Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವಜನತೆಗೆ ಶಿಕ್ಷಣದ ಜೊತೆ ಉದ್ಯೋಗ...

ಯುವಜನತೆಗೆ ಶಿಕ್ಷಣದ ಜೊತೆ ಉದ್ಯೋಗ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ: ಡಾ.ಎಚ್.ಎಸ್.ಬಲ್ಲಾಳ್

ವಾರ್ತಾಭಾರತಿವಾರ್ತಾಭಾರತಿ18 May 2026 1:13 PM IST
share
ಯುವಜನತೆಗೆ ಶಿಕ್ಷಣದ ಜೊತೆ ಉದ್ಯೋಗ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ: ಡಾ.ಎಚ್.ಎಸ್.ಬಲ್ಲಾಳ್
ಕೊಡವೂರು ಮಹಾರುದ್ರಯಾಗ: ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ಉಡುಪಿ, ಮೇ 18: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಮೇಳವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್.ಬಲ್ಲಾಳ್ ಮಾತನಾಡಿ, ಧಾರ್ಮಿಕ ಕಾರ್ಯಕ್ರಮದ ಜೊತೆ ಪ್ರಸಾದ್‌ರಾಜ್ ಕಾಂಚನ್ ಯುವಜನತೆಗೆ ಅನುಕೂಲವಾಗುವ ಕಾರ್ಯ ಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ನಮ್ಮ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಶೇ.40ರಷ್ಟು 25ವರ್ಷ ಕೆಳಗಿನ ಯುವ ಜನತೆ ಇದ್ದಾರೆ. ಇವರೇ ನಮ್ಮ ದೇಶದ ಆಸ್ತಿಯಾಗಿದ್ದಾರೆ. ಇವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆ ಉದ್ಯೋಗ ಕೂಡ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಉತ್ತಮ ಉದ್ಯೋಗ ಸಿಕ್ಕಿದರೆ ಯುವಜನತೆಯ ಭವಿಷ್ಯ ಕೂಡ ಉತ್ತಮ ವಾಗಿರಲು ಸಾಧ್ಯವಾಗುತ್ತದೆ. ನಮ್ಮ ದೇಶದಲ್ಲಿ ಶೇ.70ರಷ್ಟು ಜನ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ಇವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವುದರಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಲಿಂಗ ಸಮಾನತೆ ಸಾಧಿಸಬಹುದು ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ವಹಿಸಿದ್ದ ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ಯುವಜನತೆ ಸರಿಯಾದ ಉದ್ಯೋಗ ಸಿಗದೆ ಹೊರರಾಜ್ಯ, ಹೊರ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮಲ್ಲಿನ ಪ್ರತಿಭೆಗಳಿಗೆ ನಮ್ಮಲ್ಲಿಯೇ ಉದ್ಯೋಗ ನೀಡುವುದರಿಂದ ನಮ್ಮ ಜಿಲ್ಲೆ ಆರ್ಥಿಕವಾಗಿ ಮತ್ತಷ್ಟು ಪ್ರಗತಿ ಸಾಧಿಸುತ್ತದೆ. ಈ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಉದ್ಯೋಗಾವಾಶಗಳ ಜೊತೆಗೆ ಸ್ಥಳೀಯವಾಗಿ ಬೇಡಿಕೆ ಇರುವ ಉದ್ಯಮ ಗಳ ಬಗ್ಗೆಯೂ ಯುವಜನತೆಗೆ ಮಾಹಿತಿ ನೀಡುವ ಕಾರ್ಯ ಮಾಡಲಾಗುತ್ತದೆ. ಕರಾವಳಿಯಲ್ಲಿ ಇದೀಗ ಪ್ರವಾಸೋದ್ಯಮ ಕ್ಷೇತ್ರ ತುಂಬಾ ವೇಗವಾಗಿ ಬೆಳೆಯುತ್ತಿದೆ. ಇದರಲ್ಲಿ ವಿಫುಲ ಅವಕಾಶ ಕೂಡ ಇದೆ. ಇದನ್ನು ನಮ್ಮ ಸ್ಥಳೀಯ ಯುವಜನತೆ ಬಳಸಿಕೊಂಡು ಅಭಿವೃದ್ಧಿ ಕಾಣಬೇಕು ಎಂದು ಅವರು ತಿಳಿಸಿದರು.

ಶ್ರೀನಿವಾಸ್ ಯೂನಿವರ್ಸಿಟಿ ಇದರ ಇಂಟರ್‌ನ್ಯಾಷನಲ್ ಕೊಲಾಬರೇಷನ್ಸ್ ನಿರ್ದೇಶಕಿ ಡಾ.ದಿವ್ಯಾರಾಣಿ ಪ್ರದೀಪ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಉದ್ಯೋಗ ಮೇಳ ಪ್ರಸಾದ್‌ರಾಜ್ ಕಾಂಚನ್ ಅವರ ಕನಸು ಆಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತರಿಗೆ ಉದ್ಯೋಗ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಇದರಲ್ಲಿ 70 ಕಂಪೆನಿಗಳು ಭಾಗವಹಿಸಿದ್ದು, ಸುಮಾರು 7000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಇದರಲ್ಲಿ ಸಂಜೆಯವರೆಗೆ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಎಚ್‌ಪಿಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ನ ಅಧ್ಯಕ್ಷ ಹರಿಪ್ರಸಾದ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಉಪಸ್ಥಿತರಿದ್ದರು. ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Tags

employmenteducationDr. H.S. Ballal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X