ಡಿ.10ರಿಂದ ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿ : ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನಿಂದ ಪ್ರಾರಂಭ

ಉಡುಪಿ, ಡಿ.9: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ಶಿಪ್ ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ನಡೆಯುವ ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿಯ ಉದ್ಘಾಟನಾ ಸಮಾರಂಭ ಡಿ.10ರ ಗುರುವಾರ ಅಪರಾಹ್ನ 3:00 ಗಂಟೆಗೆ ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್ ನ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ನಾಯಕ್ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿುಟೆಡ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹರಿಕುಮಾರ್ ಎ, ಮುಖ್ಯ ಹಣಕಾಸು ಅಧಿಕಾರಿ ಶಂಕರ್ ನಟರಾಜ್, ಉಪಪ್ರಧಾನ ವ್ಯವಸ್ಥಾಪಕ ಎಂ ಅಂಬಲವನನ್ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.





