Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು ಭೀಕರ ರಸ್ತೆ ಅಪಘಾತ ಪ್ರಕರಣ :...

ಕಾಪು ಭೀಕರ ರಸ್ತೆ ಅಪಘಾತ ಪ್ರಕರಣ : ಮೃತರೆಲ್ಲರೂ ಉತ್ತರ ಭಾರತದ ಕಾರ್ಮಿಕರು !

ವಾರ್ತಾಭಾರತಿವಾರ್ತಾಭಾರತಿ30 Nov 2025 7:08 PM IST
share
ಕಾಪು ಭೀಕರ ರಸ್ತೆ ಅಪಘಾತ ಪ್ರಕರಣ : ಮೃತರೆಲ್ಲರೂ ಉತ್ತರ ಭಾರತದ ಕಾರ್ಮಿಕರು !
ಏಳು ಮಂದಿ ಗಾಯಾಳುಗಳಿಗೆ ಚಿಕಿತ್ಸೆ: ಆಸ್ಪತ್ರೆಗೆ ಶಾಸಕರು, ಮಾಜಿ ಸಚಿವರು ಭೇಟಿ

ಉಡುಪಿ, ನ.30: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉಳಿಯಾರ ಗೋಳಿ ಗ್ರಾಮದ ಕೋತಲ್‌ಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.30ರಂದು ಸಂಜೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟೆಂಪೋದಲ್ಲಿದ್ದ ಐವರು ಉತ್ತರ ಭಾರತದ ಕಾರ್ಮಿಕರು ದಾರುಣವಾಗಿ ಮೃತಪಟ್ಟು, 7 ಮಂದಿ ತೀವ್ರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಮದುವೆ ಸಮಾರಂಭಗಳಿಗೆ ಡೆಕರೋಷನ್ ಸಂಬಂಧಿಸಿದ ಕಬ್ಬಿಣದ ಸಲಕರಣೆಗಳನ್ನು ಸಾಗಿಸುತ್ತಿದ್ದ 407 ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿ ಬಿದ್ದು ಈ ಅಪಘಾತ ಸಂಭವಿಸಿದೆ. ಮೃತರನ್ನು ಅಸ್ಸಾಂ ರಾಜ್ಯದ ಪಪ್ಪು ರವಿದಾಸ್(28), ಹರೀಶ್(27), ತ್ರಿಪುರಾದ ಗಪುನಾಥ್(50), ಪಶ್ಚಿಮ ಬಂಗಾಳ ರಾಜ್ಯದ ಕಮಲ್, ಸಮರೇಶ್ ಎಂದು ಗುರುತಿಸಲಾಗಿದೆ.

ಗಾಯಾಳುಗಳಾದ ಚಾಲಕ ಕೊತಲ್‌ಕಟ್ಟೆಯ ರಂಜಿತ್ ಅಮೀನ್(33), ಅಸ್ಸಾಂ ರಾಜ್ಯದ ಗಣೇಶ್ ಬಹುದ್ದೂರು ರಾಯ್(36), ಸುಬೋ ಬೇರಾ ಪಶ್ಚಿಮ ಬಂಗಾಳದ ಪ್ರಭಾಸ್ ರಾಯ್(26), ಗೋಪಾಲ ಬೌಮಿಕ್(18), ಸೂರಜ್ ದೊಲಾಯಿ(18), ಸುಬ್ರಾದೋ(20), ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಲಸೆ ಕಾರ್ಮಿಕರೆಲ್ಲರೂ ಕಾಪುವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದಾರೆ.

ನಿಯಂತ್ರಣ ತಪ್ಪಿದ ಟೆಂಪೋ :

ಮಜೂರಿನ ಪ್ರಸನ್ನ ಶೆಟ್ಟಿ ಎಂಬವರಿಗೆ ಸೇರಿದ ಮದುವೆ ಡೆಕೋರೇಶನ್‌ಗೆ ಸಂಬಂಧಿಸಿದ ಸಲಕರಣೆಗಳನ್ನು ಮಜೂರಿನಿಂದ ಮಲ್ಪೆ ಕಡೆಕಾರಿಗೆ ಟೆಂಪೋದಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಕಡೆಕಾರಿನ ರೆಸಾರ್ಟ್‌ನಲ್ಲಿ ಮದುವೆ ಆರಕ್ಷತೆ ಕಾರ್ಯಕ್ರಮಕ್ಕೆ ಈ ಸೊತ್ತುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ದಾರಿ ಮಧ್ಯೆ ಚಾಲಕ ಎದುರಿನಲ್ಲಿ ಹೋಗುತ್ತಿದ್ದ ಬಸ್ಸನ್ನು ಓವರ್‌ಟೇಕ್ ಮಾಡಿ ಮುಂದೆ ಸಾಗಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಎಡ ಬದಿಯ ಡಿವೈಡರ್ ಮೇಲೆ ಹತ್ತಿ ಇನ್ನೊಂದು ಬದಿಯ ಸರ್ವಿಸ್ ರಸ್ತೆಯಲ್ಲಿ ಹೋಗಿ ಪಲ್ಟಿಯಾಯಿತ್ತೆನ್ನಲಾಗಿದೆ. ಇದರ ಪರಿಣಾಮ ಟೆಂಪೋದ ಹಿಂಬದಿಯಲ್ಲಿ ಕಬ್ಬಿಣದ ಸಲಕರಣೆಗಳ ಮಧ್ಯೆ ನಿಂತಿದ್ದ ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡರೆಂದು ತಿಳಿದುಬಂದಿದೆ.

ಇವರನ್ನು ಕೂಡಲೇ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದರು. ಇದರಲ್ಲಿ ನಾಲ್ವರು ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಹಾಗೂ ಓರ್ವ ಉಡುಪಿ ಹೈಟೆಕ್ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಗಾಯಾಳುಗಳ ಪೈಕಿ ಆರು ಮಂದಿ ಆದರ್ಶ ಆಸ್ಪತ್ರೆಯಲ್ಲಿ, ಓರ್ವ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ದಿನಗೂಲಿ ಕಾರ್ಮಿಕರು :

ಇವರೆಲ್ಲ ದಿನಗೂಲಿ ಕಾರ್ಮಿಕರಾಗಿದ್ದಾರೆ. ಇವರನ್ನು ಬೆಳಗ್ಗೆ ಕಾಪು ಪೇಟೆಯಿಂದ ಕೆಲಸಕ್ಕೆಂದು ಕರೆದುಕೊಂಡು ಬರಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಸಾಕಷ್ಟು ಕಾರ್ಯಕ್ರಮಗಳಿದ್ದ ಕಾರಣ, ಚಾಲಕನಿಗೂ ಸರಿಯಾದ ನಿದ್ದೆ ಇರಲಿಲ್ಲ ಎನ್ನಲಾಗಿದೆ.

ಆಸ್ಪತ್ರೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ, ಕಾಪು ಪೊಲೀಸ್ ಠಾಣಾಧಿಕಾರಿ ತೇಜಸ್ವಿನಿ, ಪಡುಬಿದ್ರಿ ಠಾಣಾ ಎಸ್ಸೈ ಸಕ್ತಿವೇಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಶವಗಾರದಲ್ಲಿ ಸಾಗಿಸಿ ಇಡಲಾಯಿತು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

‘ನನ್ನ ಕ್ಷೇತ್ರದಲ್ಲಿ ಈ ದುರಂತ ಸಂಭವಿಸಿದೆ. ತುಂಬಾ ನೋವು ತಂದಿದೆ. ಐವರು ಕಾರ್ಮಿಕರು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಇವರೆಲ್ಲರೂ ಹೊಟ್ಟೆಪಾಡಿಗಾಗಿ ದೂರ ಊರುಗಳಿಂದ ಬಂದವರು. ಇವರನ್ನು ಟೆಂಪೋದಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ’

-ಗುರ್ಮೆ ಸುರೇಶ್ ಶೆಟ್ಟಿ, ಶಾಸಕರು, ಕಾಪು

‘ಈ ಅಪಘಾತದಿಂದ ಐವರು ಕಾರ್ಮಿಕರು ಜೀವ ಕಳೆದುಕೊಂಡಿರುವುದು ತುಂಬಾ ನೋವು ತಂದಿದೆ. ಪೊಲೀಸ್ ವರದಿಯ ಆಧಾರದಂತೆ ಮೃತರ ಕುಟುಂಬಗಳಿಗೆ ಸರಕಾರದಿಂದ ಪರಿಹಾರ ಒದಗಿಸಲು ಪ್ರಯತ್ನ ಮಾಡಲಾಗುವುದು’

-ವಿನಯ ಕುಮಾರ್ ಸೊರಕೆ, ಮಾಜಿ ಸಚಿವರು

ಉಡುಪಿ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಗಳು!

2007 ಮೇ 28 : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮೂಳೂರು ಸಮೀಪ ಖಾಸಗಿ ಬಸ್ ಮತ್ತು ಮ್ಯಾಕ್ಸಿಕ್ಯಾಬ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ 17 ಮಂದಿ ಮೃತ್ಯು

2016 ಜೂ.21: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಸಮೀಪದ ಮೊವಾಡಿ ಕ್ರಾಸ್‌ನಲ್ಲಿ ಶಾಲಾ ವಾಹನ ಓಮ್ನಿ ಕಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಶಾಲಾ ಮಕ್ಕಳು ಮೃತ್ಯು.

2020 ಫೆ.15: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳ ಮೂಳ್ಳೂರು ಘಾಟಿಯಲ್ಲಿ ಬಸ್ ರಸ್ತೆ ಬದಿಯ ಬಂಡೆಗೆ ಢಿಕ್ಕಿ ಹೊಡೆದ ಪರಿಣಾಮ ಒಂಭತ್ತು ಮಂದಿ ಮೃತ್ಯು

2022 ಜು.20: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಟೋಲ್ ಫ್ಲಾಜಾದಲ್ಲಿ ಅಂಬುಲೈನ್ಸ್ ಅಪಘಾತಕ್ಕೀಡಾಗಿ ರೋಗಿ ಸಹಿತ ನಾಲ್ವರು ಮೃತ್ಯು.

2024 ಸೆ.30: ಕಾರ್ಕಳ ಗ್ರಾಮಾಂತ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರು ಗ್ರಾಮದ ಪಾಜಿಗುಡ್ಡೆ ಎಂಬಲ್ಲಿ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ತಂದೆ ಮೂವರು ಮಕ್ಕಳು ಸಹಿತ ಒಟ್ಟು ನಾಲ್ವರು ಮೃತ್ಯು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X