Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಶುರಾಮ ಥೀಮ್‌ಪಾರ್ಕ್‌ನಲ್ಲಿ ನಕಲಿ...

ಪರಶುರಾಮ ಥೀಮ್‌ಪಾರ್ಕ್‌ನಲ್ಲಿ ನಕಲಿ ಮೂರ್ತಿ ಪ್ರತಿಷ್ಠಾಪನೆ: ಆರೋಪ

ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗ ಪಡಿಸಿ: ಮುನಿಯಾಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Sept 2023 10:43 PM IST
share
ಪರಶುರಾಮ ಥೀಮ್‌ಪಾರ್ಕ್‌ನಲ್ಲಿ ನಕಲಿ ಮೂರ್ತಿ ಪ್ರತಿಷ್ಠಾಪನೆ: ಆರೋಪ

ಉಡುಪಿ : ಈ ವರ್ಷದ ಪ್ರಾರಂಭದಲ್ಲಿ ಚುನಾವಣೆಗೆ ಪೂರ್ವದಲ್ಲಿ ತರಾತುರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆಗೊಂಡ ಕಾರ್ಕಳ ತಾಲೂಕು ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪ್ರತಿಷ್ಠಾಪನೆಗೊಂಡ ಪರಶುರಾಮ ಮೂರ್ತಿ ನಕಲಿ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಮೂಲಕ ಸತ್ಯಾಸತ್ಯತೆಯನ್ನು ಬಹಿರಂಗ ಪಡಿಸಿದ ಬಳಿಕ ಅದನ್ನು ಬದಲಿಸಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ಗಿಮಿಕ್ ಆಗಿ ತರಾತುರಿಯಿಂದ ಅಲ್ಲಿ ನಕಲಿ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮೂರ್ತಿಯನ್ನು ಬದಲಿಸಲು ನಡೆದಿರುವ ಪ್ರಯತ್ನಗಳನ್ನು ನೋಡಿದರೆ ಇಡೀ ಯೋಜನೆಯಲ್ಲಿ ದೊಡ್ಡ ಅವ್ಯವಹಾರ ನಡೆದಿರುವ ಶಂಕೆಯೊಂದಿಗೆ ಹತ್ತಾರು ಅನುಮಾನಗಳು ಮೂಡುತ್ತಿದೆ ಎಂದವರು ಆರೋಪಿಸಿದರು.

ಅಲ್ಲಿ ಪ್ರತಿಷ್ಠಾಪನೆಗೊಂಡಿರುವ ಮೂರ್ತಿ ಮೊಣಕಾಲವರೆಗೆ ಮಾತ್ರ ಕಂಚಿನದ್ದಾಗಿದ್ದು, ನಂತರ ಯಾವುದರಿಂದ ಮಾಡಿದ್ದು ಎಂಬ ಬಗ್ಗೆ ಊಹಾಪೋಹ ಕೇಳಿಬಂದಿದೆ. ಈ ಮೂಲಕ ನಾಡಿನ ಜನರ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಚುನಾವಣೆಯಲ್ಲಿ ಮಾಜಿ ಸಚಿವ ಸುನಿಲ್‌ ಕುಮಾರ್ ವಿರುದ್ಧ ಸ್ಪರ್ಧಿಸಿ ಕಿರು ಅಂತರದಿಂದ ಸೋತ ಮುನಿಯಾಲು ಹೇಳಿದರು.

ಕಾರ್ಕಳ ತಾಲೂಕು ಬೈಲೂರು ಗ್ರಾಮದ ಉಮಿಕ್ಕಳ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಒಟ್ಟು 14.42 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ. ಇದರಲ್ಲಿ ಈಗಾಗಲೇ 6.72 ಕೋಟಿ ರೂ. ಪಾವತಿಯಾಗಿದೆ. ಇದರಲ್ಲಿ ಎರಡು ಕೋಟಿ ರೂ.ಪಾವತಿಗೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ ಎಂದರು. ಥೀಮ್ ಪಾರ್ಕ್‌ನ ಉದ್ಘಾಟನೆಯನ್ನು ಜನವರಿ 27ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ 2.18 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಇದರಲ್ಲಿ 60 ಲಕ್ಷ ರೂ.ಗಳ ಪಾವತಿಗೆ ಯಾವುದೇ ಬಿಲ್ಲುಗಳು ಲಭ್ಯವಾಗಿಲ್ಲ ಎಂದು ಆರೋಪಿಸಿದರು.

ಪರಶುರಾಮ ಪ್ರತಿಮೆ ನಿರ್ಮಾಣಕ್ಕೆ ಬೆಂಗಳೂರಿನ ಕಂಗೇರಿಯಲ್ಲಿರುವ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಮೂರ್ತಿಗೆ 2.04 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದೆ. ಮೂರ್ತಿ ರಚನೆಗೆ 2022ರ ಡಿ.6ರಂದು ಕೊಟೇಷನ್ ಆಹ್ವಾನಿಸಿದ್ದು, ಅದೇ ಡಿ.22ರಂದು ಕಾರ್ಯಾದೇಶವಾಗಿದೆ. ಆಶ್ಚರ್ಯವೆಂದರೆ ನವೆಂಬರ್ 25ರಂದೇ ತಲಾ 50 ಲಕ್ಷದಂತೆ ಒಂದು ಕೋಟಿ ರೂ.ಗಳನ್ನು ಮೂರ್ತಿ ರಚನೆಗೆ ಪಾವತಿಸಲಾಗಿದೆ ಎಂದರು.

ಕಂಗೇರಿಯಲ್ಲಿ ಪರಶುರಾಮ ಮೂರ್ತಿಯ ರಚನೆ ಇನ್ನೂ ನಡೆಯುತ್ತಿದೆ. ಇದನ್ನು ಖುದ್ದು ನಾನೇ ನೋಡಿದ್ದೇನೆ. ವಿಚಾರಿಸಿದಾಗ ಅಲ್ಲಿರುವ ಮೂರ್ತಿ ಯಾವುದೋ ಎಂಬುದು ತಮಗೆ ಗೊತ್ತಿಲ್ಲ ಎಂದು ಹೇಳುತ್ತಾರೆ. ಹೀಗಾಗಿ ಪ್ರತಿಷ್ಠಾಪನೆಗೊಂಡಿರುವುದು ನಕಲಿ ಮೂರ್ತಿ ಎಂಬುದು ಸಾಬೀತಾಗುತ್ತದೆ. ಹೀಗಾಗಿ ಮೂರ್ತಿಯ ನೈಜತೆ ಬಗ್ಗೆ ಜಿಲ್ಲಾಡಳಿತ ತನಿಖೆ ನಡೆಸಬೇಕು ಎಂದರು. ನಕಲಿ ಮೂರ್ತಿಯ ಪ್ರತಿಸ್ಠಾಪನೆಯಿಂದ ಪರಿಸರ 30-40 ಮನೆಗಳಿಗೆ ಅಪಾಯವಿದೆ ಎಂದವರು ದೂರಿದರು.

ಗೋಮಾಳ ಜಾಗ ಮಂಜೂರಾಗಿಲ್ಲ: ಥೀಮ್ ಪಾರ್ಕ್ ನಿರ್ಮಾಣಗೊಂಡಿರುವ ಎರ್ಲಪಾಡಿ ಗ್ರಾಮದ 1.58 ಎಕರೆ ಗೋಮಾಳ ಜಾಗವಾಗಿದ್ದು, ಅದನ್ನು ಕಾಮಗಾರಿಗೆ ಬಿಟ್ಟುಕೊಟ್ಟಿರಲಿಲ್ಲ. ಯಾವುದೇ ಅನುಮೋದನೆ ಪಡೆಯದೇ ಸರಕಾರದ ಗರಿಷ್ಠ ಪ್ರಮಾಣದ ಅನುದಾನವನ್ನು ಅನಧಿಕೃತವಾಗಿ ನಿರ್ಮಾಣಗೊಂಡಿರುವ ಥೀಮ್‌ಪಾರ್ಕ್‌ಗೆ ನೀಡಿರು ವುದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ ಎಂದು ಮುನಿಯಾಲು ಹೇಳಿದರು.

ಇದೀಗ ಕಳೆದ ಮಾ.15ರಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಈ ಜಮೀನಿನ ಮಂಜೂರಾತಿಯನ್ನು ತಿರಸ್ಕರಿಸಿದ್ದರೆ, ಮೇ 22ರಂದು ಉಡುಪಿ ಜಿಲ್ಲಾಧಿಕಾರಿ ಇಡೀ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಕಾರ್ಕಳ ತಹಶೀಲ್ದಾರ್ ಅವರೂ ಈ ಜಮೀನಿನ ಪ್ರಸ್ತಾವನೆಯನ್ನು ತಿರಸ್ಕರಿಸಿ ಎರ್ಲಪಾಡಿ ಪಿಡಜಿಐ ಅವರಿಗೆ ಆದೇಶ ಜಾರಿಗೊಳಿಸಿದ್ದಾರೆ. ಹೀಗಾಗಿ ಇಡೀ ಯೋಜನೆಯೇ ಅಕ್ರಮ ಎಂದಂತಾಗಿದೆ ಎಂದವರು ಹೇಳಿದರು.

ಶಾಸಕರ ನಿಗೂಢ ಮೌನ: ಕಾರ್ಕಳದ ಕಾಂಗ್ರೆಸ್ ಮುಖಂಡ ಶುಭದ ರಾವ್ ಅವರು ಮಾತನಾಡಿ, ಈ ವಿಷಯದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಇದುವರೆಗೆ ಮಾತನಾಡಿಲ್ಲ. ಅವರ ನಿಗೂಢ ಮೌನ ಸಂಶಯಗಳಿಗೆ ಕಾರಣವಾಗಿದೆ. ಎಲ್ಲಾ ಘಟನೆಗಳಿಗೂ ತಕ್ಷಣ ಪ್ರತಿಕ್ರಿಯಿಸುವ ಸುನಿಲ್ ಕುಮಾರ್ ತನ್ನ ಕ್ಷೇತ್ರದಲ್ಲೇ ಕೆಲವರು ಕಳೆದ 10 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತಿದ್ದರೂ ಪ್ರತಿಕ್ರಿಯಿಸಿ ಹಾಗೂ ಅವರನ್ನು ಭೇಟಿಯಾಗಲೂ ಬಂದಿಲ್ಲ ಎಂದು ದೂರಿದರು.

ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸಲು ಹೇಳಿದ್ದು, ತನಿಖೆಯಾದ ಬಳಿಕವಷ್ಟೇ ಕೆಲಸ ಮುಂದುವರಿಸಬಹುದು ಎಂದಿದ್ದಾರೆ ಎಂದು ಮುನಿಯಾಲು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸದಾಶಿವ ದೇವಾಡಿಗ, ದೀಪಕ್ ಕೋಟ್ಯಾನ್, ಸುಧೀರ್ ಕುಮಾರ್, ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X