ಧಾರ್ಮಿಕ ಮುಂದಾಳು ಜಯಾನಂದ ಖಾರ್ವಿ ನಿಧನ

ಕುಂದಾಪುರ: ಸಂಘಟಕ ಹಾಗೂ ಧಾರ್ಮಿಕ ಮುಂದಾಳು ಮೂಲತಃ ಖಾರ್ವಿಕೇರಿ ಪ್ರಸ್ತುತ ಅಂಕದಕಟ್ಟೆ ನಿವಾಸಿ ಜಯಾನಂದ ಖಾರ್ವಿ (64) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಕುಂದಾಪುರ ಭಂಡಾರಕಾರ್ಸ್ ಕಾಲೇಜಿನಲ್ಲಿ ಪದವಿ ಪಡೆದು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಇವರು, 1980-90 ದಶಕದಲ್ಲಿ ರಾಜ್ಯಮಟ್ಟದ ವಾಲಿಬಾಲ್ ಆಟಗಾರರಾಗಿದ್ದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದು, ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ವಿದ್ಯಾರಂಗ ಮಿತ್ರ ಮಂಡಳಿಯ ವಿದ್ಯಾನಿಧಿ ಯೋಜನೆಯ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದರು. ಕುಂದೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ ಕೋಟೇಶ್ವರ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಕ್ರೀಯರಾಗಿದ್ದರು. ಮೃತರು ಪತ್ನಿ ಶಾರದಾ, ಪುತ್ರಿ ಭರತ್ ನಿಶಾನ್, ಪುತ್ರಿ ನಿಹಾರಿಕಾ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.