Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಡಹಬ್ಬ ದಸರಾದಲ್ಲಿ ಕಂಬಳ ಆಯೋಜನೆ...

ನಾಡಹಬ್ಬ ದಸರಾದಲ್ಲಿ ಕಂಬಳ ಆಯೋಜನೆ ದುಂದುವೆಚ್ಚ ಎನ್ನುವುದಾದರೆ ಕೋಟಿಕಂಠ ಗಾಯನ, ಕಾರ್ಕಳ ಉತ್ಸವ, ದುಂದು ವೆಚ್ಚವಲ್ಲವೇ?: ಶುಭದ ರಾವ್

ವಾರ್ತಾಭಾರತಿವಾರ್ತಾಭಾರತಿ18 July 2026 4:11 PM IST
share
ನಾಡಹಬ್ಬ ದಸರಾದಲ್ಲಿ ಕಂಬಳ ಆಯೋಜನೆ ದುಂದುವೆಚ್ಚ ಎನ್ನುವುದಾದರೆ ಕೋಟಿಕಂಠ ಗಾಯನ, ಕಾರ್ಕಳ ಉತ್ಸವ, ದುಂದು ವೆಚ್ಚವಲ್ಲವೇ?: ಶುಭದ ರಾವ್

ಕಾರ್ಕಳ: ಕಾನೂನು ತೊಡಕಿನಿಂದ ನಿಂತೇ ಹೋಗುತ್ತದೆ ಎನ್ನುವ ಆತಂಕದಲ್ಲಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವು ಪುನಃ ಪ್ರಾರಂಭವಾಗಿ ಜನಪ್ರಿಯತೆ ಪಡೆದು ನಾಡ ಹಬ್ಬ ದಸರಾದಲ್ಲಿ ಆಯೋಜಿಸಲು ಅವಕಾಶ ಸಿಕ್ಕಿರುವುದು ತುಳುನಾಡಿನ ಜನತೆಗೆ ಹಾಗೂ ಕಂಬಳ ಪ್ರೀಯರಿಗೆ ಹೆಮ್ಮೆಯ ವಿಚಾರವಾಗಿದೆ. ಆದರೆ ಈ ವಿಚಾರವಾಗಿ ಶಾಸಕ ಸುನೀಲ್ ಕುಮಾರ್ ರವರ ಅಪಸ್ವರ ರಾಜಕೀಯ ಪ್ರೇರಿತವಾದದು ಸ್ವತಃ ಕಂಬಳ ಸಮಿತಿಯ ಅಧ್ಯಕ್ಷನಾಗಿ ಕಂಬಳ ಆಯೋಜನೆಗೆ ವಿರೋದ ವ್ಯಕ್ತಪಡಿಸಿರುವುದು ವಿಷಾದನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಿಯಾರು ಕಂಬಳ ಸಮಿತಿ ಸದಸ್ಯ ಶುಭದರಾವ್ ಹೇಳಿದ್ದಾರೆ.

ಮೈಸೂರು ದಸರಾ ಹಬ್ಬವು ರಾಜ್ಯದ ಹೆಮ್ಮೆಯ ದ್ಯೋತಕವಾಗಿದ್ದು ಈ ಸಂದರ್ಭದಲ್ಲಿ ಕಂಬಳ ಕ್ರೀಡಾಕೂಟವನ್ನು ಆಯೋಜನೆ ಮಾಡುವುದರಿಂದ ಕಂಬಳ ಕ್ರೀಡೆಗೆ ಇನ್ನಷ್ಟು ಮೆರುಗು ಸಿಗಲಿದೆ, ದೇಶದ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ವಿವಿಧ ರಾಜ್ಯಗಳ ಸಾಂಸ್ಕೃತಿಕ ಮತ್ತು ಕಲಾ ಹೆಗ್ಗುರುತುಗಳನ್ನು ಪ್ರದರ್ಶಿಸಿದಂತೆ ಮೈಸೂರು ದಸರಾದ ಸಂದರ್ಭದಲ್ಲಿ ನಾಡಿದ ಕಲೆ ಸಂಸ್ಕೃತಿಯನ್ನು ಬಿಂಬಿಸುವ ಪದ್ಧತಿ ಹಿಂದಿನಿಂದಲೂ ನಡೆದು ಬಂದಿದೆ ಅದೇ ಮಾನದಂಡದೊಂದಿಗೆ ದಸಾರದಲ್ಲಿ ಕಂಬಳ ಆಯೋಜನೆಯಿಂದ ತುಳುನಾಡಿನ ಸಂಸ್ಕೃತಿಯ ಪರಿಚಯ ವಿಶ್ವದೆಲ್ಲೆಡೆ ತಲುಪಿ ಇನ್ನೂ ಹೆಚ್ಚು ಜನಪ್ರಿಯತೆ ಪಡೆಯಲು ಅವಕಾಶವಾಗಿದೆ ಎಂದರು.

ಶಾಸಕರ ನಿಲುವು ಕಂಬಳ ಕ್ರೀಡೆಗೆ ಮಾಡುವ ಅವಮಾನವಾಗಿದೆ. ಮೈಸೂರಿನಲ್ಲಿ ಕಂಬಳ ಯೋಜನೆಗೆ ತಗಲುವ ಖರ್ಚು ದುಂಡು ವೆಚ್ಚ ಎನ್ನುವುದಾದರೆ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಅಯೋಜಿಸಿದ್ದ ಕೋಟಿ ಕಂಠ ಗಾಯನ, ಪರಶುರಾಮನ ನಕಲಿ ಪ್ರತಿಮೆ ಉದ್ಘಾಟನೆ, ಹಾಗೂ ತನ್ನ ವೈಭವಿಕರಣಕ್ಕೆ ಆಯೋಜಿಸಿದ್ದ ಕಾರ್ಕಳ ಉತ್ಸವ ಮೊದಲಾದ ಕಾರ್ಯಕ್ರಮಗಳಿಗೆ ಮಾಡಿದ ಖರ್ಚು ದುಂದು ವೆಚ್ಚವಲ್ಲವೇ? ರಾಜ್ಯ ಸರಕಾರ ಇತರ ಕಂಬಳಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಮೊಸಳೆ ಕಣ್ಣೀರು ಸುರಿಸುವ ತಾವು ಸಚಿವರಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ?

ಕರಾವಳಿಯ ಗಂಡು ಕಲೆ ಯಕ್ಷಗಾನ, ಹುಲಿ ಕುಣಿತ, ಆಟಿಯ ಕೂಟ, ಆಟಿಯ ಆಹಾರ ಮೊದಲಾದ ಕಾರ್ಯಕ್ರಮಗಳು ತುಳುನಾಡಿನ ಗಡಿದಾಟಿ ವಿಶ್ವದಾದ್ಯಂತ ಪ್ರದರ್ಶನವಾಗುತ್ತದೆ ಮತ್ತು ಆಚರಿಸಲ್ಪಡುತ್ತದೆ, ಈ ಬಗ್ಗೆ ನಾವೆಲ್ಲರೂ ಹೆಮ್ಮೆಪಟ್ಟು ಪ್ರೋತ್ಸಾಹಿಸಬೇಕು ಈ ಹಿಂದೆಯೂ ಬೆಂಗಳೂರಿನಲ್ಲಿಯೂ ಕಂಬಳ ಆಯೋಜನೆಯಾಗಿತ್ತು ಹೀಗಿರುವಾಗ ಸಂಕುಚಿತ ಮನೋಭಾವ ಸಲ್ಲದು ಎಂದು ಹೇಳಿದ್ದಾರೆ

ಕಾರ್ಕಳ ಮಿಯ್ಯಾರು ಕಂಬಳವು ಕಾಂಗ್ರೆಸ್ ಶಾಸಕ ದಿ.ಗೋಪಾಲ್ ಭಂಡಾರಿಯವರ ಶತಪ್ರಯತ್ನದ ಫಲ, ಸರಕಾರಿ ಕಂಬಳವನ್ನು ಮೊದಲ ಬಾರಿಗೆ ಪ್ರಾರಂಬಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ, ತಾವು ಆ ಕಂಬಳ ಸಮಿತಿಯ ಅಧ್ಯಕ್ಷರಾದ ಕಾರಣ ನಿಮ್ಮ ಗೌರವ ಹೆಚ್ಚಿದೆ ಎನ್ನುವುದನ್ನು ಮರೆಯದಿರಿ ಕಂಬಳವನ್ನು ವಿರೋಧಿಸುವ ಮನಸ್ಥಿತಿಯನ್ನು ಬಿಟ್ಟು ಪ್ರೋತ್ಸಾಹಿಸುವ ಮನೋಭಾವವನ್ನು ಬೆಳೆಸಿಕೊಳ್ಳಿ ಎಂದು ಶುಭದ ರಾವ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags

KambalaShubhada rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X