ಉಡುಪಿ: ಮುಳುಗಡೆಯಾಗುವ ಬಂಕೇರಕಟ್ಟ ಸೇತುವೆ ಪರಿಶೀಲನೆ

ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇರಕಟ್ಟ ಸೇತುವೆ ಮಳೆಗಾಲದಲ್ಲಿ ಮುಳುಗಡೆಯಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ಹಾಗೂ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮಳೆ ನೀರು ಸರಾಗವಾಗಿ ಹರಿಯಲು ತಾತ್ಕಾಲಿಕವಾಗಿ ಸೇತುವೆಯ ಕೆಳಭಾಗದ ಹೂಳು ಹಾಗೂ ಕಸಕಡ್ಡಿಗಳನ್ನು ತಕ್ಷಣ ತೆರವು ಮಾಡಲು ಕ್ರಮ ಕೈಗೊಂಡು ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಗ್ರಾಪಂ ಅಧ್ಯಕ್ಷೆ ಸುಜಾತ ಶೆಟ್ಟಿ, ಸದಸ್ಯರಾದ ರಾಜೇಶ್ ಪೂಜಾರಿ, ಶಶಿಧರ ಪೂಜಾರಿ, ಹರೀಶ್ ಮೊದಲಾದವರು ಉಪಸ್ಥಿತರಿದ್ದರು.
Next Story





