Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ...

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಕಳ ತಾಲೂಕು ಪುರಸಭಾ ವ್ಯಾಪ್ತಿಯ ಬಾಲಕರ ಕಬಡ್ಡಿ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ30 Aug 2026 2:39 PM IST
share
ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಕಳ ತಾಲೂಕು ಪುರಸಭಾ ವ್ಯಾಪ್ತಿಯ ಬಾಲಕರ ಕಬಡ್ಡಿ ಪಂದ್ಯಾಟ

ಕಾರ್ಕಳ : ಕ್ರೀಡಾ ಭಾರತಿ ಕಾರ್ಕಳ ತಾಲೂಕು ಹಾಗೂ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಗಳ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಕಳ ತಾಲೂಕು ಪುರಸಭಾ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕ್ರೀಡಾ ಭಾರತಿ ಅಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶ್ರೀಮದ್ ಭುವನೇಂದ್ರ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ್ ಹೆಗ್ಡೆ ಸಂಚಾಲಕ ನರೇಂದ್ರ ಕಾಮತ್ ಕೆ., ಆಡಳಿತ ಮಂಡಳಿ ನಿರ್ದೇಶಕ ಎಸ್ ನಿತ್ಯಾನಂದ ಪೈ, ಕ್ರೀಡಾ ಭಾರತಿ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಕಾಮತ್ , ಶ್ರೀಮದ್ ಭುವನೇಂದ್ರ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿಣಿ, ಕ್ರೀಡಾ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಪ್ರಸನ್ನ ಶೆಣೈ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು .

ಇದೇ ಸಂದರ್ಭದಲ್ಲಿ ಕ್ರೀಡಾ ಭಾರತಿ ಮೈಸೂರು ಮಹಾನಗರ ವಿಶ್ವ ಯೋಗ ದಿನದ ನಿಮಿತ್ತ ಆಯೋಜಿಸಿದ ರಾಜ್ಯಮಟ್ಟದ ಆನ್ಲೈನ್ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ಭುವನೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳನ್ನು ಮತ್ತು ವಲಯ ಮಟ್ಟದ ಕಬ್ಬಡಿ ಪಂದ್ಯಾಟದಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ದೈಹಿಕ ಶಿಕ್ಷಣ ಶಿಕ್ಷಕ ಚೇತನ್, ತರಬೇತುದಾರ ಶಶಿಧರ ಶೆಟ್ಟಿ ಇವರನ್ನು ಸಮ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಕ್ರೀಡಾ ಭಾರತಿ ಕಾರ್ಕಳ ತಾಲೂಕು ಕಾರ್ಯದರ್ಶಿ ಸಂಜಯ ಕುಮಾರ್ ನಿರೂಪಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ಸ್ವಾಗತಿಸಿದರು. ಶಿಕ್ಷಕಿ ವೀಣಾರವರು ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಧಾರಿಣಿ ಉಪಾಧ್ಯರವರು ವಂದೇ ಮಾತರಂ ಹಾಡಿದರು.

ಬಳಿಕ ಆಗಮಿಸಿದ ಹದಿನೇಳು ತಂಡಗಳ ನಡುವೆ ಕಬ್ಬಡಿ ಪಂದ್ಯಾಟ ಮುಂದುವರಿಯಿತು. ಪಂದ್ಯಾಕೂಟಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ಕ್ರೀಡಾ ಭಾರತಿ ಕಬಡ್ಡಿ ಆಯೋಜನಾ ಸಮಿತಿ ಅಧ್ಯಕ್ಷ, ಉಡುಪಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಆಗಮಿಸಿ ತಂಡಗಳ ವಿದ್ಯಾರ್ಥಿಗಳನ್ನು ಹಸ್ತಲಾಘನ ಮಾಡಿ ಶುಭ ಹಾರೈಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ಉದ್ಯಮಿ ಕಾರ್ಕಳ ಟೈಗರ್ಸ್ ಸಂಸ್ಥಾಪಕ ಬೋಳ ಪ್ರಶಾಂತ್ ಕಾಮತ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕ್ರೀಡಾ ಭಾರತಿ ಜಿಲ್ಲಾ ಅಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕ ನರೇಂದ್ರ ಕಾಮತ್ ಕೆ , ಆಡಳಿತ ಮಂಡಳಿ ನಿರ್ದೇಶಕರಾದ ಎಸ್ ನಿತ್ಯಾನಂದ ಪೈ , ಉಡುಪಿ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ , ಕ್ರೀಡಾ ಭಾರತಿ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಕಾಮತ್ ಕ್ರೀಡಾ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಪ್ರಸನ್ನ ಶೆಣೈ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿಣಿ ಉಪಸ್ಥಿತರಿದ್ದರು.

ಶಿಕ್ಷಕರಾದ ಗಣೇಶ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು. ದಿವ್ಯಕುಮಾರ್ ಸ್ವಾಗತಿಸಿದರು. ಇಂದಿರಾ. ಪಿ.ನಾಯಕ್ ಪಂದ್ಯ ವಿಜೇತ ವಿದ್ಯಾರ್ಥಿಗಳ ತಂಡಗಳ ಪಟ್ಟಿ ವಾಚಿಸಿದರು. ಕ್ರೀಡಾ ಭಾರತಿ ತಾಲೂಕು ಕಾರ್ಯದರ್ಶಿ ಸಂಜಯ ಕುಮಾರ ರವರು ಧನ್ಯವಾದವಿತ್ತರು.

ಕಬ್ಬಡಿ ಪಂದ್ಯಕೂಟದಲ್ಲಿ ಕಾರ್ಕಳ ಪುರಸಭಾ ವ್ಯಾಪ್ತಿಯ 13 ಶಾಲೆಗಳಿಂದ 17 ಬಾಲಕರ ತಂಡಗಳು ಭಾಗವಹಿಸಿದ್ದವು. ಪ್ರಾಥಮಿಕ ಶಾಲಾ ಬಾಲಕರ 14 ರ ವಯೋಮಿತಿಯಲ್ಲಿ ನಡೆದ ಪಂದ್ಯದಲ್ಲಿ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ಪ್ರಥಮ ಸ್ಥಾನ, ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ ದ್ವಿತೀಯ ಸ್ಥಾನವನ್ನು ಪಡೆಯಿತು.

ಪ್ರೌಢ ಶಾಲಾ ಬಾಲಕರ 17 ರ ವಯೋಮಾನದ ವಿಭಾಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಪ್ರಥಮ ಸ್ಥಾನ ಹಾಗೂ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ದ್ವಿತೀಯ ಸ್ಥಾನವನ್ನು ಪಡೆಯಿತು. ವಿಜೇತ ತಂಡಗಳಿಗೆ ಪ್ರಶಸ್ತಿ ಫಲಕ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಪಂದ್ಯಾಟಕ್ಕೆ ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ಚೇತನ್ , ಶಶಿಧರ್ ಶೆಟ್ಟಿ , ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ , ರಾಜ್ಯ ಮಟ್ಟದ ಕಬಡ್ಡಿ ಆಟಗಾರರಾದ ಅನ್ವಿತ, ಪ್ರೇಕ್ಷಾ, ಜ್ಯೋತಿ, ಸಾಕ್ಷಿ ಹಾಗೂ ಭುವನೇಂದ್ರ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ತಾರಾನಾಥ್ ಶೆಟ್ಟಿ ಹಾಗೂ ಕ್ರೀಡಾ ಭಾರತಿ ತಾಲೂಕು ಕಾರ್ಯದರ್ಶಿ ಸಂಜಯ್ ಕುಮಾರ ಹಾಗೂ ವಿದ್ಯಾ ಸಂಸ್ಥೆಯ ಶಿಕ್ಷಕ ಹಾಗೂ ಶಿಕ್ಷಕೇತರ ಬಂಧುಗಳು ಸಂಪೂರ್ಣ ಸಹಕರಿಸಿದರು.

Tags

Kabaddi tournamentKarkalaNational Sports Day celebrations
share
ವಾರ್ತಾಭಾರತಿ
ವಾರ್ತಾಭಾರತಿ
Next Story
X