Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳಿಗೆ ಜ್ಞಾನದ ಜೊತೆ ಕೌಶಲ್ಯ, ಮೌಲ್ಯ...

ಮಕ್ಕಳಿಗೆ ಜ್ಞಾನದ ಜೊತೆ ಕೌಶಲ್ಯ, ಮೌಲ್ಯ ಕಲಿಸುವುದು ಅಗತ್ಯ: ಡಾ.ಗಣನಾಥ ಎಕ್ಕಾರ್

ವಾರ್ತಾಭಾರತಿವಾರ್ತಾಭಾರತಿ5 Sept 2023 6:56 PM IST
share
ಮಕ್ಕಳಿಗೆ ಜ್ಞಾನದ ಜೊತೆ ಕೌಶಲ್ಯ, ಮೌಲ್ಯ ಕಲಿಸುವುದು ಅಗತ್ಯ: ಡಾ.ಗಣನಾಥ ಎಕ್ಕಾರ್

ಉಡುಪಿ: ಮನಸ್ಸುಗಳೊಂದಿಗೆ ಕೆಲಸ ಮಾಡುವ ಶಿಕ್ಷಕರು ಸಮಾಜ ಕಟ್ಟುವ ಮತ್ತು ಬೆಳೆಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ. ಆದುದರಿಂದ ಮಕ್ಕಳಿಗೆ ಜ್ಞಾನದ ಜೊತೆ ಕೌಶಲ್ಯ ಮತ್ತು ಮೌಲ್ಯವನ್ನು ಕಲಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿದೆ. ಅಲ್ಲದೆ ಶಿಕ್ಷಕರಲ್ಲಿ ಅಧ್ಯಯನಶೀಲತೆ ಎಂಬುದು ಅತೀ ಮುಖ್ಯವಾಗಿರಬೇಕು ಎಂದು ಹಿರಿಯ ಚಿಂತಕ, ನಿಕಟಪೂರ್ವ ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಲಬಾರ್ ಗೋಲ್ಡ್‌ ನಲ್ಲಿ ಮಂಗಳವಾರ ಆಯೋಜಿಸಲಾದ ಶಿಕ್ಷಕರಿಗೆ ಸನ್ಮಾನ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಕಾಲ ಬದಲಾದಂತೆ ಶಿಕ್ಷಣ ಮತ್ತು ಶಿಕ್ಷಕರ ಸ್ವರೂಪ ಕೂಡ ಬದಲಾಗುತ್ತಿದೆ. ವಿದ್ಯಾರ್ಥಿಗಳನ್ನು ಸಶಕ್ತವಾಗಿ ಮುಂದಿನ ಬದುಕಿಗೆ ಸಿದ್ಧಗೊಳಿಸುವುದೇ ಶಿಕ್ಷಣದ ಕೆಲಸ. ಅದು ಸರಿಯಾದ ಜ್ಞಾನದಿಂದ ಮಾತ್ರ ಸಾಧ್ಯವಾಗುತ್ತದೆ. ಕೇವಲ ಪುಸ್ತಕ ಜ್ಞಾನ ಮಾತ್ರವಲ್ಲದೆ ಜಗತ್ತಿನ ವಿದ್ಯಾಮಾನ, ಸಾಮಾಜಿಕ, ರಾಜಕೀಯ, ಆರ್ಥಿಕ ಜ್ಞಾನ ಕೂಡ ಮುಖ್ಯ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಪಠ್ಯಪುಸ್ತಕದ ಬೋಧನೆ ಜೊತೆಗೆ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ. ಮಕ್ಕಳಲ್ಲಿ ಕಲೆ, ಸಂಸ್ಕೃತಿ, ಭಾಷೆಯ ಬಗ್ಗೆ ಅರಿವು ಮೂಡಿಸಬೇಕು. ಸಮಾಜದಲ್ಲಿನ ಮನಸ್ಸುಗಳನ್ನು ಒಡೆಯುವ ಬದಲು ಒಗ್ಗೂಡಿಸುವ ಕಾರ್ಯ ಮಾಡಬೇಕು. ಈ ಮೂಲಕ ಸೌಹಾರ್ದತಯುತ ಸಮಾಜ ನಿರ್ಮಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರುಗಳಾದ ಕರುಣಾಕರ ಬಂಗೇರ, ಅಸ್ಲಾಂ ಹೈಕಾಡಿ, ಕಿರಣ್ ಕುಮಾರ್ ಶೆಟ್ಟಿ, ಶಶಿಕಲಾ, ಎಚ್.ಸಖಾರಾಮ್, ವಸಂತಿ ಅಂಬಲ ಪಾಡಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ನಗರಸಭೆ ಸದಸ್ಯ ಡಿ.ಬಾಲಕೃಷ್ಣ ಶೆಟ್ಟಿ ಶುಭ ಹಾರೈಸಿದರು.

ಮಲಬಾರ್ ಗೋಲ್ಡ್‌ನ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಜಿಆರ್‌ಎಂ ರಾಘವೇಂದ್ರ ನಾಯಕ್, ಎಎಂಎಂ ತಂಝೀಮ್ ಶಿರ್ವ ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X