಲ ಪ್ರಯೋಗಗಳಲ್ಲಿ ಅಸಮಾನತೆ ತಾಂಡವ: ಡಾ.ಅನಿತಾ ರಾಂಪಾಲ್

ಉಡುಪಿ: ಶಿಕ್ಷಣ ರಂಗದಲ್ಲಿ ನಡೆಯುತ್ತಿರುವ ಎಲ್ಲಾ ಪ್ರಯೋಗ ಗಳಲ್ಲೂ ಅಸಮಾನತೆ ತಾಂಡವವಾಡುತ್ತಿದೆ. ಕಾರ್ಪೊರೇಟ್ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಪ್ರವೇಶ ಪಡೆಯುತ್ತಿವೆ. ಇಂತಹ ಪ್ರಶ್ನೆಗಳನ್ನು ಎತ್ತಿಕೊಳ್ಳಬೇಕಾದ ಅಗತ್ಯವಿದೆ ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ವಿಭಾಗದ ಮಾಜಿ ಮುಖ್ಯಸ್ಥೆ ಡಾ.ಅನಿತಾ ರಾಂಪಾಲ್ ಹೇಳಿದ್ದಾರೆ.

ಕರ್ನಾಟಕ ಭಾರತ ಜ್ಞಾನ ವಿಜ್ಞಾನ ಸಮಿತಿಯ(ಬಿಜಿವಿಎಸ್) ಉಡುಪಿ ಜಿಲ್ಲಾ ಘಟಕ, ಸಮಿತಿಯ ಟೀಚನ್ ಮಾಸ ಪತ್ರಿಕೆಯ ವತಿಯಿಂದ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾದ ಟೀಚರ್ ಶೈಕ್ಷಣಿಕ ಹಬ್ಬದ ಎರಡನೇ ದಿನವಾದ ಇಂದು ಅವರು ಶಿಕ್ಷಣದ ಸಮಕಾಲೀನ ಸವಾಲುಗಳು ಎಂಬ ವಿಷಯದ ಕುರಿತು ಮಾತನಾಡುತಿದ್ದರು.

ಶಿಕ್ಷಣ ಕ್ಷೇತ್ರದಲ್ಲಿನ ಸಾಲುಗಳನ್ನು ಎತ್ತ ಬಲ್ಲ ಸಾಮರ್ಥ್ಯ ಇರುವುದು ಶಿಕ್ಷಕರಿಗೆ ಮಾತ್ರ. ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ದಿನವೂ ಓದಿಸುವಂತಹ ಸ್ಥಿತಿ ಒದಗಿ ಬಂದಿದೆ. ಮಹಿಳೆಯರಿಗೆ ಮತದಾನದ ಹಕ್ಕು ನಮಗೆ ಸ್ವಾತಂತ್ರ್ಯ ಸಿಕ್ಕಾಗಲೇ ದೊರಕಿದೆ. ನಮ್ಮ ದೇಶ ಕ್ರಾಂತಿಕಾರಕ ಸಂವಿಧಾನ ವನ್ನು ಹೊಂದಿದೆ. ಆಹಾರ ವೈವಿಧ್ಯಮಯ ಪರಂಪರೆಯನ್ನು ಹೊಂದಿದೆ. ಶಿಕ್ಷಣದಿಂದ ಕಲಿಯಲಾರದ್ದೇ ಅಧಿಕವಾಗಿದೆ ಎಂದರು.

ಹೊಸ ಶಿಕ್ಷಣ ನೀತಿಯಿಂದ ಸಾಮಾಜಿಕ ಶೈಕ್ಷಣಿಕ ಅನಾನುಕೂಲಗಳು ಹೆಚ್ಚಾಗಿವೆ. ಇವುಗಳನ್ನು ಅಗೋಚರಗೊಳಿಸುವ ಪ್ರಯತ್ನ ನಡೆದಿವೆ. ಶಾಲೆಗಳನ್ನು ಮುಚ್ಚಲಾಗುತ್ತಿದೆ ಮತ್ತು ವಿಲೀನ ಮಾಡಲಾಗುತ್ತಿದೆ. ಸರಕಾರದ ಲೆಕ್ಕಾಚಾರದಲ್ಲಿ ಶಾಲೆಗಳೇ ನಿರುಪಯುಕ್ತವಾಗಿವೆ. ತಮಿಳುನಾಡು ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿದೆ ಎಂದು ಅವರು ತಿಳಿಸಿದರು.

ಈ ಸಂಬಂಧ ರಾಜ್ಯಗಳು ಒಪ್ಪಂದಕ್ಕೆ ಸಹಿ ಮಾಡದೆ ಹೋದರೆ ಕೇಂದ್ರ ಆ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಎಷ್ಟೋ ರಾಜ್ಯಗಳ ಎಸ್‌ಎಸ್‌ಎ ಶಿಕ್ಷಕರಿಗೆ ಕಳೆದ ಮೂರುನಾಲ್ಕು ತಿಂಗಳುಗಳಿಂದ ಸಂಬಳವೇ ಆಗಿಲ್ಲ. ಶಿಕ್ಷಣದ ಹಕ್ಕು ಜಾರಿಯಾಗುತ್ತಿಲ್ಲ ಎಂದ ಅವರು, ಶೇ.೧೦ರಷ್ಟು ಮಕ್ಕಳು ಮಾತ್ರ ಉನ್ನತ ಶಿಕ್ಷಣಕ್ಕೆ ಹೋಗುತ್ತಿದ್ದಾರೆ. ಉಳಿದವರ ಗತಿ ಏನು? ಎಂದು ಪ್ರಶ್ನಿಸಿದರು.

ಮಿದುಳು ಮತ್ತು ಕೈಗಳ ನಡುವಿನ ಸಂಬಂಧವನ್ನು ಕಡಿತ ಮಾಡಲಾಗುತ್ತಿದೆ. ಪ್ರಾಯೋಗಿಕ ಅಂಶಗಳೇ ಇಲ್ಲವಾಗುತ್ತಿದೆ. ನಾಯಕತ್ವದ ಲಕ್ಷಣಗಳು ಕುಸಿತವಾಗಿದೆ. ವ್ಯವಸ್ಥೆಯ ದೋಷಗಳನ್ನು ಮರೆಮಾಚುವ ಪ್ರಯತ್ನಗಳು ಪ್ರಜ್ಞಾ ಪೂರ್ವಕವಾಗಿ ಮಾಡಲಾಗುತ್ತಿದೆ. ಖಾಸಗಿ ಶಿಕ್ಷಣ ವ್ಯವಸ್ಥೆ ತಮಗೆ ಬೇಕಾಗಿರುವುದನ್ನು ಮಾಡುತ್ತಿವೆ. ಅವನ್ನು ಸರಕಾರಿ ವ್ಯವಸ್ಥೆ ಅನುಸರಿಸುತ್ತಿದೆ. ಶಿಕ್ಷಣದ ಮೂಲಕ ಎಲ್ಲವನ್ನು ವಿಮರ್ಶಾತ್ಮಕವಾಗಿ ನೋಡಬೇಕಾಗಿದೆ ಎಂದು ಅವರು ಹೇಳಿದರು.

ಟೀಚರ್ ಶೈಕ್ಷಣಿಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪ್ರೊ.ರಾಮಾನುಜಮ್ ‘ಜನ ವಿಜ್ಞಾನ ಚಳುವಳಿಯ ಮುಂದಿನ ಹಾದಿ’ ವಿಷಯದ ಕುರಿತು ಮಾತನಾಡಿದರು.

ಅಧ್ಯಕ್ಷತೆಯನ್ನು ವಿಮರ್ಶಕ, ಸಾಹಿತಿ ಪ್ರೊ.ಮುರಳೀಧರ್ ಉಪಾಧ್ಯ ವಹಿಸಿದ್ದರು. ಶೈಕ್ಷಣಿಕ ಹಬ್ಬ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಉಪಸ್ಥಿತರಿದ್ದರು. ಉಪನ್ಯಾಸಕ ಅನಂತರಾಮ ನಾಯಕ್ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು. ಬಿಜಿವಿಎಸ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು.

‘ಸರಕಾರವನ್ನು ಕೆಲಸ ಕೊಡಲು ಕೇಳಬೇಕಾಗಿಲ್ಲ. ನೀವೇ ಕೆಲಸ ಸೃಷ್ಟಿ ಮಾಡಿ ಕೊಳ್ಳಿ ಎನ್ನಲಾಗುತ್ತಿದೆ. ಶಿಕ್ಷಣದೊಂದಿಗೆ ಯಾವುದೂ ಸಂಬಂಧಿಸಿದಂತೆ ಕಾಣುವುದಿಲ್ಲ. ಶಿಕ್ಷಣಕ್ಕೂ ಉದ್ಯೋಗಕ್ಕೂ ಸಂಬಂಧವೇ ಇಲ್ಲವಾಗುತ್ತಿದೆ. ಸಕಾರಾತ್ಮಕವಾಗಿ ಯೋಚಿಸಿ ಎಂದು ಹೇಳಲಾಗುತ್ತಿದೆ. ಆದರೆ ವ್ಯವಸ್ಥೆ ಮಾತ್ರ ತನ್ನ ನಕಾರಾತ್ಮಕ ಕೆಲಸಗಳನ್ನು ಮಾಡುತ್ತಿದೆ. ಸಸ್ಯಾಹಾರ - ಮಾಂಸಾಹಾರಗಳ ನಡುವೆ ತಿಕ್ಕಾಟಗಳಾಗುತ್ತಿವೆ. ಸರಕಾರ ಇಂತಹ ವಿಷಯಗಳ ಬಗ್ಗೆ ಸ್ಪಷ್ಟ ನಿಲುವು ಹೊಂದುವುದು ಅಗತ್ಯವಾಗಿದೆ’

-ಡಾ.ಅನಿತಾ ರಾಂಪಾಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X