Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಗುವನ್ನು ಸತ್ಪ್ರಜೆಯಾಗಿ ರೂಪಿಸುವ...

ಮಗುವನ್ನು ಸತ್ಪ್ರಜೆಯಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದು: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ5 Sept 2024 8:58 PM IST
share
ಮಗುವನ್ನು ಸತ್ಪ್ರಜೆಯಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದು: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ: ಮಗುವೊಂದು ಅತ್ಯುತ್ತಮ ಪ್ರಜೆಯಾಗಿ ರೂಪುಗೊಳ್ಳು ವುದಕ್ಕೆ ಶಿಕ್ಷಕರು ಕಾರಣರಾಗುತ್ತಾರೆ. ಮಕ್ಕಳನ್ನು ಗಮ ನಿಸಿ ಎಲ್ಲರನ್ನೂ ಸಮಾನವಾಗಿ ನೋಡುವ ಹೊಣೆಗಾರಿಕೆಯೂ ಶಿಕ್ಷಕರ ಮೇಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ನಗರದ ಹೊಟೇಲ್ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲ ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಎಸ್ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿಅವರು ಮಾತನಾಡುತ್ತಿದ್ದರು.

ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಶಿಕ್ಷಕರ ದಿನಾಚರಣೆಯಂದು ಮಾತ್ರ ವಲ್ಲದೇ ಜೀವನದುದ್ದಕ್ಕೂ ನೆನೆಯುವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮಕ್ಕಳು ಪ್ರತಿದಿನವೂ ಶಿಕ್ಷಕ ದಿನವನ್ನಾಚರಿಸಬೇಕು. ಪ್ರತಿ ದಿನವೂ ಅವರಲ್ಲಿ ಆ ಸಂಭ್ರಮವಿರಬೇಕು ಎಂದ ಡಾ.ವಿದ್ಯಾ ಕುಮಾರಿ, ಯುವಜನತೆ ಅನೇಕ ದುಷ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಬಾಲ್ಯದಿಂದಲೇ ಅವರಿಗೆ ಜೀವನ ನಿರ್ವಹಣೆ ಆದರ್ಶವನ್ನು ಮನದಟ್ಟುಗೊಳಿಸಿ ಮಗುವಿನ ವ್ಯಕ್ತಿತ್ವದ ಜೊತೆಗೆ ದೇಶದ ಉತ್ತಮ ಪ್ರಜೆಯಾಗಿ ರೂಪಿಸುವ ಪವಿತ್ರ ಜವಾಬ್ದಾರಿಯೂ ಶಿಕ್ಷಕ ವೃತ್ತಿಯದಾಗಿದೆ ಎಂದರು.

ರಾಜ್ಯದಲ್ಲಿ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.೯೪ರಷ್ಟು ಫಲಿ ತಾಂಶ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಜಿಲ್ಲೆಯ ಪ್ರತಿಯೊಬ್ಬರಿಗೂ ಹೆಗ್ಗಳಿಕೆ ವಿಚಾರವಾ ಗಿದೆ. ಮುಂದಿನ ಬಾರಿ ಪ್ರತಿಶತಃ ನೂರರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರುಗಳು ಈಗಲೇ ಕಾರ್ಯಪ್ರವೃತ್ತ ರಾಗಬೇಕು ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜದಲ್ಲಿ ಗೌರವ ಇಟ್ಟುಕೊಂಡ ವ್ಯವಸ್ಥೆಯೆಂದರೆ ಶಿಕ್ಷಣ ಮತ್ತು ಶಿಕ್ಷಕರು. ವಿದ್ಯಾರ್ಥಿಗಳ ಏಳಿಗೆಯಲ್ಲಿ ತಮ್ಮ ಯಶಸ್ಸನ್ನು ಕಂಡುಕೊಳ್ಳುವ ಶಿಕ್ಷಕರು ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯದಿಂದಲೇ ಗುಣಮಟ್ಟದ ಶಿಸ್ತುಬದ್ದ ಶಿಕ್ಷಣ ವನ್ನು ಶಿಕ್ಷಕರು ನೀಡುತ್ತಾ ಬಂದಿದ್ದಾರೆ. ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವ ಜಿಲ್ಲೆ ಮುಂದಿನ ದಿನಗಳಲ್ಲಿಯೂ ಈ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಪ್ರಾಮಾಣಿಕ ವಾಗಿ ಶ್ರಮಿಸಬೇಕು ಎಂದರು.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿದರು.

ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಕರುಗಳು ಉತ್ತಮ ಶಿಕ್ಷಣವನ್ನು ನೀಡ ಬೇಕು ಎಂದರು. ಸಾಹಿತಿ, ಕಾರ್ಕಳದ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಸರಕಾರಿ ಪ್ರೌಢ, ಹಿರಿಯ ಹಾಗೂ ಕಿರಿಯ ಶಾಲಾ ಶಿಕ್ಷಕರುಗಳನ್ನು ಹಾಗೂ ಉಡುಪಿ ವಲಯದ ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ ಹಾಗೂ ಇತರರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರೆ, ನಾಗರಾಜ್ ಮತ್ತು ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಂದಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X