Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕನಕದಾಸರ ಆದರ್ಶ ಈ ನೆಲದಲ್ಲಿ ಇನ್ನೂ...

ಕನಕದಾಸರ ಆದರ್ಶ ಈ ನೆಲದಲ್ಲಿ ಇನ್ನೂ ಸಾಕಾರಗೊಂಡಿಲ್ಲ: ಡಾ.ಮಹಾಬಲೇಶ್ವರ ರಾವ್

ವಾರ್ತಾಭಾರತಿವಾರ್ತಾಭಾರತಿ8 Nov 2025 7:22 PM IST
share
ಕನಕದಾಸರ ಆದರ್ಶ ಈ ನೆಲದಲ್ಲಿ ಇನ್ನೂ ಸಾಕಾರಗೊಂಡಿಲ್ಲ: ಡಾ.ಮಹಾಬಲೇಶ್ವರ ರಾವ್

ಉಡುಪಿ: ಕುಲಕ್ಕಿಂತ ಮಿಗಿಲಾದುದು ಭಕ್ತಿ, ಮಾನವೀಯತೆ ಎಂಬುದನ್ನು ಕನಕದಾಸರು ಪ್ರತಿಪಾದಿಸಿದರು. ಆದರೆ ಇಂದಿನ ವಿದ್ಯಾವಂತ ಸಮಾಜದಲ್ಲಿ ಜಾತೀಯತೆ ಕಡಿಮೆ ಆಗುವ ಬದಲು ಜಾತಿ ಜಾತಿಗಳ ಮಧ್ಯೆ ಫೈಪೋಟಿ ಹೆಚ್ಚಾಗುತ್ತಿದೆ. ಜಾತಿಯ ಹೆಸರಿನಲ್ಲಿ ಇನ್ನೊಂದು ಜಾತಿಯ ಬಗ್ಗೆ ಧ್ವೇಷ, ಅಸಹನೆ ಮೂಡಿಸಲಾಗುತ್ತಿದೆ. ಇದರಿಂದ ಈ ನೆಲದಲ್ಲಿ ಕನಕದಾಸರ ಆದರ್ಶವು ನಿಜವಾಗಿಯೂ ಸಕಾರಗೊಂಡಿಲ್ಲ ಎಂದು ಅನಿಸುತ್ತದೆ ಎಂದು ಹಿರಿಯ ಸಾಹಿತಿ ಡಾ.ಮಹಾಬಲೇಶ್ವರ ರಾವ್ ಹೇಳಿದ್ದಾರೆ.

ಉಡುಪಿ ಕನಕದಾಸ ಅಧ್ಯಯನ ಸಂಶೋಧನ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಶ್ರಯದಲ್ಲಿ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಕನಕ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಉಡುಪಿ ಜನ ಕನಕನನ್ನು ಮರೆತೇ ಬಿಟ್ಟಿದ್ದಾರೆ. ಕನಕ ಬಗ್ಗೆ ಪ್ರೀತಿ ಇದಿದ್ದರೆ ಧಾರ್ಮಿಕ ಜೀವನದಲ್ಲಿ ಈ ರೀತಿಯ ಆಡಂಬರ ಇರುತ್ತಿರಲಿಲ್ಲ. ಧಾರ್ಮಿಕ ಕೇಂದ್ರಗಳು ಇಂದು ವ್ಯಾಪಾರೀ ಕೇಂದ್ರಗಳಾಗಿವೆ. ಆಡಂಬರವೇ ಪ್ರಧಾನವಾಗಿ ಆಧ್ಯಾತ್ಮಿಕ ಸಂಪೂರ್ಣ ಸೊರಗಿ ಹೋಗಿದೆ. ದೇವಾಲಯಗಳ ವಿಚಾರದಲ್ಲಿ ಕಟ್ಟುಕಥೆಗಳು, ಸ್ಥಳ ಪೂರಾಣಗಳದ್ದೇ ಪ್ರಾಬಲ್ಯ ಹೆಚ್ಚಾಗುತ್ತಿದೆ. ಅದಕ್ಕೆ ಬದಲಾಗಿ ಯುವಜನ ಐತಿಹಾಸಿಕದ ಬಗ್ಗೆ ಹೆಚ್ಚು ಗಮನಕೊಡಬೇಕು ಎಂದು ಅವರು ತಿಳಿಸಿದರು.

‘ದಾಸ ಪರಂಪರೆಯ ಅನನ್ಯ ಚೇತನ ಕನಕದಾಸರು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಮಂಗಳೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಆರ್. ನರಸಿಂಹಮೂರ್ತಿ ಮಾತನಾಡಿ, 570 ವರ್ಷಗಳ ಹಿಂದೆ ಮನುಷ್ಯರಿಗೆ ಬೇಕಾದ ನೀತಿ ಮಾರ್ಗವನ್ನು ಪ್ರತಿಪಾದಿಸಿ, ಜೀವನದ ಎಲ್ಲ ಕಷ್ಟಗಳನ್ನು ಮೆಟ್ಟಿ ನಿಂತು ಲೋಕದ ಜನರ ಕಲ್ಯಾಣಾರ್ಥವಾಗಿ ಊರು ಸುತ್ತಿ ಜೀವನ ನಡೆಸಿದ ಕನಕದಾಸರು ಇಂದಿಗೂ ಅತ್ಯಂತ ಪ್ರಸ್ತುತ ಹಾಗೂ ಶ್ರೇಷ್ಟ ಎನಿಸಿ ಕೊಳ್ಳುತ್ತಿದ್ದಾರೆ ಎಂದರು.

ಐದು ಶತಮಾನಗಳ ಕಾಲ ನಾನಾ ರೀತಿ ಸಂವಾದ, ಚರ್ಚೆಗಳಿಗೆ ಗ್ರಾಸವಾಗಿರುವ ಅವರು, ಸುಧೀರ್ಘ ಜೀವನವನ್ನು ಅರ್ಥಪೂರ್ಣವಾಗಿ ನಡೆಸಿ ಮಾದರಿಯಾಗಿರುವ ಕನಕರನ್ನು ಸ್ಮರಿಸುವುದು ಇಂದಿನ ಅಗತ್ಯ. ಅವರ ಕಾರ್ಯವನ್ನು ಮತ್ತೊಮ್ಮೆ ಪುನರ್ ಪರಿಶೀಲನೆ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಕನಕದಾಸರು ಕೀರ್ತನೆ ಮಾತ್ರವಲ್ಲದೆ ಸಾಹಿತ್ಯ ಕೃತಿಗಳನ್ನು ಮತ್ತು ಕಾವ್ಯಗಳನ್ನು ರಚಿಸಿದ್ದರು. ಕನಕದಾಸರು ಕೀರ್ತನೆಗಳನ್ನು ಶಾಸ್ತ್ರೀಯ ಸಂಗೀತ, ಕಾವ್ಯಕ್ಕೆ ಒಗ್ಗುವ ಹಾಗೆ ರಚಿಸಿರುವುದು ವಿಶೇಷ. ಆ ಮೂಲಕ ಕನಕರ ಕೀರ್ತನೆಗಳಲ್ಲಿ ಕಾವ್ಯಗಳನ್ನು ಕಾಣಬಹುದಾಗಿದೆ. ಅಂತಹ ವಿಶಿಷ್ಟವಾದ ಕವಿ ಎಂದು ಅವರು ಹೇಳಿದರು.

ಎಂಜಿಎಂ ಕಾಲೇಜಿನ ಗಾಂಧಿಯನ್ ಸೆಂಟರ್ ಮುಖ್ಯಸ್ಥ ವಿನೀತ್ ರಾವ್ ಮಾತನಾಡಿದರು. ಈ ಸಂದರ್ಭದಲ್ಲಿ ಕನಕ ಕೀರ್ತನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಉಡುಪಿ ಕನಕದಾಸ ಅಧ್ಯಯನ ಸಂಶೋಧನ ಪೀಠದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಸಹ ಸಂಶೋಧಕ ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನಾ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಂದ ಕನಕ ಕೀರ್ತನೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X