ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

ಉಡುಪಿ, ಜ.5: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪುಸ್ತಕಗಳ ನೋಂದಣಿ ಕಾಯಿದೆ ಅನ್ವಯ 2025ನೇ ಸಾಲಿನಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ ಮೂರು ಪ್ರತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಮೊದಲ ಆವೃತ್ತಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
2025ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಸಲ್ಲಿಸಿ ಜನವರಿ 31ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿಯಾದ ಪುಸ್ತಕ ಗಳನ್ನು ಮಾತ್ರ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಆಯ್ಕೆಗೆ ಪರಿಗಣಿಸಲಿದೆ.
ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ - - ಆಯುಕ್ತರ ಕಚೇರಿ ದೂ.ಸಂಖ್ಯೆ: 080-22864990, 22867358, ರಾಜ್ಯ ಕೇಂದ್ರ ಗ್ರಂಥಾಲಯ ದೂ.ಸಂಖ್ಯೆ: 080-22212128 ಅಥವಾ ಮುಖ್ಯ ಗ್ರಂಥಾಲಯಾಧಿಕಾರಿ ಗಳ ಕಚೇರಿ, ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2523438 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.





