ಕಾಪು| ಕೊಪ್ಪಲಂಗಡಿ ಬಳಿ ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ಪಾದಚಾರಿ ಮೃತ್ಯು

ಕಾಪು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದಲ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ 3.30ರ ಸುಮಾರಿಗೆ ಕಾಪು ಸಮೀಪದ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಅತೀವೇಗದಿಂದ ಬಂದು ರಸ್ತೆ ದಾಟಲು ನಿಂತಿದ್ದ ಪೀರು ಸಾಹೇಬ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಮೃತರನ್ನು ಆಸ್ಪತ್ರೆಗೆ ಸಾಗಿಸಲು ಉಡುಪಿ ಎಸ್‌ಡಿಪಿಐ ಅಂಬ್ಯುಲೆನ್ಸ್ ಸಹಕರಿಸಿತು. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





