ಕಾಪು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಕಾಪು, ಆ.28: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಇನ್ನಂಜೆ ಎಸ್ವಿಎಚ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಇನ್ನಂಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.
ಪಂದ್ಯಾಟವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಎಸ್.ವಿ.ಎಚ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನ ಕುಮಾರ್, ಉಡುಪಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಧಾಕೃಷ್ಣ ಎಸ್. ಐತಾಳ್, ಉದಯ್ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಪ್ರಾಂಶುಪಾಲ ರಾಜೇಂದ್ರ ಪ್ರಭು, ದೈಹಿಕ ಶಿಕ್ಷಕ ನವೀನ್ ಶೆಟ್ಟಿ ಉಪಸ್ಥಿತರಿದ್ದರು.
Next Story




