ಕಾಪು | ಗೂಡ್ಸ್ ಟೆಂಪೋ ಅಪಘಾತ : ನಾಲ್ವರು ಮೃತ್ಯು, 5 ಮಂದಿಗೆ ಗಾಯ

ಕಾಪು, ನ.30: ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ.
ಇದರಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟರೆಂದು ತಿಳಿದು ಬಂದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





