ಕಾಪು | ಬಸ್ ನಿಲ್ದಾಣಕ್ಕೆ ಕಾರು ಢಿಕ್ಕಿ: ಚಾಲಕನಿಗೆ ತೀವ್ರ ಗಾಯ

ಕಾಪು, ಡಿ.7: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಜಲಾಲುದ್ದೀನ್ ಉಚ್ಚಿಲ ಹಾಗೂ ಹಮೀದ್ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





